ನಟ ಧ್ರುವ ಸರ್ಜಾ (Dhruva Sarja) ಸಿನಿಮಾದಲ್ಲಿ ಮಾತ್ರ ಹೀರೋ ಅಲ್ಲ, ನಿಜ ಜೀವನದಲ್ಲೂ ಹೀರೋ ಎಂಬುದನ್ನು ಪ್ರೂವ್ ಮಾಡಿದ್ದಾರೆ. ಇದೀಗ ಪುಟ್ಟ ಮಗುವಿನ ಸಂಕಷ್ಟಕ್ಕೆ ಧ್ರುವ ಸಾಥ್ ನೀಡಿದ್ದಾರೆ. ಕಣ್ಣಿನಲ್ಲಿ ಪೊರೆ ಬೆಳೆದ ಪುಟ್ಟ ಕಂದಮ್ಮನ ಟ್ರೀಟ್‌ಮೆಂಟ್‌ಗೆ ನಟ ಸಹಾಯ ಮಾಡಿ ಮಾನವೀಯತೆ ಮೆರೆದಿದ್ದಾರೆ. ಇದನ್ನೂ ಓದಿ:ಮತ್ತೆ ಪ್ರಭಾಸ್‌ಗೆ ಜೊತೆಯಾದ ಬಾಲಿವುಡ್ ಬ್ಯೂಟಿ ದಿಶಾ ಪಟಾನಿ
ಪುಟ್ಟ ಮಗು ಚಿರಂಜೀವಿಗೆ ಎರಡು ಕಣ್ಣಿನಲ್ಲೂ ಪೊರೆ ಬೆಳೆದ ಹಿನ್ನೆಲೆ ಟ್ರೀಟ್‌ಮೆಂಟ್‌ಗಾಗಿ ಧ್ರುವ ಸಹಕರಿಸಿದ್ದಾರೆ. ಮಂಜುನಾಥ ನೇತ್ರಾಲಯದ ವೈದ್ಯರ ಬಳಿ ಮಾತನಾಡಿ ಚಿಕಿತ್ಸೆ ಕೊಡಿಸಿದ್ದಾರೆ. ಹಾಗಾಗಿ ಪುಟ್ಟ ಮಗುವಿಗೆ ಯಶಸ್ವಿಗಾಗಿ ಕಣ್ಣಿನ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಈ ಮೂಲಕ ಗಾರೆ ಕೆಲಸ ಮಾಡುವ ತಂದೆಯ ಬೆನ್ನಿಗೆ ನಿಂತಿದ್ದಾರೆ. ಇದನ್ನೂ ಓದಿ:ದುನಿಯಾ ವಿಜಯ್ ನಿರ್ದೇಶನದ ಸಿನಿಮಾದಲ್ಲಿ ಉಮಾಶ್ರೀ
ಅಂದಹಾಗೆ, ನಿನ್ನೆ (ಮಾ.31) ಸುದೀಪ್ (Sudeep) ಸ್ಪೈನ್ ಮ್ಯಾಸ್ಕ್ಯೂಲಾರ್ ಅಟ್ರೋಫಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಪುಟ್ಟ ಕಂದಮ್ಮ ಕೀರ್ತನಾ ಚಿಕಿತ್ಸೆಗೆ ಸಹಾಯ ಮಾಡಿದ್ದರು. ಇದರ ಚಿಕಿತ್ಸೆಗೆ 16 ಕೋಟಿ ರೂ. ಬೇಕಿರೋದ್ರಿಂದ ಸುದೀಪ್, ನಾನು ನನ್ನ ಕೈಲಾದ ಸಹಾಯ ಮಾಡಿದ್ದೀನಿ, ನೀವೆಲ್ಲರೂ ಕೈಜೋಡಿಸಿ ಎಂದು ವಿಡಿಯೋ ಮೂಲಕ ಅಭಿಮಾನಿಗಳಿಗೆ ಮನವಿ ಮಾಡಿದ್ದರು. ಈ ಬೆನ್ನಲ್ಲೇ ಧ್ರುವ ಸರ್ಜಾ ಕೂಡ ಮತ್ತೊಂದು ಪುಟ್ಟ ಮಗುವಿನ ಬಾಳಿಗೆ ಬೆಳಕಾಗಿರೋದನ್ನು ನೋಡಿ ಫ್ಯಾನ್ಸ್ ಶ್ಲಾಘಿಸಿದ್ದಾರೆ.