ಬೆಂಗಳೂರು: ಸ್ನಾತಕೋತ್ತರ ದಂತವೈದ್ಯಕೀಯ (ಪಿಜಿಇಟಿ- ಎಂಡಿಎಸ್-24) ಕೋರ್ಸ್‌ನ ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆ.3 ರಿಂದ ಆರಂಭವಾಗಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.
Advertisement
ಮೊದಲನೇ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿ ಛಾಯ್ಸ್-2 ಆಯ್ಕೆ ಮಾಡಿ, ಶುಲ್ಕ ಪಾವತಿಸಿರುವವರು, ಛಾಯ್ಸ್-3 ಅನ್ನು ಆಯ್ಕೆ ಮಾಡಿರುವವರು ಹಾಗೂ ಯಾವುದೇ ಸೀಟು ಹಂಚಿಕೆಯಾಗದೇ ಇರುವವರು ಆ.3ರಿಂದ ಕೆಇಎ ಕಚೇರಿಯಲ್ಲಿ ತಮ್ಮ ಎಲ್ಲ ಮೂಲ ದಾಖಲೆಗಳನ್ನು ಸಲ್ಲಿಸಬೇಕಾಗುತ್ತದೆ. ದಾಖಲೆ ಸಲ್ಲಿಸದಿದ್ದರೆ ಅಂತಹವರಿಗೆ ಸೀಟು ಹಂಚಿಕೆ ಮಾಡಲಾಗುವುದಿಲ್ಲ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಮುಡಾ ಸೈಟ್ ಹಗರಣ ಕೇಸ್; ಸಿಎಂ ಸಿದ್ದರಾಮಯ್ಯಗೆ ರಾಜ್ಯಪಾಲರಿಂದ ನೋಟಿಸ್
Advertisement
Advertisement
ಎರಡನೇ ಸುತ್ತಿನ ಸೀಟು ಹಂಚಿಕೆಗೆ ಆ.3 ರಂದು ಸೀಟ್ ಮ್ಯಾಟ್ರಿಕ್ಸ್ ಪ್ರಕಟಿಸಲಾಗುತ್ತದೆ. ಆ.4ರಿಂದ 6ರವರೆಗೆ ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ಸಮಯ ನೀಡಲಾಗುತ್ತದೆ. ಆ.7ರಂದು ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶ ಹಾಗೂ ಆ.8ರಂದು ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ. ನಂತರ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಂಡು ಶುಲ್ಕ ಪಾವತಿಸಲು ಹಾಗೂ ಕಾಲೇಜಿಗೆ ವರದಿ ಮಾಡಿಕೊಳ್ಳಲು ಆ.13 ಕೊನೆ ದಿನ ಎಂದು ಅವರು ವಿವರಿಸಿದ್ದಾರೆ.