BollywoodCinemaLatestMain PostNational

ಅದ್ಧೂರಿಯಾಗಿ ನೆರವೇರಿತು ಕತ್ರಿನಾ ಕೈಫ್-ವಿಕ್ಕಿ ಕೌಶಲ್ ಮದುವೆ

ಮುಂಬೈ: ಬಾಲಿವುಡ್‍ನಲ್ಲಿ ಮದುವೆ ವಿಚಾರವಾಗಿ ಸಂಚಲನ ಮೂಡಿಸಿದ್ದ ಕತ್ರಿನಾ ಕೈಫ್- ವಿಕ್ಕಿ ಕೌಶಲ್ ಮದುವೆ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.

ರಾಜಸ್ಥಾನದ ಸಿಕ್ಸ್ ಸೆನ್ಸಸ್ ಫೋರ್ಟ್ ಹೋಟೆಲ್‍ನಲ್ಲಿ ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ಮದುವೆ ನೆರವೇರಿದೆ. ಡಿ.9ರಂದು ಈ ಜೋಡಿ ಹಸೆಮಣೆ ಏರಿದೆ. ಮದುವೆ ಬಳಿಕ ಕತ್ರಿನಾ ಮತ್ತು ವಿಕ್ಕಿ ಕೌಶಲ್ ಅವರು ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳ ಮೂಲಕ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ.

 

View this post on Instagram

 

A post shared by Katrina Kaif (@katrinakaif)

ಈ ಕ್ಷಣಕ್ಕೆ ನಮ್ಮನ್ನು ಕರೆತಂದವರಿಗೆ ಪ್ರೀತಿಯ ಮತ್ತು ಕೃತಜ್ಞತೆ. ನಾವು ಒಟ್ಟಿಗೆ ಈ ಹೊಸ ಪ್ರಯಾಣವನ್ನು ಪ್ರಾರಂಭಿಸುತ್ತಿರುವಾಗ ನಿಮ್ಮೆಲ್ಲರ ಪ್ರೀತಿ ಮತ್ತು ಆಶೀರ್ವಾದವನ್ನು ಬಯಸುತ್ತೇವೆ ಎಂದು ಬರೆದುಕೊಂಡು ಮದುವೆಯ ಸುಂದರ ಕ್ಷಣಗಳನ್ನು ಹಂಚಿಕೊಂಡಿದ್ದಾರೆ. ನಿಮ್ಮಿಬ್ಬರ ಜೀವನಪೂರ್ತಿ ಪ್ರೀತಿ, ನಗು, ನಿಷ್ಠೆ, ಗೌರವ ಇರಲಿ ಶುಭಾಶಯಗಳು ಎಂದು ದೀಪಿಕಾ ಪಡುಕೋಣೆ ಕಾಮೆಂಟ್ ಮಾಡಿದ್ದಾರೆ. ನೀವು ತುಂಬಾನೇ ಮುದ್ದಾಗಿ ಕಾಣೀಸುತ್ತಿದ್ದೀರ ಎಂದು ನಟಿ ಆಲಿಯಾ ಭಟ್ ಕೂಡಾ ಕಾಮೆಂಟ್ ಮಾಡುವ ಮೂಲಕವಾಗಿ ಶುಭಕೋರಿದ್ದಾರೆ. ಹೀಗೆ ಬಾಲಿವುಡ್‍ನ ಅನೇಕ ಸೆಲೆಬ್ರಿಟಿಗಳು ಮತ್ತು ಅಭಿಮಾನಿಗಳು ಸೋಶಿಯಲ್ ಮೀಡಿಯಾ ಮೂಲಕವಾಗಿ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿಗೆ ಶುಭಾಶಯಗಳ ಸುರಿಮಳೆ ಗೈದಿದ್ದಾರೆ ಇದನ್ನೂ ಓದಿ: ಮದುವೆಗೆ ಬರುವ ಅತಿಥಿಗಳಿಗೆ ಕತ್ರಿನಾ-ವಿಕ್ಕಿ ವೆಲ್​ಕಮ್ ನೋಟ್

 

View this post on Instagram

 

A post shared by Vicky Kaushal (@vickykaushal09)

ರಾಜಸ್ಥಾನದ ಸವಾಯಿ ಮಾಧೋಪುರದ ಫೋರ್ಟ್ ಬರ್ವಾರದ ಸಿಕ್ಸ್ ಸೆನ್ಸ್‍ನಲ್ಲಿ ಇಂದು ಕುಟುಂಬ ಸದಸ್ಯರ ಸಮ್ಮುಖದಲ್ಲಿ ಮದುವೆಯಾಗಿದ್ದಾರೆ. ಈ ಮದುವೆಗೆ ಆಪ್ತರನ್ನು ಮಾತ್ರ ಆಹ್ವಾನಿಸಲಾಗಿದ್ದು, ಅತಿಥಿಗಳಿಗೆ ನೋ ಫೋಟೋ ನಿಯಮ ವಿಧಿಸಲಾಗಿತ್ತು. ವಿಕ್ಕಿ ಕೌಶಲ್ ಮತ್ತು ಕತ್ರಿನಾ ಕೈಫ್ ಮದುವೆಯ ವಿಡಿಯೋಗಳನ್ನು ಖ್ಯಾತ ಓಟಿಟಿ ಸಂಸ್ಥೆಯೊಂದಕ್ಕೆ ಬರೋಬ್ಬರಿ 100 ಕೋಟಿ ರೂ. ಮೊತ್ತಕ್ಕೆ ಮಾರಾಟ ಮಾಡಲಾಗಿದೆ ಎಂಬ ಸುದ್ದಿ ಕೇಳಿಬಂದಿದೆ. ಹೀಗಾಗಿ ಈ ಮದುವೆಯನ್ನು ಇಷ್ಟೊಂದು ಗುಟ್ಟಾಗಿ ನೆರವೇರಿಸಲಾಗಿದೆ. ಇದನ್ನೂ ಓದಿ:  ದಾಂಪತ್ಯ ಜೀವನಕ್ಕೆ ಕಾಲಿಟ್ಟ ಲಾಲೂ ಪ್ರಸಾದ್ ಪುತ್ರ

ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ನಡುವೆ ವಯಸ್ಸಿನ ಅಂತರ ಇದೆ. ಕತ್ರಿನಾಗೆ 38 ವರ್ಷ ವಯಸ್ಸು. ವಿಕ್ಕಿ ಕೌಶಲ್‍ಗೆ ಈಗಿನ್ನೂ 33ರ ಪ್ರಾಯ. ತಮಗಿಂತ 5 ವರ್ಷ ಕಿರಿಯ ವ್ಯಕ್ತಿ ಜೊತೆ ಕತ್ರಿನಾ ದಾಂಪತ್ಯ ಜೀವನ ಆರಂಭಿಸಿದ್ದಾರೆ. ವಿದೇಶಿ ಪ್ರಜೆಯಾಗಿರುವ ಕತ್ರಿನಾ ಅವರು ಈಗ ದೇಸಿ ಹುಡುಗನ ಕೈ ಹಿಡಿದು ಭಾರತದ ನಟಿ ಜೊತೆಗೆ ಸೊಸೆ ಆಗಿದ್ದಾರೆ. ಇದನ್ನೂ ಓದಿ: 7 ಬಿಳಿ ಕುದುರೆಗಳ ಜೊತೆ ಮಂಟಪಕ್ಕೆ ವಿಕ್ಕಿ ಕೊಡಲಿದ್ದಾರೆ ರಾಯಲ್ ಎಂಟ್ರಿ

Leave a Reply

Your email address will not be published.

Back to top button