ಫೈನಲ್‌ನಲ್ಲಿ ಕೋಲ್ಕತ್ತಾ ವಿರುದ್ಧ ಹೈದರಾಬಾದ್‌ಗೆ ಸೋಲು; ದುಃಖ ತಡೆಯಲಾರದೇ ಕಣ್ಣೀರಿಟ್ಟ ಕಾವ್ಯ ಮಾರನ್‌

Public TV
2 Min Read
Kavya Maran

ಚೆನ್ನೈ: 2024ರ 17ನೇ ಆವೃತ್ತಿಯ ಐಪಿಎಲ್‌ ಟೂರ್ನಿ ಫೈನಲ್‌ ಪಂದ್ಯದಲ್ಲಿ ಕೋಲ್ಕತ್ತಾ ನೈಟ್‌ ರೈಡರ್ಸ್‌ ವಿರುದ್ಧ ಸನ್‌ರೈಸರ್ಸ್‌ ಹೈದರಾಬಾದ್‌ ಹೀನಾಯ ಸೋಲನುಭವಿಸಿತು. ತಂಡದ ಸೋಲಿನ ದುಃಖ ತಡೆಯಲಾರದೇ ಕಾವ್ಯ ಮಾರನ್‌ ಅವರು ಕಣ್ಣೀರಿಟ್ಟರು.

ಚೆಪಕ್‌ ಕ್ರೀಡಾಂಗಣದಲ್ಲಿ ಇಂದು ನಡೆದ ಫೈನಲ್‌ ಪಂದ್ಯದಲ್ಲಿ ಶ್ರೇಯಸ್‌ ಅಯ್ಯರ್‌ ನಾಯಕತ್ವದ ಕೆಕೆಆರ್‌ ಗೆಲುವು ದಾಖಲಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡಿತು. ಕಳಪೆ ಬ್ಯಾಟಿಂಗ್‌ ಮತ್ತು ಬೌಲಿಂಗ್‌ ಪ್ರದರ್ಶನದಿಂದಾಗಿ ಪ್ಯಾಟ್‌ ಕಮಿನ್ಸ್‌ ನಾಯಕತ್ವದ ಎಸ್‌ಆರ್‌ಎಚ್‌ ಸೋಲೊಪ್ಪಿಕೊಂಡಿತು.‌ ಇದನ್ನೂ ಓದಿ: ಕೆಕೆಆರ್‌ ಗೆಲುವು ಬಂಗಾಳದಾದ್ಯಂತ ಸಂಭ್ರಮ ತಂದಿದೆ – ನೂತನ ಚಾಂಪಿಯನ್ಸ್‌ಗೆ ದೀದಿ ವಿಶ್‌

KKR Win 2

ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿ ಹೈದರಾಬಾದ್‌ ಕಳಪೆ ಬ್ಯಾಟಿಂಗ್‌ ಪ್ರದರ್ಶನ ನೀಡಿತು. ಯಾವೊಬ್ಬ ಬ್ಯಾಟರ್‌ ಕೂಡ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾದರು. ಬ್ಯಾಟರ್‌ಗಳು ಒಬ್ಬೊಬ್ಬರಾಗಿ ಪೆವಿಲಿಯನ್‌ ಪರೇಡ್‌ ನಡೆಸಿದರು. ಇದನ್ನು ಕಂಡು ಫ್ರಾಂಚೈಸಿ ಮಾಲೀಕರಾದ ಕಾವ್ಯ ಮಾರನ್‌ ಸಪ್ಪೆ ಮೋರೆ ಹಾಕಿಕೊಂಡು ಕೂತಿದ್ದರು. ಪಂದ್ಯದ ಆರಂಭದಿಂದ ಕೊನೆ ವರೆಗೂ ಅವರ ಮುಖದಲ್ಲಿ ಬೇಸರ ಆವರಿಸಿತ್ತು.

ಕೊನೆ ಕ್ಷಣದಲ್ಲಿ ಹೈದರಾಬಾದ್‌ ಸೋಲು ಖಚಿತವಾಗುತ್ತಿದ್ದಂತೆ ಕಾವ್ಯ ಮಾರನ್‌ ಅವರ ಮನದಲ್ಲಿದ್ದ ದುಃಖದ ಕಟ್ಟೆಯೊಡೆಯಿತು. ಎಷ್ಟೇ ಪ್ರಯತ್ನಿಸಿದರೂ ಅಳು ತಡೆಯಲಾಗಲಿಲ್ಲ. ಕಣ್ಣಲ್ಲಿ ನೀರು ಹರಿಯಿತು. ಈ ದೃಶ್ಯವು ಕ್ಯಾಮೆರಾದಲ್ಲಿ ಸೆರೆಯಾಗಿದೆ. ತಂಡ ಸೋತರೂ ರನ್ನರ್‌ ಅಪ್‌ ವರೆಗೂ ಉತ್ತಮ ಪ್ರದರ್ಶನ ನೀಡಿದ್ದಕ್ಕೆ ಚಪ್ಪಾಳೆ ತಟ್ಟುವ ಮೂಲಕ ಆಟಗಾರರನ್ನು ಅಭಿನಂದಿಸಿದರು. ಇದನ್ನೂ ಓದಿ: IPL 2024 Champions: 10 ವರ್ಷಗಳ ಬಳಿಕ ಚಾಂಪಿಯನ್‌ ಪಟ್ಟ ಮುಡಿಗೇರಿಸಿಕೊಂಡ ಕೆಕೆಆರ್‌!

SRH

2024ರ ಐಪಿಎಲ್‌ನಲ್ಲಿ ಕೋಲ್ಕತ್ತಾ ನೈಟ್‌ರೈಡರ್ಸ್‌ ತಂಡವು ಎಸ್‌ಆರ್‌ಹೆಚ್‌ ವಿರುದ್ಧ ಅದ್ಧೂರಿ ಜಯ ಸಾಧಿಸುವ ಮೂಲಕ 17ನೇ ಆವೃತ್ತಿಯ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಇನ್ನೂ 3ನೇ ಬಾರಿಗೆ ಫೈನಲ್‌ ಪ್ರವೇಶಿಸಿದ್ದ ಸನ್‌ ರೈಸರ್ಸ್‌ ಹೈದರಾಬಾದ್‌ ತಂಡವು 2ನೇ ಬಾರಿಗೆ ರನ್ನರ್‌ ಅಪ್‌ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿದೆ.

2012 ಮತ್ತು 2014ರಲ್ಲಿ ಗೌತಮ್‌ ಗಂಭೀರ್‌ ನಾಯಕತ್ವದಲ್ಲಿ ಚಾಂಪಿಯನ್‌ ಪಟ್ಟ ಮುಡಿಗೇರಿಸಿಕೊಂಡಿದ್ದ ಕೋಲ್ಕತ್ತಾ ನೈಟ್‌ರೈಡರ್ಸ್‌ ತಂಡ 10 ವರ್ಷಗಳ ಬಳಿಕ ಶ್ರೇಯಸ್‌ ಅಯ್ಯರ್‌ ಅವರ ನಾಯಕತ್ವದಲ್ಲಿ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಅಲ್ಲದೇ ಹಿಂದೆ ತಂಡದ ನಾಯಕನಾಗಿ ಟ್ರೋಫಿ ಗೆದ್ದುಕೊಟ್ಟಿದ್ದ ಗೌತಮ್‌ ಗಂಭೀರ್‌ ಈ ಬಾರಿ ತಂಡದ ಕೋಚ್‌ ಆಗಿ ಟ್ರೋಫಿ ತಂದುಕೊಟ್ಟಿರುವುದು ವಿಶೇಷ. ಇದನ್ನೂ ಓದಿ: ಕೆಕೆಆರ್‌ ಬೌಲರ್‌ಗಳ ಅಬ್ಬರಕ್ಕೆ ಕರಗಿದ ಸನ್‌ ತಾಪ – 113ಕ್ಕೆ ಹೈದರಾಬಾದ್‌ ಆಲೌಟ್‌; ಕೋಲ್ಕತ್ತಾಗೆ 114 ರನ್‌ಗಳ ಗುರಿ!

Share This Article