ದರ್ಶನ್ (Darshan) ನಟನೆಯ ‘ಕಾಟೇರ’ (Katera) ಸಿನಿಮಾದ ಬಿಡುಗಡೆಗೆ ಸರ್ವ ರೀತಿಯಲ್ಲೂ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಇದೇ ಡಿ.29ರಂದು ರಾಜ್ಯದಾದ್ಯಂತ ಸಿನಿಮಾ ರಿಲೀಸ್ ಆಗುತ್ತಿದ್ದು, ಈಗಾಗಲೇ ಬುಕ್ ಮೈ ಶೋನಲ್ಲಿ ಮುಂಗಡ ಟಿಕೆಟ್ ಅನ್ನು ಖರೀದಿಸಬಹುದಾಗಿದೆ. ಟಿಕೆಟ್ ಬುಕ್ಕಿಂಗ್ ಶುರುವಾಗಿ ಕೇವಲ 72 ಗಂಟೆಗಳಲ್ಲಿ ಬರೋಬ್ಬರಿ 50 ಸಾವಿರ ಟಿಕೆಟ್ ಸೇಲ್ ಆಗಿದೆ ಎನ್ನುವ ಮಾಹಿತಿ ಸಿಕ್ಕಿದೆ. ಮುಂಗಡ ಟಿಕೆಟ್ ಬುಕ್ಕಿಂಗ್ ಶುರುವಾಗಿ 48 ಗಂಟೆಗಳಲ್ಲಿ ಒಂದು ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಆಗಿದೆ ಎನ್ನುವ ಮಾಹಿತಿ ಹರಿದಾಡುತ್ತಿದೆ.
Advertisement
ಒಂದು ಕಡೆ ಕಲೆಕ್ಷನ್ ನಿಂದಾಗಿ ಸಿನಿಮಾ ಸುದ್ದಿ ಮಾಡುತ್ತಿದ್ದರೆ, ಮತ್ತೊಂದು ಕಡೆ ಆಯ್ಕೆ ಮಾಡಿಕೊಂಡ ಕಥೆಯ ಕಾರಣದಿಂದಾಗಿ ಸಿನಿಮಾ ಕುತೂಹಲ ಮೂಡಿಸಿದೆ. ಇತ್ತೀಚೆಗಷ್ಟೇ ಹುಬ್ಬಳ್ಳಿಯಲ್ಲಿ ನಡೆದ ಟ್ರೈಲರ್ ಬಿಡುಗಡೆ ಸಮಾರಂಭದಲ್ಲಿ ನಟ ದರ್ಶನ್ ಸಿನಿಮಾ ಕುರಿತಾದ ಹಲವು ಸಂಗತಿಗಳನ್ನು ಹಂಚಿಕೊಂಡಿದ್ದಾರೆ. ಈ ಸಿನಿಮಾದ ಕಥೆಯು ನೈಜ ಘಟನೆಯನ್ನು ಆಧರಿಸಿದ್ದು, ಅದು ಇಂದಿರಾ ಗಾಂಧಿ (Indira Gandhi) ಕಾಲದ ಕಥೆಯಾಗಿದೆ ಎಂದು ಗುಟ್ಟು ಬಿಟ್ಟುಕೊಟ್ಟಿದ್ದಾರೆ.
Advertisement
Advertisement
ಅದು 1974ರ ಕಾಲ. ಉಳುವವನೆ ಭೂಮಿಯ ಒಡೆಯ ಕಾನೂನು ಬಂದಾಗ ನಡೆದಿರುವ ಘಟನೆ. ಆವಾಗ ಬಾವಿಯೊಂದರಲ್ಲಿ ತುಂಬಾ ಜನರ ಮೂಳೆಗಳು ಸಿಕ್ಕಿದ್ದವು. ಆ ಮೂಳೆಗಳು ಯಾರವು ಅಂತ ಯಾರಿಗೂ ಗೊತ್ತಿಲ್ಲ. ಆ ಕಹಿ ಘಟನೆಯನ್ನು ಈ ಸಿನಿಮಾದಲ್ಲಿ ಹೇಳಲು ಹೊರಟಿದ್ದೇವೆ ಎಂದಿದ್ದಾರೆ ದರ್ಶನ್.
Advertisement
ರಾಕ್‌ಲೈನ್ ವೆಂಕಟೇಶ್ ನಿರ್ಮಾಣದ, ತರುಣ್ ಸುದೀರ್ ನಿರ್ದೇಶನದ ಕಾಟೇರ ಚಿತ್ರ ಇದೇ ತಿಂಗಳು 29ಕ್ಕೆ ತೆರೆಗೆ ಬರಲು ಸಿದ್ಧವಾಗಿದೆ. ನಟ ದರ್ಶನರ ಬಹು ನಿರೀಕ್ಷಿತ ಚಿತ್ರ ಇದಾಗಿದ್ದು, ಈಗಾಗಲೇ ಚಿತ್ರ ಭಾರೀ ಹೈಪ್ ಕ್ರಿಯೆಟ್ ಮಾಡಿದೆ. ಬಹಳ ದಿನಗಳ ಬಳಿಕ ಡಿ ಬಾಸ್ ಮಾಸ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಟೀಸರ್ ಮತ್ತು ಸಾಂಗ್ ಯೂಟ್ಯೂಬ್‌ನಲ್ಲಿ ಸೆನ್ಸೇಷನ್ ಕ್ರಿಯೇಟ್ ಮಾಡಿದೆ. ಚಿತ್ರ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಈ ನಡುವೆ ವಾಣಿಜ್ಯ ನಗರಿಯಲ್ಲಿ ಅದ್ಧೂರಿಯಾಗಿ ಟ್ರೈಲರ್ ಬಿಡುಗಡೆಗೊಳಿಸಲಾಗಿದೆ.