ಬೆಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆ (CET)ಗೆ ಸಂಬಂಧಿಸಿದಂತೆ ಸರ್ಕಾರದ ಸಮನ್ವಯ ಸೂತ್ರಕ್ಕೆ ಹೈಕೋರ್ಟ್ (Karnataka High Court) ಗ್ರೀನ್ ಸಿಗ್ನಲ್ ನೀಡಿದ್ದು, ಈ ಮೂಲಕ ಬಿಕ್ಕಟ್ಟು ಶಮನಗೊಂಡಿದೆ.
Advertisement
ಹೈಕೋರ್ಟ್ ಗ್ರೀನ್ ಸಿಗ್ನಲ್ ಹಿನ್ನೆಲೆಯಲ್ಲಿ ಸೀಟು ಹಂಚಿಕೆ ಪ್ರಕ್ರಿಯೆಯನ್ನು ಸರ್ಕಾರ ಆರಂಭಿಸಿದೆ. ಸೆಪ್ಟೆಂಬರ್ 29ಕ್ಕೆ ಸಿಇಟಿ ಪರಿಷ್ಕೃತ ರಾಂಕಿಂಗ್ ಪಟ್ಟಿ ಕೆಇಎ ಬಿಡುಗಡೆ ಮಾಡಲಿದೆ. ಅಕ್ಟೋಬರ್ 3 ರಿಂದ ಮೊದಲ ಹಂತದ ಸೀಟು ಹಂಚಿಕೆ ಪ್ರಕ್ರಿಯೆ ಪ್ರಾರಂಭ ಮಾಡುವುದಾಗಿ ಉನ್ನತ ಶಿಕ್ಷಣ ಸಚಿವ ಅಶ್ವಥ್‍ನಾರಾಯಣ್ (Ashwath Narayan) ತಿಳಿಸಿದ್ದಾರೆ. ಇದನ್ನೂ ಓದಿ: ಗ್ರಾಹಕರಿಗೆ ಕರೆಂಟ್ ಶಾಕ್ – ಅಕ್ಟೋಬರ್‌ನಿಂದ 43 ಪೈಸೆ ಏರಿಕೆ
Advertisement
Advertisement
ಪುನಾರಾವರ್ತಿತರ 2021ನೇ ಸಾಲಿನ ಪಿಯುಸಿ ಅಂಕಗಳನ್ನು 2022ನೇ ಸಾಲಿನ ಸಿಇಟಿಗೆ ಪರಿಗಣಿಸುವ ವಿಚಾರದಲ್ಲಿ ಸಮಸ್ಯೆಯಾಗಿತ್ತು. ಈ ಕುರಿತು ಸಿಇಟಿ ರ್‍ಯಾಂಕಿಂಗ್‌ನಲ್ಲಿ ಪುನರಾವರ್ತಿತ ವಿದ್ಯಾರ್ಥಿಗಳ ಪಿಯುಸಿ ಅಂಕ ಪರಿಗಣಿಸಲ್ಲವೆಂದು ಸರ್ಕಾರ ಜುಲೈ 30 ರಂದು ಆದೇಶ ಹೊರಡಿಸಿತ್ತು. ರಾಜ್ಯ ಸರ್ಕಾರದ ಈ ಆದೇಶವನ್ನು ಪ್ರಶ್ನಿಸಿ ಪುನರಾವರ್ತಿತ ವಿದ್ಯಾರ್ಥಿಗಳು ಹೈಕೋರ್ಟ್‍ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಪುನರಾವರ್ತಿತ ವಿದ್ಯಾರ್ಥಿಗಳ ಪಿಯುಸಿ ಅಂಕವನ್ನು ಪರಿಗಣಿಸುವಂತೆ ಆದೇಶ ನೀಡಿತ್ತು. ಇದನ್ನೂ ಓದಿ: ಕಾಂಗ್ರೆಸ್‍ನ PayCM ಅಸ್ತ್ರಕ್ಕೆ ಬಿಜೆಪಿಯಿಂದ KaiPe ಪ್ರತ್ಯಸ್ತ್ರ
Advertisement
ಹೈಕೋರ್ಟ್ 2020-21ನೇ ಸಾಲಿನ ದ್ವಿತೀಯ ಪಿಯುಸಿಯಲ್ಲಿ ತೇರ್ಗಡೆಯಾಗಿದ್ದ, ಸಿಇಟಿ ಪರೀಕ್ಷೆಗೆ ಪುನರಾವರ್ತಿತರಾಗಿರುವ ಅಭ್ಯರ್ಥಿಗಳಿಗೆ ವೃತ್ತಿಪರ ಕೋರ್ಸ್‍ಗಳ ಸೀಟು ಹಂಚಿಕೆ ಮಾಡುವಾಗ ದ್ವಿತೀಯ ಪಿಯುಸಿಯಲ್ಲಿ ಅಭ್ಯರ್ಥಿಗಳು ಗಳಿಸಿದ ಅಂಕಗಳನ್ನು ಸಹ ಪರಿಗಣಿಸಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಹೈಕೋರ್ಟ್ ಆದೇಶ ನೀಡಿತ್ತು. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸರ್ಕಾರ ಹೈಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಲು ಮುಂದಾಗಿತ್ತು. ಸರ್ಕಾರದ ಈ ನಿರ್ಧಾರಕ್ಕೆ ಪುನರಾವರ್ತಿತ ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದರು.
ಈ ಸಂಬಂಧ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷ ಪ್ರೊ.ಬಿ. ತಿಮ್ಮೇಗೌಡ ಅಧ್ಯಕ್ಷತೆಯಲ್ಲಿ ಐವರ ಸಮಿತಿಯನ್ನು ರಚಿಸಿತ್ತು. ಸಮಿತಿ ವರದಿಯನ್ನು ಸಿದ್ದಪಡಿಸಿತ್ತು. ವರದಿಯನ್ನು ಸರ್ಕಾರದ ಪರ ಹೆಚ್ಚುವರಿ ಅಡ್ವೊಕೇಟ್ ಜನರಲ್ ಧ್ಯಾನ್ ಚಿನ್ನಪ್ಪ ಇಂದು ಹೈಕೋರ್ಟ್‍ಗೆ ವರದಿಯನ್ನು ನೀಡಿದರು. ಈ ವರದಿಯನ್ನು ಹೈಕೋರ್ಟ್ ಪುರಸ್ಕರಿಸಿದೆ.