ಕವಾಡಿಗರಹಟ್ಟಿಗೆ ಭೇಟಿ ನೀಡಿ ಮೃತರ ಕುಟುಂಬಸ್ಥರಿಗೆ ನಟ ಚೇತನ್ ಸಾಂತ್ವನ
ಚಿತ್ರದುರ್ಗ (Chitradurga) ನಗರದ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು(Polluted Water Case) ಸೇವಿಸಿ ಐವರು ಸಾವನ್ನಪ್ಪಿದ್ದರು. ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಲು ಸ್ಯಾಂಡಲ್‌ವುಡ್ ನಟ ಚೇತನ್ (Actor Chethan) ಭೇಟಿ ನೀಡಿದ್ದಾರೆ. ಈ ವೇಳೆ ನಟನ ಜೊತೆ ಡಿಎಸ್‌ಎಸ್ ಮುಖಂಡರು ಸಾಥ್ ನೀಡಿದ್ದಾರೆ.
ಜುಲೈ 30ರಿಂದ ಇಲ್ಲಿಯವರೆಗೆ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ನೂರಾರು ಜನರು ಅಸ್ವಸ್ಥರಾಗಿದ್ದರು. ಬಳಿಕ ಐವರು ಮೃತಪಟ್ಟಿದ್ದರು. ಕವಾಡಿಗರಹಟ್ಟಿಯಲ್ಲಿ ಸೂತಕದ ಛಾಯೆ ಮನೆ ಮಾಡಿದ್ದು, ಮೈನಾ ಹೀರೋ ಚೇತನ್, ಕುಟುಂಬಸ್ಥರ ಮನೆಗೆ ಭೇಟಿ ನೀಡಿ ಬಂದಿದ್ದಾರೆ. ಬಳಿಕ ಈ ಪ್ರಕರಣದ ಬಗ್ಗೆ ನಟ ಪ್ರತಿಕ್ರಿಯೆ ನೀಡಿದ್ದಾರೆ.
ದಲಿತಕೇರಿಯಲ್ಲಿ ಮಾತ್ರ ಈ ರೀತಿ ಪ್ರಕರಣ ನಡೆದಿದೆ. ಇಡೀ ಸರ್ಕಾರಿ ವ್ಯವಸ್ಥೆಯ ವೈಫಲ್ಯ ಈ ಪ್ರಕರಣದಿಂದ ಎದ್ದು ಕಾಣುತ್ತಿದೆ. ದ್ವೇಷದಿಂದ ವಿಷ ಬೆರೆಸಿದ ಆರೋಪದ ಬಗ್ಗೆಯೂ ತನಿಖೆ ನಡೆಯಲಿ. ಸರ್ಕಾರದಿಂದ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ. ಕವಾಡಿಗರಹಟ್ಟಿ ಪ್ರಕರಣದ ಬಗ್ಗೆ ಉನ್ನತಮಟ್ಟದ ತನಿಖೆ ಆಗಲೇಬೇಕು ಎಂದು ನಟ ಮಾತನಾಡಿದ್ದಾರೆ. ಎಸ್‌ಸಿಪಿ, ಟಿಎಸ್‌ಪಿ ಹಣ ಸರ್ಕಾರದಿಂದ ದುರ್ಬಳಕೆಯಾಗಿದೆ. ದಲಿತರ ಅಭಿವೃದ್ಧಿಗೆ ಎಂದು ಮೀಸಲಿದ್ದ ಹಣವನ್ನ 5 ಗ್ಯಾರಂಟಿಗೆ ಸರ್ಕಾರ ಬಳಕೆ ಮಾಡಿದೆ ಎಂದು ಚೇತನ್ ಆರೋಪ ಮಾಡಿದ್ದಾರೆ. ಇದನ್ನೂ ಓದಿ:ಬಿಪಾಶಾ ಬಸು ಮಗಳ ಹಾರ್ಟ್‌ನಲ್ಲಿ ಹೋಲ್- ಕಣ್ಣೀರಿಟ್ಟ ನಟಿ
ಐವರು ಮೃತಪಟ್ಟ ಕುಟುಂಬಸ್ಥರ ಮನೆಗೆ ಆರೋಗ್ಯ ಸಚಿವ ದಿನೇಶ್ ಗಂಡೂರಾವ್ (Dinesh Gundu Rao) ಅವರು ಭೇಟಿ ನೀಡಿ ಸಾಂತ್ವನ ಹೇಳಿದ್ದರು. ಬಳಿಕ ಆ ಕುಟುಂಬಗಳಿಗೆ ತಲಾ 10 ಲಕ್ಷ ರೂಪಾಯಿ ಚೆಕ್ ನೀಡಿದ್ದರು.