ಬೆಂಗಳೂರು/ರಾಯಚೂರು: ಆರ್‌ಎಸ್‌ಎಸ್ (RSS) ಪಥಸಂಚಲನದಲ್ಲಿ ಭಾಗಿಯಾಗಿದ್ದಕ್ಕೆ ಲಿಂಗಸೂಗೂರು (Lingasuguru) ಪಿಡಿಒ ಅಮಾನತು ಮಾಡಿದ್ದ ಸರ್ಕಾರದ ಆದೇಶಕ್ಕೆ ಕೆಎಟಿ (KAT) ತಡೆ ನೀಡಿದೆ.
ಲಿಂಗಸುಗೂರು ತಾಲೂಕಿನ ರೋಡಲಬಂಡಾ ಗ್ರಾಮದ ಪಿಡಿಒ ಪ್ರವೀಣ್ ಕುಮಾರ್ ಅವರನ್ನು ಅಮಾನತು ಮಾಡಿ ಸರ್ಕಾರ ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿದ ಪಿಡಿಒ ಕೆಎಟಿ ಮೊರೆ ಹೋಗಿದ್ದರು. ಕರ್ನಾಟಕ ಆಡಳಿತ ನ್ಯಾಯಮಂಡಳಿಯು ಅಮಾನತು ಮಾಡಿದ್ದ ಸರ್ಕಾರದ ಆದೇಶವನ್ನು ವಜಾಗೊಳಿಸಿ, ರಾಜಕೀಯ ಪ್ರೇರಿತರಾಗಿ ಅಮಾನತು ಮಾಡಲಾಗಿದೆ ಎಂದು ಆದೇಶ ಹೊರಡಿಸಿದೆ. ಇದನ್ನೂ ಓದಿ: RSS ಪಥಸಂಚಲನದಲ್ಲಿ ಭಾಗಿ- ರಾಯಚೂರಿನ PDO ಅಮಾನತು
ಇದೇ ಅ.12 ರಂದು ಲಿಂಗಸುಗೂರು ಪಟ್ಟಣದಲ್ಲಿ ಆರ್‌ಎಸ್‌ಎಸ್ ಶತಮಾನೋತ್ಸವದ ಹಿನ್ನೆಲೆ ಪಥಸಂಚಲನ ಕಾರ್ಯಕ್ರಮ ನಡೆದಿತ್ತು. ಈ ಪಥಸಂಚಲನದಲ್ಲಿ ಕೈಯಲ್ಲಿ ದಂಡ ಹಿಡಿದುಕೊಂಡು ಗಣವೇಷ ಧರಿಸಿ ಪ್ರವೀಣ್ ಭಾಗವಹಿಸಿದ್ದರು.
ಕರ್ನಾಟಕ ಸಿವಿಲ್ ಸೇವಾ ನಿಯಮಗಳ ಉಲ್ಲಂಘನೆ ಹಾಗೂ ಸರ್ಕಾರಿ ನೌಕರನ ತರವಲ್ಲದ ರೀತಿ ನಡೆದುಕೊಂಡಿದ್ದಕ್ಕೆ ಅಮಾನತು ಮಾಡಿ, ಪಂಚಾಯತ್ ರಾಜ್ ಇಲಾಖೆ ಆಯುಕ್ತೆ ಡಾ.ಅರುಂಧತಿ ಅವರು ಆದೇಶಿಸಿದ್ದರು. ಇದನ್ನೂ ಓದಿ: RSS ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕೆ PDO ಅಮಾನತು – ಸರ್ಕಾರದ ಕ್ರಮ ಖಂಡಿಸಿ ಆದೇಶ ಹಿಂಪಡೆಯುವಂತೆ ಬಿಜೆಪಿ ಶಾಸಕ ಒತ್ತಾಯ