ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಇಡಿ ವಿಚಾರಣೆ ನಡೆಸುತ್ತಿದೆ. ಕಾಂಗ್ರೆಸ್ ಕಾರ್ಯಕರ್ತರು ರ‍್ಯಾಲಿ ಕೈಗೊಂಡಿದ್ದು, ಪ್ರತಿಭಟನೆ ವೇಳೆ ಸಂಸದ ಕೆ.ಸಿ.ವೇಣುಗೋಪಾಲ್ ಅಸ್ವಸ್ಥರಾಗಿದ್ದಾರೆ.
Advertisement
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಇಡಿ ಮುಂದೆ ರಾಹುಲ್ ಗಾಂಧಿ ವಿಚಾರಣೆಗೆ ಹಾಜರಾಗಿದ್ದು, ಅವರಿಗೆ ಪ್ರಿಯಾಂಕಾ ಗಾಂಧಿ ಸಹ ಸಾಥ್ ಕೊಟ್ಟಿದ್ದಾರೆ. ಈ ವೇಳೆ ಇಡಿ ಕಚೇರಿ ಹೊರಗೆ ಇದ್ದ ಕಾಂಗ್ರೆಸ್ ಕಾರ್ಯಕರ್ತರು ಅವರಿಗೆ ಬೆಂಬಲ ಸೂಚಿಸಲು ಎಐಸಿಸಿ ಕಚೇರಿಯಿಂದ ಇಡಿ ಕಚೇರಿವರೆಗೂ ಪಾದಯಾತ್ರೆ ಮಾಡಿದರು. ಈ ವೇಳೆ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಏಳು ಬಸ್‍ಗಳಲ್ಲಿ ತುಂಬಿಕೊಂಡು ಹೋಗಿದ್ದಾರೆ.
Advertisement
This is how BJP have mistreated General Secretary Organization of India's oldest political party.
Sh. KC Venugopal's shirt torned before taking into police custody. pic.twitter.com/ZZobxotOgj
— Anshuman Sail Nehru (@AnshumanSail) June 13, 2022
Advertisement
ಇಡಿ ಕಚೇರಿ ಬಳಿ ಬಂದಿದ್ದ ಕಾಂಗ್ರೆಸ್ ನಾಯಕರಾದ ಕೆ.ಸಿ.ವೇಣುಗೋಪಾಲ್ ಮತ್ತು ಡಿ.ಕೆ.ಸುರೇಶ್ ಮತ್ತಿತರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಈ ವೇಳೆ ಪೊಲೀಸರು ವೇಣುಗೋಪಾಲ್ ಅವರ ಅಂಗಿಯನ್ನು ಹರಿದಿದ್ದು, ಅವರು ಅಸ್ವಸ್ಥರಾಗಿದ್ದಾರೆ.
Advertisement