ನನ್ನರಸಿ ರಾಧೆ ಧಾರಾವಾಹಿಯ ಮೂಲಕ ಅಸಂಖ್ಯಾತ ಅಭಿಮಾನಿಗಳನ್ನು ಹೊಂದಿರುವ ಕೌಸ್ತುಭ ಮಣಿ, ಇದೀಗ ಹೊಸ ಫೋಟೋ ಶೂಟ್ (Photo Shoot) ಮಾಡಿಸಿದ್ದಾರೆ. ಬ್ಲ್ಯಾಕ್ ಕಲರ್ ಕಾಸ್ಟ್ಯೂಮ್ ನಲ್ಲಿ ಸಖತ್ ಹಾಟ್ ಹಾಟ್ (Hot) ಆಗಿ ಕಾಣಿಸುತ್ತಾರೆ. ಅವರ ಈ ಬೋಲ್ಡ್ ಫೋಟೋ ಶೂಟ್ ಪಡ್ಡೆಗಳ ನಿದ್ದೆಗೆಡಿಸಿದೆ.
ನನ್ನರಿಸಿ ರಾಧೆ ಧಾರಾವಾಹಿಯಲ್ಲಿ ಇವರದ್ದು ಇಂಚರಾ ಹೆಸರಿನ ಪಾತ್ರ. ಆ ಪಾತ್ರವನ್ನು ಸಮರ್ಥವಾಗಿ ನಿಭಾಯಿಸುವ ಮೂಲಕ ಉತ್ತಮ ನಟಿಯಾಗಿ ಕೌಸ್ತುಭ ಹೊರ ಹೊಮ್ಮಿದ್ದರು. ಅವರು ಪಾತ್ರ ಸಾಕಷ್ಟು ತೂಕದಿಂದ ಕೂಡಿತ್ತು.
ಕೇವಲ ಧಾರಾವಾಹಿಗಳಲ್ಲಿ ಮಾತ್ರವಲ್ಲ ಸಿನಿಮಾದಲ್ಲೂ ಕೌಸ್ತುಭ ನಟಿಸುತ್ತಿದ್ದಾರೆ. ಹೆಸರಾಂತ ನಟರ ಜೊತೆ ತೆರೆ ಹಂಚಿಕೊಳ್ಳುವ ಮೂಲಕ ಮತ್ತೆ ಸುದ್ದಿಗೆ ಸಿಕ್ಕಿದ್ದಾರೆ. ಕೇವಲ ಕನ್ನಡದಲ್ಲಿ ಮಾತ್ರವಲ್ಲ, ತೆಲುಗಿನಲ್ಲೂ ಅವರು ನಾನಾ ಪ್ರಾಜೆಕ್ಟ್ ಗಳನ್ನು ಮಾಡುತ್ತಿದ್ದಾರೆ.
ಸದಭಿರುಚಿ ಚಿತ್ರಗಳ ನಿರ್ಮಾಪಕರಾದ ರಮೇಶ್ ರೆಡ್ಡಿ ನಿರ್ಮಾಣದ, ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಪ್ರಥಮ ನಿರ್ದೇಶನದಲ್ಲಿ ಮೂಡಿ ಬರಲಿರುವ ‘45’ ಸಿನಿಮಾಗೆ ನಾಯಕಿ ಯಾರಾಗಲಿದ್ದಾರೆ ಎನ್ನುವ ಕುತೂಹಲವಿತ್ತು. ಹಲವು ನಾಯಕಿಯರ ಹೆಸರೂ ಕೇಳಿ ಬಂದಿದ್ದವು. ಅದರಲ್ಲೂ ಸೀರಿಯಲ್ ನಟಿ ಕೌಸ್ತುಭ ಮಣಿ (Kaustubha Mani) ನಾಯಕಿ ಎಂದು ಹೇಳಲಾಗಿತ್ತು. ಇದೀಗ ಚಿತ್ರತಂಡವೇ ಅಧಿಕೃತ ಮಾಹಿತಿ ನೀಡಿದೆ.
ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವ ಈ ಚಿತ್ರಕ್ಕೆ ಕೌಸ್ತುಭ ಮಣಿ ನಾಯಕಿಯನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಚಿತ್ರತಂಡವೇ ಘೋಷಿಸಿದೆ. ಕಲರ್ಸ್ ಕನ್ನಡದ ‘ನನ್ನರಸಿ ರಾಧೆ’, ಜೀ ತೆಲುಗಿನ ಪ್ರಸಿದ್ದ ಧಾರಾವಾಹಿ ಹಾಗೂ ಕನ್ನಡದ ರಾಮಾಚಾರಿ 2.0 ಚಿತ್ರದಲ್ಲಿ ಕೌಸ್ತುಭ ಮಣಿ ನಟಿಸಿದ್ದಾರೆ.
ಮ್ಯೂಸಿಕಲ್ ಕಂಪೋಸರ್ ಅರ್ಜುನ್ ಜನ್ಯ (Arjun Janya) ಮೊದಲ ಬಾರಿಗೆ ನಿರ್ದೇಶನಕ್ಕೆ ಇಳಿದಿದ್ದಾರೆ. ಶಿವಣ್ಣ (Shivanna), ಉಪ್ಪಿ, ರಾಜ್ ಬಿ ಶೆಟ್ಟಿಗೆ(Raj B Shetty) ಆ್ಯಕ್ಷನ್ ಕಟ್ ಹೇಳ್ತಿದ್ದಾರೆ. `45′ ಚಿತ್ರದಲ್ಲಿ ಅನೇಕ ವಿಶೇಷತೆಗಳನ್ನು ಹೊಂದಿದೆ ಎಂದು ಈಗಾಗಲೇ ನಿರ್ದೇಶಕರು ಕೆಲ ಮಾಹಿತಿ ನೀಡಿದ್ದಾರೆ.
ಶಿವರಾಜ್‌ಕುಮಾರ್ (Shivarajkumar) ನಟನೆಯ `45′ ಚಿತ್ರ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಿದ್ಧಗೊಳ್ಳಲಿದೆ. ಈ ಸಿನಿಮಾಗೆ ರಮೇಶ್ ರೆಡ್ಡಿ ನಿರ್ಮಾಣ ಮಾಡ್ತಿದ್ದಾರೆ. ಈ ಸಿನಿಮಾದ ಚಿತ್ರೀಕರಣ ಈಗಾಗಲೇ ಆರಂಭ ಆಗಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿಯಲ್ಲಿ ಏಕಕಾಲಕ್ಕೆ ಸಿನಿಮಾ ತೆರೆಕಾಣಿಸಲು ಪ್ಲ್ಯಾನ್ ಮಾಡಿಕೊಳ್ಳಲಾಗಿದೆ. ಅರ್ಜುನ್ ಜನ್ಯ ಅವರೇ ಕಥೆ-ಚಿತ್ರಕಥೆ ಬರೆದಿದ್ದು, ನಿರ್ದೇಶನದ ಜೊತೆಗೆ ಸಂಗೀತ ನಿರ್ದೇಶನದ ಜವಾಬ್ದಾರಿಯನ್ನು ಕೂಡ ವಹಿಸಿಕೊಂಡಿದ್ದಾರೆ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]