ಬಾಲಿವುಡ್ ಸ್ಟಾರ್‌ಗಳಾದ ಕತ್ರಿನಾ ಕೈಫ್ (Katrina Kaif) ಮತ್ತು ವಿಕ್ಕಿ ಕೌಶಲ್ (Vicky Kaushal) ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ದಂಪತಿ ಈ ಬಗ್ಗೆ ಯಾವುದೇ ಘೋಷಣೆ ಮಾಡಿಲ್ಲ. ಆದಾಗ್ಯೂ, ಕತ್ರಿನಾ ತನ್ನ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಮಗು ಅಕ್ಟೋಬರ್-ನವೆಂಬರ್‌ನಲ್ಲಿ ಜನಿಸಲಿದೆ ಎಂದು ಮೂಲಗಳು ದೃಢಪಡಿಸಿವೆ.
ಕತ್ರಿನಾ ಗರ್ಭಧಾರಣೆಯ ಬಗ್ಗೆ ಹಲವು ತಿಂಗಳುಗಳಿಂದ ಊಹಾಪೋಹಗಳು ಹರಡುತ್ತಿದ್ದವು. ಆದರೆ, ದಂಪತಿ ಈ ಸಂಬಂಧ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇದನ್ನೂ ಓದಿ: ಫ್ಯಾನ್ಸ್‌ಗೆ ಕಿಚ್ಚ ಸುದೀಪ್ ಗುಡ್‌ನ್ಯೂಸ್
ಬ್ಯಾಡ್ ನ್ಯೂಜ್ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಕತ್ರಿನಾ ಕೈಫ್ ಗರ್ಭಧಾರಣೆಯ ವದಂತಿಯ ಬಗ್ಗೆ ವಿಕ್ಕಿ ಕೌಶಲ್ ಅವರನ್ನು ಪ್ರಶ್ನಿಸಲಾಯಿತು. ಈ ಬಗ್ಗೆ ಒಳ್ಳೆಯ ಸುದ್ದಿ ಬಂದರೆ, ನಾವು ಅದನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ತುಂಬಾ ಸಂತೋಷಪಡುತ್ತೇವೆ. ಆದರೆ ಸದ್ಯಕ್ಕೆ ಊಹಾಪೋಹಗಳಲ್ಲಿ ಯಾವುದೇ ಸತ್ಯವಿಲ್ಲ. ಅಲ್ಲಿಯವರೆಗೆ ಬ್ಯಾಡ್ ನ್ಯೂಜ್ ಚಿತ್ರವನ್ನು ಆನಂದಿಸಿ, ನಾವು ಒಳ್ಳೆಯ ಸುದ್ದಿಯೊಂದಿಗೆ ಖಂಡಿತ ನಿಮ್ಮ ಮುಂದೆ ಬರುತ್ತೇವೆ ಎಂದು ತಿಳಿಸಿದ್ದಾರೆ.
ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ 2021 ರಲ್ಲಿ ರಾಜಸ್ಥಾನದ ಸಿಕ್ಸ್ ಸೆನ್ಸಸ್ ಫೋರ್ಟ್ ಬರ್ವಾರಾದ ಸುಂದರವಾದ ಸ್ಥಳದಲ್ಲಿ ವಿವಾಹವಾದರು. ಕತ್ರಿನಾ-ವಿಕ್ಕಿ ಅವರ ವಿವಾಹದಲ್ಲಿ ಆಪ್ತರು ಹಾಜರಿದ್ದರು. ಇದನ್ನೂ ಓದಿ: ಉಪೇಂದ್ರ ದಂಪತಿ ಫೋನ್ ಹ್ಯಾಕ್ – ಸೈಬರ್ ವಂಚಕರು ದೋಚಿದ್ದೆಷ್ಟು ಹಣ?