ಬೆಂಗಳೂರು: ವೃತ್ತಿಪರ ಕೋರ್ಸ್‌ಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಬ್ಯಾಟ್ಸ್‌ನಲ್ಲಿ ಮಾಹಿತಿ ತಪ್ಪಾಗಿರುವ ಬಗ್ಗೆ ದೂರುಗಳು ಬರುತ್ತಿದ್ದು, ಅಂತಹವರು ಮಾಹಿತಿಯನ್ನು ತಿದ್ದುಪಡಿ ಮಾಡಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆಯು ಅವಕಾಶ ಕಲ್ಪಿಸಿದೆ.
ಸಂಬಂಧಪಟ್ಟ ವಿದ್ಯಾರ್ಥಿಗಳು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಹೇಳಿದ್ದಾರೆ. ಇದನ್ನೂ ಓದಿ: ಜಮ್ಮು & ಕಾಶ್ಮೀರದಲ್ಲಿ ಏಕಾಂಗಿಯಾಗಿ ಸ್ಪರ್ಧೆ- NDA ಸೇರುವ ಸುಳಿವು ಕೊಟ್ರಾ ಫಾರೂಕ್ ಅಬ್ದುಲ್ಲಾ?
Advertisement
Advertisement
ಎಲ್ಲ ರೀತಿಯ ತಿದ್ದುಪಡಿಗಳನ್ನು ಆಯಾ ಜಿಲ್ಲೆಗಳ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ (ಆಡಳಿತ) ಕಚೇರಿಯಲ್ಲಿ ಮಾಡಲಾಗುತ್ತಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
Advertisement
Advertisement
ವಿದ್ಯಾರ್ಥಿ 10 ನೇ ತರಗತಿ ಉತ್ತೀರ್ಣರಾಗಿದ್ದು, ಸ್ಯಾಟ್ಸ್ ತಂತ್ರಾಂಶದಲ್ಲಿ ಹೆಸರು ಹಾಗೂ ವರ್ಷವಾರು ತರಗತಿ ತಪ್ಪಾಗಿದ್ದರೆ ತಿದ್ದುಪಡಿಗೆ ವಿದ್ಯಾರ್ಥಿಯು ಮನವಿ ಸಲ್ಲಿಸಿದ್ದಲ್ಲಿ ಸರಿ ಮಾಡಿಕೊಡಲಾಗುತ್ತದೆ. ಅದರ ನಂತರ ಸಿಇಟಿಗೆ ಅರ್ಜಿ ಸಲ್ಲಿಸಬಹುದು ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ವಸತಿ ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆಗೆ ಸರ್ಕಾರ ಬ್ರೇಕ್