ಬೆಂಗಳೂರು: ಬಿಜೆಪಿ ಮಾಜಿ ಶಾಸಕ ಕಟ್ಟಾ ಸುಬ್ರಮಣ್ಯ ನಾಯ್ಡು ವಿರುದ್ಧ ವಂಚನೆ ಆರೋಪದಡಿ ಎಫ್‍ಐಆರ್ ದಾಖಲಾಗಿದೆ.
2004ರಲ್ಲಿ ಕಟ್ಟಾ ಸುಬ್ರಮಣ್ಯ ನಾಯ್ಡು ಅವರು ಶಾಸಕರಾಗಿದ್ದಂತಹ ಸಂದರ್ಭದಲ್ಲಿ ಇಂಡ್ ಸಿಂಡ್ ಕಂಪನಿಯಿಂದ ಸೈಟ್ ಹಾಗೂ ಫ್ಲಾಟ್ ಕೊಡಿಸುವುದಾಗಿ 2.85 ಕೋಟಿ ರೂ. ಹಣ ಪಡೆದಿದ್ದರು. ಈ ಹಣವನ್ನು ನಗದು ಹಾಗೂ ಚೆಕ್ ಮೂಲಕ ಪಡೆಯಲಾಗಿತ್ತು. ಇದನ್ನೂ ಓದಿ: ಮಗನ ಆರೋಗ್ಯ ವಿಚಾರಿಸುತ್ತಾ ರಾತ್ರಿಯಿಡೀ ನಿದ್ದೆಗೆಟ್ಟ ಶಾರೂಖ್ ದಂಪತಿ!
Advertisement
Advertisement
ಈ ಬಗ್ಗೆ ಹಲವು ಬಾರಿ ಕಟ್ಟಾ ಸುಬ್ರಮಣ್ಯ ನಾಯ್ಡು ಅವರನ್ನು ವಿಚಾರಿಸಿದಾಗ ಸರಿಯಾಗಿ ಪ್ರತಿಕ್ರಿಯಿಸಿರಲಿಲ್ಲ. ಹೀಗಾಗಿ ಇಂಡ್ ಸಿಂಡ್ ಡೆಲವಪರ್ಸ್ ಪ್ರೈವೇಟ್ ಲಿಮಿಟೆಡ್ ನ ನಿರ್ದೇಶಕರು ಕೋರ್ಟ್ ಮೊರೆ ಹೋಗಿದ್ದರು. ಇದನ್ನೂ ಓದಿ: ಮಕ್ಕಳಿಗೆ ಲಸಿಕೆ ಭಾಗ್ಯ- 2 ರಿಂದ 18 ವರ್ಷದವರಿಗೆ ಕೋವ್ಯಾಕ್ಸಿನ್ ನೀಡಲು ಅನುಮತಿ
Advertisement
ಅರ್ಜಿ ವಿಚಾರಣೆ ನಡೆಸಿದ್ದ ಎಸಿಎಂಎಂ ಕೋರ್ಟ್ ಕಟ್ಟಾ ಸುಬ್ರಮಣ್ಯ ನಾಯ್ಡು ವಿರುದ್ಧ ಪ್ರಕರಣ ದಾಖಲಿಸುವಂತೆ ಸೂಚಿಸಿದೆ. ಈ ಹಿನ್ನಲೆಯಲ್ಲಿ ಇದೀಗ ಕಟ್ಟಾ ಸುಬ್ರಮಣ್ಯ ನಾಯ್ಡು ಅವರ ವಿರುದ್ಧ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ವಂಚನೆ ಆರೋಪದಡಿ ಎಫ್‍ಐಆರ್ ದಾಖಲಿಸಲಾಗಿದೆ.
Advertisement