ಕಾಟೇರ ಶತದಿನೋತ್ಸವ: ಕೇಕ್ ಕಟ್ ಮಾಡಿ ಸಂಭ್ರಮಿಸಿದ ಟೀಮ್

Public TV
1 Min Read
Kaatera 2

ರ್ಶನ್ (Darshan) ನಟನೆಯ ‘ಕಾಟೇರ’ ಸಿನಿಮಾ ನೂರು ದಿನಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ನಿರ್ದೇಶಕ ತರುಣ್ ಸುಧೀರ್ ಮತ್ತು ತಂಡ ಕೇಕ್ ಕತ್ತರಿಸಿ ಸಂಭ್ರಮಿಸಿದೆ. ಈ ಸಂಭ್ರಮದಲ್ಲಿ ದರ್ಶನ್ ಕಾಣಿಸಿದೇ ಇದ್ದರೂ, ನೂರು ದಿನ ಖುಷಿಯನ್ನು ಅಭಿಮಾನಿಗಳಿಗಾಗಿ ಚಿತ್ರತಂಡ ಹಂಚಿಕೊಂಡಿದೆ. ನೂರು ದಿನಗಳನ್ನು (Hundred Days) ಪೂರೈಸಿದ ಬೆನ್ನಲ್ಲೇ ಕಾಟೇರ ಸಿನಿಮಾ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಕಂಡಿದೆ. ಯುಗಾದಿಗೂ ಎರಡು ದಿನ ಮುನ್ನ ಏಪ್ರಿಲ್ 7ಕ್ಕೆ ಸಂಜೆ 7ಕ್ಕೆ ಚಿತ್ರ ಪ್ರಸಾರವಾಗಿದೆ.

Kaatera 1

ಕಾಟೇರ (Kaatera) ಸಿನಿಮಾ ಥಿಯೇಟರ್ ನಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದ್ದರೂ, ಒಟಿಟಿಯಲ್ಲೂ (OTT) ಸ್ಟ್ರೀಮಿಂಗ್ ಆಗುತ್ತಿತ್ತು. ಒಟಿಟಿಯಲ್ಲಿ ಕಾಟೇರ ಪ್ರದರ್ಶನ ಕಾಣುತ್ತಿರುವುದಕ್ಕೆ ಹುಬ್ಬಳ್ಳಿಯ ಅಭಿಮಾನಿಗಳು ವಿಶೇಷ ರೀತಿಯಲ್ಲಿ ಬರಮಾಡಿಕೊಂಡಿದ್ದರು. ಆಳೆತ್ತರದ ಕಟೌಟ್ ಹಾಕಿ ಕಾಟೇರನನ್ನು ಸ್ವಾಗತಿಸಿದ್ದರು.

kaatera

ದರ್ಶನ್ ಸಿನಿಕರಿಯರ್ ನಲ್ಲಿ ಹೊಸ ಮೈಲುಗಲ್ಲು ಸೃಷ್ಟಿಸಿದ್ದ ಕಾಟೇರ ಬಾಕ್ಸಾಫೀಸ್ ನಲ್ಲಿ ಕೋಟಿ ಕೋಟಿ ಲೂಟಿ ಮಾಡಿತ್ತು. ಪ್ಯಾನ್ ಇಂಡಿಯಾ ಚಿತ್ರಗಳ ಅಬ್ಬರದ ನಡುವೆಯೂ  ನಮ್ಮ ನೆಲದ ಕಥೆಗೆ ಪ್ರೇಕ್ಷಕ ಜೈಕಾರ ಹಾಕಿದ್ದರು. ರಾಕ್ಲೈನ್ ವೆಂಕಟೇಶ್ ನಿರ್ಮಿಸಿರುವ ಈ ಸಿನಿಮಾವನ್ನು ಒಟಿಟಿಗೆ Zee5 ವಹಿವಾಟು ಮುಗಿಸಿತ್ತು.

Katera 2

Zee5 ತಾನು ಖರೀದಿಸಿದ ಹೊಸ ಸಿನಿಮಾಗಳನ್ನು ಪ್ರತಿ ಶುಕ್ರವಾರ ಬಿಡುಗಡೆ ಮಾಡುತ್ತೆ. ಅಲ್ಲದೆ ನಿರ್ಮಾಪಕರು ಹಾಗೂ ಓಟಿಟಿ ಸಂಸ್ಥೆಯೊಂದಿಗೆ ಸಿನಿಮಾ ಬಿಡುಗಡೆಯಾದ 30 ರಿಂದ 40 ದಿನಗಳ ಅಂತರದಲ್ಲಿ ಓಟಿಟಿಯಲ್ಲಿ ಪ್ರೀಮಿಯರ್ ಮಾಡುವ ಬಗ್ಗೆ ಸಹಜವಾಗಿ ಒಪ್ಪಂದ ಆಗುತ್ತೆ. ‘ಕಾಟೇರ’ ಬಿಡುಗಡೆಯಾದ 40 ದಿನಗಳ ಬಳಿಕ ಓಟಿಟಿಯಲ್ಲಿ ರಿಲೀಸ್ ಮಾಡುವ ಮಾತುಕತೆ ನಡೆದಿದ್ದು, ಅದರಂತೆಯೇ ಫೆಬ್ರವರಿ 9ರಂದು  ಸಿನಿಮಾ ಪ್ರೀಮಿಯರ್ ಆಗಿದೆ.

 

ಕಾಟೇರ ಸಿನಿಮಾ ಕನ್ನಡದ ನೆಲದ ಸಿನಿಮಾ. 1970ರ ಕಾಲಘಟ್ಟದ ಕಥೆಯನ್ನು ಚೆಂದವಾಗಿ ತೆರೆಮೇಲೆ ತಂದಿದ್ದರು ನಿರ್ದೇಶಕ ತರುಣ್ ಸುಧೀರ್. ಮಾಲಾಶ್ರೀ ಪುತ್ರಿ ಆರಾಧನಾ ರಾಮ್ಗೂ ಕಾಟೇರ ದೊಡ್ಡ ಹಿಟ್ ನೀಡಿದೆ. ಕಥೆ ಬರೆದ ಜಡೇಶ್ ಕುಮಾರ್ ಹಂಪಿ, ಡೈಲಾಗ್ ಬರೆದ ಮಾಸ್ತಿಗೂ ಕಾಟೇರ ಸಿನಿಮಾ ಮರೆಯಲಾಗದ ಯಶಸ್ಸು ನೀಡಿದೆ.

Share This Article