ಮಂಗಳೂರು: ಜುಲೈ 20ರಂದು ಆಳ್ವಾಸ್ ಕಾಲೇಜಿನಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದ ವಿದ್ಯಾರ್ಥಿನಿ ಕಾವ್ಯಶ್ರೀ ಮನೆಗೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿದ್ದಾರೆ.
ಇದನ್ನೂ ಓದಿ: ಕಾವ್ಯ ನಿಗೂಢ ಸಾವು: ಆಳ್ವಾಸ್ ಸಂಸ್ಥೆ ವಿರುದ್ಧ ಭಾರೀ ಪ್ರತಿಭಟನೆ- ಹಾಸ್ಟೆಲ್‍ನ ಸಿಸಿಟಿವಿ ದೃಶ್ಯ ಬಿಡುಗಡೆ
Advertisement
ಕಾವ್ಯ ಪೋಷಕರಿಗೆ ಸಾಂತ್ವನ ಹೇಳಿದ ನಳಿನ್ ಕುಮಾರ್, ಆರೋಪಿಗಳು ಯಾರೇ ಆಗಿದ್ದರೂ ಸರಿ ಅವರನ್ನು ಬಂಧಿಸಬೇಕು. ಈ ಕುರಿತು ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿ ರಾಜ್ಯ ಮತ್ತು ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆಯುತ್ತೇನೆ. ಪ್ರಕರಣದಲ್ಲಿರುವ ಗೊಂದಲಗಳು ಶೀಘ್ರ ನಿವಾರಣೆಯಾಗಬೇಕು ಅಂದ್ರು.
Advertisement
ಇದನ್ನೂ ಓದಿ: ವಿದ್ಯಾರ್ಥಿನಿ ಕಾವ್ಯ ಪೂಜಾರಿ ಕೇಸ್: ಆಳ್ವಾಸ್ ಕಾಲೇಜು ಮುಖ್ಯಸ್ಥ ಮೋಹನ್ ಆಳ್ವ ಹೇಳಿದ್ದೇನು?
Advertisement
Advertisement
ಕಾವ್ಯ ಅನುಮಾನಾಸ್ಪದ ಸಾವಿನ ಪ್ರಕರಣದಲ್ಲಿ ರಾಜಕೀಯ ನಾಯಕರು ತೆಪ್ಪಗಾಗಿರುವುದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಾಕ ಆಕ್ರೋಶ ವ್ಯಕ್ತವಾಗಿತ್ತು.
ಕಾವ್ಯಾ ಸಾವಿನ ಸಮಗ್ರ ತನಿಖೆಗೆ ಒತ್ತಾಯಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯೆದುರು ಎಬಿವಿಪಿ ಪ್ರತಿಭಟನೆ ನಡೆಸಿತು. ನ್ಯಾಯಕ್ಕಾಗಿ ಆಗ್ರಹಿಸಿ ವಿದ್ಯಾರ್ಥಿಗಳು ಧರಣಿ ನಡೆಸಿದ್ರು.