ಬೆಂಗಳೂರು: ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕೆ (KSET 2024)ಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಇದ್ದ ಕೊನೆಯ ದಿನಾಂಕವನ್ನು ಆಗಸ್ಟ್ 28ರ ವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ (H Prasanna) ಬುಧವಾರ ತಿಳಿಸಿದ್ದಾರೆ.
ಅರ್ಜಿ ಸಲ್ಲಿಸಲು ಆ.22 ಕೊನೆ ದಿನವಾಗಿತ್ತು. ಸಾರ್ವಜನಿಕರ ಕೋರಿಕೆ ಮೇರೆಗೆ ದಿನಾಂಕ ವಿಸ್ತರಿಸಿದ್ದು, ಆ.30ರ ಒಳಗೆ ಶುಲ್ಕ ಪಾವತಿಸಲು ಅವಕಾಶ ನೀಡಲಾಗಿದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: Jhakhand | ಹೊಸ ರಾಜಕೀಯ ಪಕ್ಷ ಆರಂಭಿಸುವ ಸುಳಿವು ನೀಡಿದ ಚಂಪೈ ಸೊರೆನ್
ಅರ್ಹತಾ ನಿಬಂಧನೆ, ಪರೀಕ್ಷಾ ದಿನಾಂಕ ಇತ್ಯಾದಿ ವಿವರಗಳಿಗೆ ಜುಲೈ 13ರಂದು ಹೊರಡಿಸಿದ್ದ ಅಧಿಸೂಚನೆಯನ್ನು ನೋಡಬೇಕು ಎಂದೂ ಅವರು ಸಲಹೆ ನೀಡಿದ್ದಾರೆ. ಇದನ್ನೂ ಓದಿ: Exclusive | ರೇಣುಕಾಸ್ವಾಮಿ ಕೊಲೆ ಪ್ರಕರಣದ ಚಾರ್ಜ್ ಶೀಟ್‌ನಲ್ಲಿ ನಟ ದರ್ಶನ್ ಆರೋಪಿ ನಂ.1