ಬೆಂಗಳೂರು: ಎಂಜಿನಿಯರಿಂಗ್ ಎರಡನೇ ವರ್ಷಕ್ಕೆ ಲ್ಯಾಟರಲ್ ಪ್ರವೇಶ ಪಡೆಯುವ ಡಿಪ್ಲೊಮಾ ಅಭ್ಯರ್ಥಿಗಳಿಗೆ ತಮ್ಮ ಡಿಸಿಇಟಿ ಅರ್ಜಿಯಲ್ಲಿನ ಮೀಸಲಾತಿ ವಿವರಗಳನ್ನ ತಿದ್ದುಪಡಿ ಮಾಡಿಕೊಳ್ಳಲು ಆಗಸ್ಟ್ 11ರ ವರೆಗೆ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.
ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಪ್ರಕಾರ ಪಡೆದ ಹೊಸ ಆರ್‌ಡಿ ಸಂಖ್ಯೆ ಹಾಗೂ ವಿವಿಧ ಪ್ರವರ್ಗ ಗಳ/ಆದಾಯ ಪ್ರಮಾಣ ಪತ್ರದ ಆರ್ ಡಿ ಸಂಖ್ಯೆಯನ್ನ ಕೂಡ ದಾಖಲಿಸಲು ಅವಕಾಶ ನೀಡಲಾಗಿದೆ.
ಅಭ್ಯರ್ಥಿಗಳ ಕೋರಿಕೆ ಮೇರೆಗೆ ಈ ಅವಕಾಶ ಕಲ್ಪಿಸಿದ್ದು, ಇದರ ಉಪಯೋಗ ಪಡೆದುಕೊಳ್ಳಲು ಕೋರಲಾಗಿದೆ ಎಂದು ಅವರು ವಿವರಿಸಿದ್ದಾರೆ.



