ಬೆಂಗಳೂರು: ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿರುವ ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಗುಡ್ ನ್ಯೂಸ್ ಕೊಟ್ಟಿದೆ. ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರು (FDA) ಹಾಗೂ ದ್ವಿತೀಯ ದರ್ಜೆ ಸಹಾಯಕರ (SDA) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇದ್ದ ಕೊನೆಯ ದಿನಾಂಕವನ್ನು ನವೆಂಬರ್ 30ರವರೆಗೆ ವಿಸ್ತರಿಸಲಾಗಿದೆ.
ಈ ಬಗ್ಗೆ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಅವರು ಅಧಿಕೃತ ಮಾಹಿತಿ ನೀಡಿದ್ದಾರೆ. ಈ ಮೊದಲು ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಲು ನವೆಂಬರ್ 26 ಕೊನೆಯ ದಿನವಾಗಿತ್ತು. ಆದ್ರೆ, ಹಲವು ಅಭ್ಯರ್ಥಿಗಳು ದಿನಾಂಕ ವಿಸ್ತರಿಸುವಂತೆ ಮನವಿ ಮಾಡಿಕೊಂಡಿದ್ದರಿಂದ, ಅಭ್ಯರ್ಥಿಗಳ ಹಿತದೃಷ್ಟಿಯಿಂದ ಈಗ ನವೆಂಬರ್ 30ರವರೆಗೆ ಅವಕಾಶ ನೀಡಲಾಗಿದೆ.
ಅರ್ಜಿ ಸಲ್ಲಿಸುವವರು ನವೆಂಬರ್ 30ರೊಳಗೆ ಪರೀಕ್ಷಾ ಶುಲ್ಕವನ್ನೂ ಕಡ್ಡಾಯವಾಗಿ ಪಾವತಿಸಬೇಕು. ಉಳಿದಂತೆ ನೇಮಕಾತಿ ನಿಯಮಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಹಾಗೂ ಈಗಾಗಲೇ ನಿಗದಿಪಡಿಸಿರುವ ದಿನಾಂಕದಂದೇ ಲಿಖಿತ ಪರೀಕ್ಷೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಲಾಗಿದೆ.ಇದನ್ನೂ ಓದಿ: ಏಕಕಾಲಕ್ಕೆ ಬಾಗಲಕೋಟೆ ಜಿಲ್ಲೆಯ 8 ಉಪನೋಂದಣಾಧಿಕಾರಿ ಕಛೇರಿಗಳ ಮೇಲೆ ಲೋಕಾ ದಾಳಿ
ಕೊನೆಯ ಕ್ಷಣದ ಸರ್ವರ್ ಸಮಸ್ಯೆ ಅಥವಾ ತಾಂತ್ರಿಕ ತೊಂದರೆಗಳಿಗೆ ಕಾಯದೆ, ಆಸಕ್ತ ಅಭ್ಯರ್ಥಿಗಳು ಆದಷ್ಟು ಬೇಗ ನವೆಂಬರ್ 30ರೊಳಗೆ ತಮ್ಮ ಅರ್ಜಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಕೆಇಎ ಸಲಹೆ ನೀಡಿದೆ.ಇದನ್ನೂ ಓದಿ: ಕೇವಲ 51 ಬಾಲ್ಗೆ ದ್ವಿಶತಕ; ಲಿಸ್ಟ್-ಎ ಕ್ರಿಕೆಟ್ನಲ್ಲಿ ಹೊಸ ದಾಖಲೆ ಬರೆದ ವೈಭವ್
