ಬೆಂಗಳೂರು: ಎಸ್‌ಎಸ್‌ಎಲ್‌ಸಿ ಹಾಗೂ ದ್ವೀತಿಯ ಪಿಯುಸಿ ಪರೀಕ್ಷೆ ಬಳಿಕ ಸಿಇಟಿ ಪರೀಕ್ಷೆಗೂ ಹಿಜಬ್‌ಗೆ ರಾಜ್ಯ ಸರ್ಕಾರ ನಿಷೇಧ ಹೇರಿದೆ. ಈ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳು ಮಾಹಿತಿ ನೀಡಿದ್ದು, ಎಸ್‌ಎಸ್‌ಎಲ್‌ಸಿ ಮತ್ತು ದ್ವೀತಿಯ ಪಿಯುಸಿಗೆ ಅನ್ವಯವಾಗುವ ನಿಯಮಗಳೇ ಸಿಇಟಿ ಪರೀಕ್ಷೆಗೂ ಅನ್ವಯವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.
ಜೂನ್ 16, 17 ಹಾಗೂ 18 ರಂದು ಈ ವರ್ಷದ ಸಿಇಟಿ ಪರೀಕ್ಷೆಗಳು ನಡೆಯಲಿವೆ. ಪರೀಕ್ಷೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿದ್ಧತೆ ಮಾಡಿಕೊಳ್ಳುತ್ತಿದೆ. ಹಿಜಬ್ ವಿಚಾರದಲ್ಲಿ ಹೈಕೋರ್ಟ್ ಆದೇಶ ಪಾಲನೆ ಮಾಡುವಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಈ ಹಿನ್ನಲೆಯಲ್ಲಿ ಸಿಇಟಿ ಪರೀಕ್ಷೆಗೆ ವಿದ್ಯಾರ್ಥಿಗಳು ಹಿಜಬ್ ಸೇರಿದಂತೆ ಧಾರ್ಮಿಕ ಭಾವನೆಗಳ ಉಡುಪುಗಳನ್ನು ಧರಿಸದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸ್ಪಷ್ಟನೆ ನೀಡಿದೆ. ಇದನ್ನೂ ಓದಿ: ಮೇ ಅಂತ್ಯಕ್ಕೆ ರಾಜ್ಯದ ಜನತೆಗೆ ಗುಡ್ ನ್ಯೂಸ್?
Advertisement
Advertisement
ಏನೆಲ್ಲಾ ನಿಷೇಧ?
ಸಿಇಟಿ ಪರೀಕ್ಷೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹಲವು ನಿಯಮಗಳನ್ನು ಜಾರಿ ಮಾಡಿದೆ. ವಿದ್ಯಾರ್ಥಿಗಳು ಕಡ್ಡಾಯವಾಗಿ ನಿಯಮ ಪಾಲನೆ ಮಾಡಬೇಕು ಎಂದು ಸೂಚನೆ ನೀಡಿದೆ. ಸಿಇಟಿ ಪರೀಕ್ಷೆಗೆ ವಿದ್ಯಾರ್ಥಿಗಳು ಹಿಜಬ್ ಧರಿಸುವಂತಿಲ್ಲ. ಹಿಜಬ್ ಅಲ್ಲದೇ ಕೇಸರಿ ಶಾಲು ಸೇರಿದಂತೆ ಯಾವುದೇ ಧಾರ್ಮಿಕ ಭಾವನೆಗೆ ಧಕ್ಕೆಯಾಗುವ ವಸ್ತ್ರಗಳನ್ನು ವಿದ್ಯಾರ್ಥಿಗಳು ಧರಿಸುವಂತಿಲ್ಲ. ಇದನ್ನೂ ಓದಿ: ಪರಿಷತ್ ಅಭ್ಯರ್ಥಿಗಳ ಆಸ್ತಿ ವಿವರ – ಬಹುತೇಕರು ಕೋಟಿ ಒಡೆಯರು!
Advertisement
Advertisement
ಪರೀಕ್ಷಾ ಕೇಂದ್ರಗಳಿಗೆ ಎಲೆಕ್ಟ್ರಾನಿಕ್ ಉಪಕರಣಗಳನ್ನು ಸಂಪೂರ್ಣ ನಿಷೇಧ ಮಾಡಲಾಗಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ವಾಚ್ ನಿಷೇಧ (ಕೈ ಗಡಿಯಾರ) ಮಾಡಲಾಗಿದೆ. ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳು ಆಭರಣಗಳನ್ನು ಧರಿಸುವುದಕ್ಕೂ ನಿಷೇಧ ಹಾಕಲಾಗಿದೆ. ಮೊಬೈಲ್ ಸೇರಿದಂತೆ ಎಲ್ಲಾ ರೀತಿಯ ಎಲೆಕ್ಟ್ರಾನಿಕ್ ಉಪಕರಣಗಳನ್ನು ನಿಷೇಧಿಸಿದ್ದು, ಪ್ರತಿ ಕೇಂದ್ರದಲ್ಲೂ ಕೆಇಎಯಿಂದಲೇ ಗಡಿಯಾರ ಅಳವಡಿಕೆ ಮಾಡಲು ತೀರ್ಮಾನ ಮಾಡಲಾಗಿದೆ.
ವಿದ್ಯಾರ್ಥಿಗಳಿಗೆ ಕುಡಿಯುವ ನೀರು ತೆಗೆದುಕೊಂಡು ಹೋಗಲು ಮಾತ್ರ ಅವಕಾಶ ನೀಡಲು ಕೆಇಎ ತೀರ್ಮಾನ ಮಾಡಿದೆ.