ಬೆಂಗಳೂರು: ಕೆಎಸ್‌ಡಿಎಲ್ (KSDL) ಮತ್ತು ಕೃಷಿ ಮಾರಾಟ ಇಲಾಖೆಯ ವಿವಿಧ ಹುದ್ದೆಗಳಿಗೆ ಜನವರಿ 10 ಮತ್ತು 12ರ ಬದಲಿಗೆ ಜನವರಿ 18ರಂದು ಲಿಖಿತ ಪರೀಕ್ಷೆ (Recruitment Exams) ನಡೆಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.
ಕೃಷಿ ಮಾರಾಟ ಇಲಾಖೆಯ ಮಾರುಕಟ್ಟೆ ಮೇಲ್ವಿಚಾರಕ ಹುದ್ದೆಗೆ ಜನವರಿ 10ರಂದು ಹಾಗೂ ಕರ್ನಾಟಕ ಸಾಬೂನು ಮತ್ತು ಮಾರ್ಜಕ ಲಿಮಿಟೆಡ್ ನ ಕಿರಿಯ ಅಧಿಕಾರಿ (ಉತ್ಪಾದನೆ ಮತ್ತು ನಿರ್ವಹಣೆ), ಕಿರಿಯ ಅಧಿಕಾರಿ (ಸಾಮಗ್ರಿ ಮತ್ತು ಉಗ್ರಾಣ) ಹುದ್ದೆಗಳಿಗೆ ಜನವರಿ 12ರಂದು ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ ಕೆಲವು ತಾಂತ್ರಿಕ ಕಾರಣಗಳಿಂದಾಗಿ ಈ ದಿನಾಂಕಗಳ ಬದಲಿಗೆ ಜನವರಿ 18 ರಂದು ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: 16 ಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬ್ಯಾನ್ ಮಾಡಿ – ಕೇಂದ್ರಕ್ಕೆ ಮದ್ರಾಸ್ ಹೈಕೋರ್ಟ್ ಸಲಹೆ
ಉಳಿದಂತೆ ಜನವರಿ 19ರ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಹೆಚ್ಚಿನ ವಿವರಗಳಿಗೆ ಕೆಇಎ ವೆಬ್‌ಸೈಟ್ ನೋಡಲು ಅವರು ಕೋರಿದ್ದಾರೆ. ಇದನ್ನೂ ಓದಿ: BDA ಕಾರ್ಯಾಚರಣೆ; 10 ಕೋಟಿ ರೂ. ಆಸ್ತಿ ವಶ

