ಬೆಂಗಳೂರು: ಕಸ್ತೂರಿ ರಂಗನ್ ವರದಿಗೆ (Kasturirangan Report) ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹೊರಡಿಸಿರುವ ಅಧಿಸೂಚನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ (Supreme Court) ರಾಜ್ಯದ ಸ್ಪಷ್ಟ ಅಭಿಪ್ರಾಯ ಮಂಡಿಸಲು ಹಿರಿಯ ವಕೀಲರನ್ನು ನೇಮಿಸಲಾಗುವುದು ಎಂದು ಸಿಎಂ ಡಿಕೆ ಶಿವಕುಮಾರ್ (DK Shivakumar) ತಿಳಿಸಿದರು.
ಮಂಗಳವಾರ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿಗೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ಸಿಎಂ ಉತ್ತರಿಸಿದರು. ನನಗಿರುವ ಮಾಹಿತಿಯ ಪ್ರಕಾರ, ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿಯು ಕಸ್ತೂರಿ ರಂಗನ್ ವರದಿ ಜಾರಿ ಹಿನ್ನೆಲೆ ಕೇಂದ್ರ ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸುವ ತೀರ್ಮಾನ ಕೈಗೊಳ್ಳುವಂತೆ ನಿರ್ದೇಶನ ನೀಡಿದೆ. ಅಧಿಸೂಚನೆ ಹೊರಡಿಸಿದ ನಂತರ ತನ್ನ ಗಮನಕ್ಕೆ ತರುವಂತೆ ಹೇಳಿದೆ. ಆದರೆ, ಮಂಡಳಿಯು ಪಶ್ಚಿಮಘಟ್ಟವನ್ನು ಹಂಚಿಕೊಂಡಿರುವ ರಾಜ್ಯದ ಬಗ್ಗೆ ಯಾವುದೇ ಪ್ರಸ್ತಾಪ ಮಾಡಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಟಾಟಾ ಏಸ್, ಬೈಕ್ ನಡುವೆ ಅಪಘಾತ – ಇಬ್ಬರು ಯುವಕರು ಸ್ಥಳದಲ್ಲೇ ದುರ್ಮರಣ
ಹಾಗಂತ ಕಸ್ತೂರಿ ರಂಗನ್ ಸಮಿತಿಯು ಮಾಡಿರುವ ಪಶ್ಚಿಮಘಟ್ಟದ ಪರಿಸರ ಸೂಕ್ಷ್ಮ ಪ್ರದೇಶಗಳ ಶಿಫಾರಸ್ಸನ್ನು ನಾವು ಅಗೌರವಿಸುತ್ತಿಲ್ಲ. ಬದಲಾಗಿ, ಅದನ್ನು ನಮ್ಮ ರಾಜ್ಯದ ಹಿತದೃಷ್ಟಿ ಇಟ್ಟುಕೊಂಡು ವೈಜ್ಞಾನಿಕ ಹಾದಿಯಲ್ಲಿ ಪರಿಷ್ಕರಿಸಿ ಎಂದು ಮನವಿ ಮಾಡುತ್ತಿದ್ದೇವೆ ಎಂದರು. ಇದನ್ನೂ ಓದಿ: IIT ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ; ಪ್ರೊಫೆಸರ್‌ಗೆ ರಜೆ ನೀಡಿ ಕ್ಯಾಂಪಸ್‌ನಿಂದ ಗೇಟ್‌ಪಾಸ್
ಡ್ರೋನ್ ಸರ್ವೇ ಮಾಡಿಸಿದರೆ ಎಲ್ಲವೂ ಹಸಿರು ಕಾಣುತ್ತದೆ ಎನ್ನುವ ವಿಚಾರ ಸದನದಲ್ಲಿ ಪ್ರತಿಧ್ವನಿಸಿದೆ. ಹಾಗಾಗಿ ಕಂದಾಯ ಇಲಾಖೆಯ ಮೂಲಕ ಸರ್ವೇ ಮಾಡಿಸಬೇಕಾಗುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಶಾಸಕರಾದ ಬಳಿಕ ಮೊದಲ ಬಾರಿಗೆ ಹುಟ್ಟೂರಿಗೆ ಟಿವಿಕೆ ಶಾಸಕ ಸುನೀಲ್ ಆನಂದ್ ಭೇಟಿ

