ಕರುನಾಡ ಕ್ರೇಜಿಸ್ಟಾರ್ ರವಿಚಂದ್ರನ್ (Ravichandran) ಇಂದು ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಅವರ ಹುಟ್ಟು ಹಬ್ಬದ (Birthday) ಸಂದರ್ಭದಲ್ಲಿ ಎರಡು ಸಿನಿಮಾಗಳ ಪೋಸ್ಟರ್ ರಿಲೀಸ್ ಆಗಿವೆ. ಜೋಗಿ ಪ್ರೇಮ್ ನಿರ್ದೇಶನದ ಕೆಡಿ (KD) ಚಿತ್ರದಲ್ಲಿ ರವಿಚಂದ್ರನ್ ನಟಿಸುತ್ತಿದ್ದು, ಆ ಸಿನಿಮಾದ ಪೋಸ್ಟರ್ (Poster) ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಜೊತೆಗೆ ದ ಜಡ್ಜ್ ಮೆಂಟ್ ಸಿನಿಮಾದಲ್ಲಿ ರವಿಚಂದ್ರನ್ ನಟಿಸಿದ್ದು ಆ ಸಿನಿಮಾ ಟೀಮ್ ಕೂಡ ಪೋಸ್ಟರ್ ರಿಲೀಸ್ ಮಾಡಿದೆ.
ಕೆಲ ತಿಂಗಳ ಹಿಂದೆಯಷ್ಟೇ ರವಿಚಂದ್ರನ್ ಅವರ ಫಸ್ಟ್ ಲುಕ್ ಅನ್ನು ಕೆಡಿ ಟೀಮ್ ರಿಲೀಸ್ ಮಾಡಿತ್ತು. ಹಣೆಯಲ್ಲಿ ವಿಭೂತಿ, ಕಪ್ಪು ಶರ್ಟ್ ಮತ್ತು ಪ್ಯಾಂಟ್ ರವಿಚಂದ್ರನ್ ಖಡಕ್ ಆಗಿ ಕಾಣಿಸಿಕೊಂಡಿದ್ದರು. ತಮ್ಮ ಬಲಗಾಲಿನಲ್ಲಿ ಕಾರಿನ ಡೋರ್ ಓಪನ್ ಮಾಡಿ ಪೋಸ್ ಕೊಟ್ಟಿದ್ದರು. ಎಂದೂ ಕಾಣಿಸಿಕೊಂಡಿರದ ಲುಕ್‌ನಲ್ಲಿ ರವಿಚಂದ್ರನ್ ಮಿಂಚಿದ್ದರು. ಇದನ್ನೂ ಓದಿ:ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಕಮಲಿ’ ನಟಿ ಯಶಸ್ವಿನಿ
ಕೆವಿಎನ್ ನಿರ್ಮಾಣದ ಧ್ರುವ ಸರ್ಜಾ (Dhruva Sarja) ಮತ್ತು ನಿರ್ದೇಶಕ ಪ್ರೇಮ್ (Director Prem) ಕಾಂಬಿನೇಷನ್ ಸಿನಿಮಾ `ಕೆಡಿ’ ಸಖತ್ ಸದ್ದು ಮಾಡ್ತಿದೆ. ಚಿತ್ರದ ಟೈಟಲ್ ಮೂಲಕ ಕ್ಯೂರಿಯಸ್ ಹುಟ್ಟು ಹಾಕಿರುವ ಈ ಸಿನಿಮಾ ಬಗ್ಗೆ ಫ್ಯಾನ್ಸ್ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸಂಜಯ್ ದತ್, ಶಿಲ್ಪಾ ಶೆಟ್ಟಿ ಈ ಸಿನಿಮಾ ಮೂಲಕ ಮತ್ತೊಮ್ಮೆ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟಿದ್ದಾರೆ.
ಈಗಾಗಲೇ ಕೆಡಿ ಸಿನಿಮಾದ ಬಹುತೇಕ ಚಿತ್ರೀಕರಣ ಕೂಡ ಮುಗಿದಿದೆ ಎಂದು ಹೇಳಲಾಗುತ್ತಿದೆ. ಸಂಜಯ್ ದತ್ ಅವರ ಶೂಟಿಂಗ್ ವೇಳೆ ಅವರಿಗೆ ಸಣ್ಣಪುಟ್ಟ ಗಾಯಗಳಾಗಿತ್ತು. ಆ ನಂತರ ಚಿತ್ರೀಕರಣ ಸ್ವಲ್ಪ ದಿನದ ಮಟ್ಟಿಗೆ ನಿಲ್ಲಿಸಲಾಗಿತ್ತು. ಪ್ರೇಮ್ ಮತ್ತೆ ಈ ಸಿನಿಮಾದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ.