ಬೆಂಗಳೂರು: ಎಂಜಿನಿಯರಿಂಗ್ ನ 3ನೇ ಸೆಮಿಸ್ಟರ್ ಅಥವಾ ಎರಡನೇ ವರ್ಷಕ್ಕೆ ನೇರ ಪ್ರವೇಶ ಕಲ್ಪಿಸಲು ಡಿಪ್ಲೊಮಾ ಅಭ್ಯರ್ಥಿಗಳಿಗೆ ನಡೆಸಿದ DCET-26 ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು ಇಂದು ಪ್ರಕಟಿಸಲಾಗಿದೆ.
ಫಲಿತಾಂಶ ಪ್ರಕಟಿಸಿರುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ (H. Prasanna) ತಿಳಿಸಿದ್ದಾರೆ. ಇದನ್ನೂ ಓದಿ: ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುತ್ತೇವೆ: ಡಿಕೆ ಶಿವಕುಮಾರ್
ಅಭ್ಯರ್ಥಿಗಳು ಕೆಇಎ ವೆಬ್ ಸೈಟ್ ನಲ್ಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಫಲಿತಾಂಶ ಪಡೆಯಬಹುದು. ಮುಂದಿನ ದಿನಗಳಲ್ಲಿ ಆಪ್ಷನ್ಸ್ ದಾಖಲಿಸಲು ಅವಕಾಶ ನೀಡಲಾಗುವುದು ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಚಾಮುಂಡಿ ಬೆಟ್ಟಕ್ಕೆ ಬಸ್‌ನಲ್ಲೇ ಪ್ರಯಾಣಿಸಿದ ಸಚಿವ ಯತೀಂದ್ರ ಸಿದ್ದರಾಮಯ್ಯ
