ಚಿತ್ರದುರ್ಗ: ನಳಿನ್ ಕುಮಾರ್ ಕಟೀಲ್ ಅಸಂಬದ್ಧ ಹೇಳಿಕೆ ನೀಡುತ್ತಿದ್ದಾನೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.
Advertisement
ಚಿತ್ರದುರ್ಗದಲ್ಲಿ ನಡೆದ ವಿಧಾನ ಪರಿಷತ್ ಚುನಾವಣೆಯ ಪ್ರಚಾರ ಸಭೆ ಬಳಿಕ ಮಾತನಾಡಿದ ಅವರು, ಕಾಂಗ್ರೆಸ್ ಭಯೋತ್ಪಾದನೆಗೆ ಬಡ್ತಿ ನೀಡುತ್ತಿದೆ ಎಂದು ಬಿಜೆಪಿ ಅಧ್ಯಕ್ಷ ಕಟೀಲ್ ಹೇಳಿಕೆ ನೀಡಿದ್ದಾರೆ. ಕಟೀಲ್‌ರಂತಹವರು ಅನಾವಶ್ಯಕವಾಗಿ ಗೊಂದಲ ಸೃಷ್ಟಿಸುತ್ತಿದ್ದಾರೆ. ಆ ಮೂಲಕ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಟೀಕಾಪ್ರಹಾರ ನಡೆಸಿದ್ದಾರೆ. ಇದನ್ನೂ ಓದಿ: ನಳಿನ್ ಕುಮಾರ್ ಕಟೀಲ್ ಓರ್ವ ಭಯೋತ್ಪಾದಕ – ಸಿದ್ದರಾಮಯ್ಯ
Advertisement
ಬೆಳಗಾವಿ ವಿಧಾನ ಪರಿಷತ್ ಚುನಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಚುನಾವಣೆ ವಿಚಾರವಾಗಿ ಬಿಜೆಪಿಯಲ್ಲಿ ಗೊಂದಲವಿದೆ. ಆದರೆ ನಮ್ಮ ಪಕ್ಷದಲ್ಲಿ ಗೊಂದಲವಿಲ್ಲ. ಬೆಳಗಾವಿ ಪರಿಷತ್ ಚುನಾವಣೆಗೆ ಬಿಜೆಪಿಯಲ್ಲಿ ಒಬ್ಬರು ಅಧಿಕೃತ, ಇನ್ನೊಬ್ಬರು ಅನಧಿಕೃತ ಅಭ್ಯರ್ಥಿ ಇದ್ದಾರೆ. ಆದರೆ ನಮ್ಮ ಪಕ್ಷದಿಂದ ಓರ್ವ ಅಭ್ಯರ್ಥಿ ಮಾತ್ರ ಚುನಾವಣಾ ಕಣದಲ್ಲಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: 12% ಡಿಕೆಶಿ, 10% ಸೀದಾರೂಪಯ್ಯ ಪರ್ಸಂಟೇಜ್ ರಾಜಕಾರಣದ ಪಿತಾಮಹರು ಯಾರು? – ಬಿಜೆಪಿ ಪ್ರಶ್ನೆ
Advertisement
Advertisement
ಈಶ್ವರಪ್ಪ ಹೇಳಿಕೆ ಕುರಿತು ಮಾತನಾಡಿ, ರಮೇಶ್ ಜಾರಕಿಹೊಳಿ ಬಿಜೆಪಿಗೆ ಮೋಸ ಮಾಡಲ್ಲವೆಂದು ಹೇಳಿರುವ ಸಚಿವ ಈಶ್ವರಪ್ಪ ಅವರ ಹೇಳಿಕೆ ಪಕ್ಷದ ಆಂತರಿಕ ವಿಚಾರ ಎಂದಷ್ಟೇ ಪ್ರತಿಕ್ರಿಯಿಸಿದ್ದಾರೆ.