ಬೆಂಗಳೂರು: ಎಂಜಿನಿಯರಿಂಗ್ ಸೇರಿದಂತೆ ಇತರ ಸಿಇಟಿ (CET) ಕೋರ್ಸ್‌ಗಳ ಮೂರನೇ ಹಾಗೂ ಅಂತಿಮ ಸುತ್ತಿನ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (Karnataka Examination Authority) ಶುಕ್ರವಾರ (ಸೆ.4) ಪ್ರಕಟಿಸಿದೆ.
3ನೇ ಸುತ್ತಿನಲ್ಲಿ ಹೊಸದಾಗಿ ಸೀಟು ಹಂಚಿಕೆಯಾಗಿರುವ ಅಭ್ಯರ್ಥಿಗಳ ಅನುಕೂಲಕ್ಕಾಗಿ ಇದೇ ಮೊದಲ ಬಾರಿಗೆ ಚಾಯ್ಸ್-4 ಆಯ್ಕೆಯ ಅವಕಾಶವನ್ನು ನೀಡಲಾಗಿದೆ. ಅಂತಹವರು ಸೆ.5ರಂದು ಸಂಜೆ 5 ಗಂಟೆಯೊಳಗೆ ಚಾಯ್ಸ್-4 ಆಯ್ಕೆ ಮಾಡಿಕೊಂಡು ಕೌನ್ಸೆಲಿಂಗ್ ಪ್ರಕ್ರಿಯೆಯಿಂದ ಹೊರ ಹೋಗಬಹುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ (H Prasanna) ತಿಳಿಸಿದ್ದಾರೆ.ಇದನ್ನೂ ಓದಿ: ನಾನೇಕೆ U-Turn ತಗೋಬೇಕು? ನಾಲಿಗೆ ಮೇಲೆ ಹಿಡಿತ ಇರಲಿ, ಬೆಂಗಳೂರಿಗೆ ಬಿಜೆಪಿಯದ್ದೇ ಶಾಪ: ಡಿಕೆಶಿ ಕಿಡಿ
ಎರಡನೇ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿ, ಕಾಲೇಜಿನಲ್ಲಿ ಪ್ರವೇಶ ಪಡೆದು, ಅಪ್ ಗ್ರೇಡೇಷನ್‌ಗೆ ಮೂರನೇ ಸುತ್ತಿಗೆ ಬಂದಿರುವ ಅಭ್ಯರ್ಥಿಗಳು ಮಾತ್ರ ಕಡ್ಡಾಯವಾಗಿ ಕಾಲೇಜಿನಲ್ಲಿ ಪ್ರವೇಶ ಪಡೆಯಬೇಕು. ಅವರಿಗೆ ಚಾಯ್ಸ್ -4 ಆಯ್ಕೆಗೆ ಅವಕಾಶ ಇರುವುದಿಲ್ಲ. ಹೀಗಾಗಿ ಅಂತಹವರು ಅಂತಿಮ ಫಲಿತಾಂಶಕ್ಕಾಗಿ ಕಾಯಬೇಕು ಎಂದು ಸ್ಪಷ್ಟಪಡಿಸಿದ್ದಾರೆ.
ಅಂತಿಮ ಫಲಿತಾಂಶ ಪ್ರಕಟಣೆ ನಂತರ ಯಾವುದೇ ಕಾರಣವನ್ನು ನೀಡದೇ ಕಡ್ಡಾಯವಾಗಿ ಕಾಲೇಜಿನಲ್ಲಿ ಪ್ರವೇಶ ಪಡೆಯಬೇಕು. ಒಂದು ವೇಳೆ ಎಂಜಿನಿಯರಿಂಗ್ ಸೀಟು ಬೇಡ ಎಂದುಕೊಂಡಲ್ಲಿ ಅಂತಹ ಅಭ್ಯರ್ಥಿಗಳಿಗೆ ನಿಗದಿತ ಶುಲ್ಕ ಮತ್ತು ಐದು ಪಟ್ಟು ದಂಡ ಪಾವತಿ ಅನ್ವಯವಾಗುತ್ತದೆ. ಅಲ್ಲದೆ, ಇದು ಸರ್ಕಾರದ ಪಾಲಿನ ಸೀಟ್ ಬ್ಲಾಕಿಂಗ್ ಎಂದು ಪರಿಗಣಿಸಿ ಅಂತಹ ಅಭ್ಯರ್ಥಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದ್ದಾರೆ.ಇದನ್ನೂ ಓದಿ: ಪಿಎಂ ಸೇತು ಯೋಜನೆ| ಬೆಂಗಳೂರು, ಕಲಬುರಗಿಯ ತಲಾ 4 ಐಟಿಐ ಆಯ್ಕೆ: ಎಂ ಬಿ ಪಾಟೀಲ್
ಚಾಯ್ಸ್-4 ಆಯ್ಕೆ ಮಾಡಿಕೊಳ್ಳುವ ಅಭ್ಯರ್ಥಿಗಳ ಎಲ್ಲ ಸೀಟುಗಳನ್ನು ಸೇರಿಸಿಕೊಂಡು, ಹಾಲಿ ಇರುವ ಆಪ್ಷನ್ಸ್ ಪರಿಗಣಿಸಿ 3ನೇ ಸುತ್ತಿನ ಸೀಟು ಹಂಚಿಕೆಯನ್ನು ಪುನಃ ಕೈಗೊಂಡು ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ವಿವರಿಸಿದ್ದಾರೆ.
ಆರ್ಕಿಟೆಕ್ಚರ್, ಯೋಗ ಮತ್ತು ನ್ಯಾಚುರೋಪತಿ, ಕೃಷಿ ವಿಜ್ಞಾನ, ಪಶುವೈದ್ಯಕೀಯ, ಬಿ.ಎಸ್‌ಸಿ. (ನರ್ಸಿಂಗ್), ಬಿ-ಫಾರ್ಮ, ಫಾರ್ಮ್-ಡಿ, ಬಿಪಿಟಿ, ಬಿಪಿಒ, ಅಲೈಡ್ ಹೆಲ್ತ್ ಸೈನ್ಸ್ ಕೋರ್ಸುಗಳ ಫಲಿತಾಂಶವೂ ಈ ಸುತ್ತಿನಲ್ಲಿ ಸೇರಿದೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಸಾಲ ಮನ್ನಾಕ್ಕೆ ನೆರವು ಕೋರಿ ದೆಹಲಿಗೆ ಸರ್ವಪಕ್ಷ ನಿಯೋಗ: ಡಿಕೆಶಿ
