– ವದಂತಿ ಹಬ್ಬಿಸುವವರ ವಿರುದ್ಧ ಕಾನೂನು ಕ್ರಮ – ಕೆಇಎ ಎಚ್ಚರಿಕೆ
ಬೆಂಗಳೂರು: ‘ನೀಟ್’ ಪರೀಕ್ಷೆ (NEET Exam) ಬರೆದವರು ಕೂಡ ರಾಜ್ಯದ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಸೀಟು ಪಡೆಯಲು ಸಿಇಟಿಗೆ ನೋಂದಣಿ ಮಾಡಿಸಬೇಕು ಎಂಬ ನಿಯಮ ಹಿಂದಿನಿಂದಲೂ ಜಾರಿಯಲ್ಲಿದೆ. ಇದು ಹೊಸದಾಗಿ ಜಾರಿಯಾಗಿರುವ ನಿಯಮವೇನೂ ಅಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸ್ಪಷ್ಟಪಡಿಸಿದೆ.
ಈ ಸಂಬಂಧವಾಗಿ ಕೆಇಎ ಹೊಸ ನಿಯಮ (KEA New Rules) ಜಾರಿಗೊಳಿಸಿರುವುದರಿಂದ ಹಲವಾರು ವಿದ್ಯಾರ್ಥಿಗಳಿಗೆ ಅನಾನುಕೂಲವಾಗಿದೆ ಎಂದು ಕೆಲವರು ಅನಗತ್ಯವಾಗಿ ಗುಲ್ಲೆಬ್ಬಿಸುತ್ತಿರುವ ಕಾರಣಕ್ಕೆ ಕೆಇಎ ಈ ಸ್ಪಷ್ಟನೆ ನೀಡಿದೆ. ಪ್ರಸಕ್ತ ಸಾಲಿನಲ್ಲಿ ‘ನೀಟ್’ ಬರೆದಿರುವ ಸುಮಾರು 2 ಲಕ್ಷ ಅಭ್ಯರ್ಥಿಗಳು (NEET Candidates) ಸಿಇಟಿಗೆ ನೋಂದಣಿ ಮಾಡಿಸಿದ್ದಾರೆ. ಇದರಲ್ಲಿ 50,000 ವಿದ್ಯಾರ್ಥಿಗಳು ಹೊರ ರಾಜ್ಯಗಳಿಗೆ ಸೇರಿದವರಾಗಿದ್ದಾರೆ. ಇದನ್ನೂ ಓದಿ: ಮೋದಿಗೆ 75 ವರ್ಷವಾದ್ರೂ ಪ್ರಧಾನಿ ಆಗಿಯೇ ಆಗ್ತಾರೆ- ಕೇಜ್ರಿವಾಲ್‌ಗೆ ಅಮಿತ್ ಶಾ ಟಕ್ಕರ್
Advertisement
Advertisement
ರಾಜ್ಯದಲ್ಲಿ ವೈದ್ಯಕೀಯ ಸೀಟು (Medical Seats) ಹಂಚಿಕೆಯನ್ನು ಕೆಇಎ ನಿರ್ವಹಿಸುತ್ತಾ ಬಂದಿದ್ದು, ನೀಟ್ ಬರೆದವರು ಸಿಇಟಿಗೆ ನೋಂದಣಿ ಮಾಡಿಸಬೇಕೆಂಬುದು ಈ ಹಿಂದಿನ ವರ್ಷಗಳಲ್ಲಿಯೂ ಜಾರಿಯಲ್ಲಿತ್ತು. ಅದೇ ವ್ಯವಸ್ಥೆ ಈ ವರ್ಷವೂ ಯಾವುದೇ ಬದಲಾವಣೆ ಇಲ್ಲದೆ ಮುಂದುವರಿದಿದೆ. ಎಷ್ಟು ಬಾರಿ ನೀಟ್ ಪರೀಕ್ಷೆ ತೆಗೆದುಕೊಂಡಿದ್ದರೂ ಕೂಡ ಆಯಾ ವರ್ಷದ ಸೀಟು ಹಂಚಿಕೆ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕಾದರೆ ಸಿಇಟಿಗೆ ನೋಂದಣಿ (CET Registration) ಮಾಡಿಸಿಕೊಳ್ಳುವುದು ಕಡ್ಡಾಯ. ರಾಜ್ಯದಲ್ಲಿ ವೈದ್ಯಕೀಯ ಸೀಟು ಹಂಚಿಕೆಗೆ ಕೆಇಎ ನೋಡಲ್ ಸಂಸ್ಥೆ ಎಂದೂ ಕೆಇಎ ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಆರ್ಸಿಬಿ ವಿರುದ್ಧದ ಪಂದ್ಯಕ್ಕೆ ಪಂತ್ ಔಟ್; ಡೆಲ್ಲಿ ತಂಡಕ್ಕೆ ಹೊಸ ನಾಯಕ – ಬೆಂಗಳೂರು ಬಾಯ್ಸ್ ಕೈಹಿಡಿಯುತ್ತಾ ಲಕ್?
Advertisement
ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಕೋರ್ಸ್ ಗಳ ಕೌನ್ಸೆಲಿಂಗ್ ಪ್ರಕ್ರಿಯೆಯನ್ನು ಏಕಕಾಲದಲ್ಲಿ ನಡೆಸುತ್ತಿದ್ದು ಇದಕ್ಕಾಗಿ ಒಂದೇ ಅರ್ಜಿಯನ್ನು ಸ್ವೀಕರಿಸಲಾಗಿದೆ. ಈ ಸಂಬಂಧ ರಾಜ್ಯ ಮತ್ತು ರಾಷ್ಟಮಟ್ಟದಲ್ಲೂ ಮಾಧ್ಯಮಗಳಲ್ಲಿ ಸಾಕಷ್ಟು ಪ್ರಚಾರ ಕೊಡಲಾಗಿದೆ ಎಂದೂ ಕೆಇಎ ತಿಳಿಸಿದೆ. ಕೆಇಎ ನಿಯಮಗಳನ್ನು ಈ ರೀತಿ ತಪ್ಪಾಗಿ ಅರ್ಥೈಸಿ, ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಗೊಂದಲ ಉಂಟು ಮಾಡುವವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕೆಇಎ ಎಚ್ಚರಿಸಿದೆ.