ಬೆಂಗಳೂರು: ವಿವಿಧ ಇಲಾಖೆಗಳ ಒಟ್ಟು 4,723 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕೆಇಎ ಪ್ರತ್ಯೇಕ ಅಧಿಸೂಚನೆಗಳನ್ನು ಹೊರಡಿಸಿದೆ. ಇದರಲ್ಲಿ ಕಲ್ಯಾಣ ಕರ್ನಾಟಕ (Kalyana Karnataka) ವೃಂದದ ಹುದ್ದೆಗಳೂ ಸೇರಿವೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (Karnataka Examination Authority) ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ (H Prasanna) ಮಾಹಿತಿ ನೀಡಿದ್ದಾರೆ.
ಗ್ರಾಮ ಆಡಳಿತ ಅಧಿಕಾರಿಯ 572, ಸರ್ವೆ ಇಲಾಖೆಯ 750 ಭೂಮಾಪಕರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುವ ಶಾಲೆಗಳ 1,087 ಶಿಕ್ಷಕರು ಹಾಗೂ 2,314 ಕೆಎಸ್‌ಆರ್‌ಪಿ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕಲ್ಯಾಣ ಕರ್ನಾಟಕ ವೃಂದಕ್ಕೆ ಸಂಬಂಧಿಸಿದಂತೆ ಎಲ್ಲ ಇಲಾಖೆಗಳ ಹುದ್ದೆಗಳಿಗೂ ಪ್ರತ್ಯೇಕ ಅಧಿಸೂಚನೆ ಹೊರಡಿಸಲಾಗಿದೆ. ಇದನ್ನೂ ಓದಿ: ಭಾರತದಲ್ಲಿ 1.91 ಲಕ್ಷ ಕೋಟಿ ಹೂಡಿಕೆಗೆ ನ್ಯೂಜಿಲೆಂಡ್ ಒಪ್ಪಿಗೆ – 10 ಒಪ್ಪಂದಗಳಿಗೆ ಉಭಯ ರಾಷ್ಟ್ರಗಳು ಸಹಿ
ಕೆಲವು ಹುದ್ದೆಗಳಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಇಂದಿನಿಂದಲೇ ಆರಂಭವಾಗಿದೆ. ಅರ್ಹರು ಅಧಿಸೂಚನೆಯನ್ನು ಒಮ್ಮೆ ಓದಿ, ಅನ್ವಯವಾಗುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅಧಿಸೂಚನೆಯಲ್ಲೇ ಪರೀಕ್ಷಾ ದಿನಾಂಕಗಳನ್ನು ಪ್ರಕಟಿಸಿದ್ದು, ಆ ಪ್ರಕಾರ ಸಿದ್ಧತೆ ಮಾಡಿಕೊಳ್ಳಲು ಸೂಚಿಸಲಾಗಿದೆ.
ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕವನ್ನು ನೋಡಿಕೊಂಡು ನಿಗದಿತ ದಿನದೊಳಗೆ ಅರ್ಜಿ ಸಲ್ಲಿಸಿ, ಶುಲ್ಕ ಪಾವತಿಸಬೇಕು ಎಂದು ತಿಳಿಸಲಾಗಿದೆ. ನೇಮಕಾತಿ ಕುರಿತ ಹೆಚ್ಚಿನ ಮಾಹಿತಿಗೆ ಕೆಇಎ ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ.ಇದನ್ನೂ ಓದಿ: ರಾಮಮಂದಿರ ದೇಣಿಗೆ ಲೂಟಿ ಬೆನ್ನಲ್ಲೇ ರಾಜ್ಯದಲ್ಲಿ ಅಲರ್ಟ್ – ಶೀಘ್ರವೇ ಹುಂಡಿ ಹಣ ಎಣಿಕೆಗೆ ಮಾರ್ಗಸೂಚಿ
