ಕಲಬುರಗಿ: ಕೆಇಎ ಪರೀಕ್ಷಾ ಅಕ್ರಮ (KEA Exam Paper Leak Case) ಬಗೆದಷ್ಟು ಬಯಲಾಗುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದ ಹಾಗೂ ಪರೀಕ್ಷಾ ಮೇಲ್ವಿಚಾರಕರಿಗೆ ಹಣ ನೀಡಿದ ಆರೋಪದಡಿ ಹಾಸ್ಟೆಲ್ ವಾರ್ಡನ್ ಒಬ್ಬ ಕೆಲಸಕ್ಕೆ ಸೇರಿ ಒಂದೇ ತಿಂಗಳಲ್ಲಿ ಜೈಲುಪಾಲಾಗಿದ್ದಾನೆ.
ಸಮಾಜ ಕಲ್ಯಾಣ ಇಲಾಖೆಯ ಚಿಕ್ಕಬಳ್ಳಾಪುರದ (Chikkaballapur) ವೃತ್ತಿಪರ ಹಾಸ್ಟೆಲ್ ವಾರ್ಡನ್ ಬಸವರಾಜ್ ಯಾಳವಾರ್ ಬಂಧಿತ ಆರೋಪಿಯಾಗಿದ್ದಾನೆ. ಈತ ಪ್ರಶ್ನೆ ಪತ್ರಿಕೆ ಲೀಕ್ ಮಾಡಲು ಪ್ರಿನ್ಸಿಪಾಲ್‍ಗೆ 40 ಲಕ್ಷ ರೂ. ಹಣ ನೀಡಿದ್ದ ಎಂದು ಸಿಐಡಿ (CID) ತನಿಖೆ ವೇಳೆ ತಿಳಿದು ಬಂದಿದೆ. ಈತನ ವಿರುದ್ಧ ಕಲಬುರಗಿಯ (Kalaburugi) ಅಶೋಕ್ ನಗರ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾಗುತ್ತಿದ್ದಂತೆ ಈತ ತಲೆ ಮರೆಸಿಕೊಂಡಿದ್ದ. ಇದೀಗ ಸಿಐಡಿ ಪೊಲೀಸರು ಈತನನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಮದುವೆ ಪ್ರಸ್ತಾಪ ನಿರಾಕರಿಸಿದ್ದಕ್ಕೆ ಟಿವಿ ನಿರೂಪಕನನ್ನು ಅಪಹರಿಸಿ ಪೊಲೀಸರ ಅತಿಥಿಯಾದ ಮಹಿಳಾ ಉದ್ಯಮಿ
Advertisement
Advertisement
ಆರೋಪಿ ಬಸವರಾಜ್ ಬಂಧನಕ್ಕೆ ಆತ ಓದಿದ ಪ್ರದೇಶಗಳಲ್ಲಿ, ಕಲಬುರಗಿ ವಿವಿ, ಸಿಂದಗಿ ಹಾಗೂ ಬೆಂಗಳೂರಲ್ಲಿ ಪೊಲೀಸರು ಹುಡುಕಾಟ ನಡೆಸಿದ್ದರು. ಕೊನೆಗೆ ಚಿಕ್ಕಬಳ್ಳಾಪುರದಲ್ಲಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ವಾರ್ಡನ್ ಆಗಿದ್ದಾನೆ ಎಂಬ ಸುಳಿವಿನ ಮೇಲೆ ಬಂಧಿಸಲಾಗಿದೆ. ಪ್ರಕರಣದಲ್ಲಿ ಬಸವರಾಜ್ 15ನೇ ಆರೋಪಿಯಾಗಿದ್ದಾನೆ. ಈತನ ವಿರುದ್ಧ ಸಿಐಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.
Advertisement
Advertisement
ಇಂಗ್ಲಿಷ್‍ನಲ್ಲಿ ಎಂ.ಎ, ಬಿ.ಇಡಿ ಪದವೀಧರನಾಗಿರುವ ಬಸವರಾಜ್ ಯಾಳವಾರ್ ಜನವರಿ 19ರಂದು ವಾರ್ಡನ್ ಆಗಿ ಕೆಲಸಕ್ಕೆ ಸೇರಿದ್ದ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಜೋಕಾಲಿ ಆಡುವಾಗ ಹಗ್ಗಕ್ಕೆ ಕುತ್ತಿಗೆ ಸಿಲುಕಿ ಬಾಲಕ ದರ್ಮರಣ