ಬೆಂಗಳೂರು: ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಪದವಿ ಹಾಗೂ ಪಿಯುಸಿ-ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಒಟ್ಟು 4,744 ಹುದ್ದೆಗಳ ನೇಮಕಾತಿಗೆ ಈ ತಿಂಗಳಲ್ಲಿಯೇ ಅಧಿಸೂಚನೆ ಹೊರಡಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ (KEA) ನಿರ್ದೇಶಕ ಹೆಚ್.ಪ್ರಸನ್ನ (H Prasanna) ತಿಳಿಸಿದ್ದಾರೆ.
ಈ ಸಂಬಂಧ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಈ ಹುದ್ದೆಗಳಿಗೆ ನವೆಂಬರ್ ಹಾಗೂ ಡಿಸೆಂಬರ್ ತಿಂಗಳಲ್ಲಿ ಲಿಖಿತ ಪರೀಕ್ಷೆ ಕೂಡ ನಡೆಸಲು ಸಿದ್ಧತೆ ನಡೆದಿದೆ. ಯಾವ ಇಲಾಖೆಯ ಯಾವ ಹುದ್ದೆಗೆಳಿಗೆ ಅರ್ಜಿ ಸಲ್ಲಿಸಬಹುದು ಎಂಬುವುದರ ವಿವರಗಳನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ ಅಂತ ತಿಳಿಸಿದ್ದಾರೆ. ಇದನ್ನೂ ಓದಿ: ಸಿಗರೇಟ್ ಸೇದುವ ವಿಚಾರಕ್ಕೆ ಯುವಕನ ಬರ್ಬರ ಹತ್ಯೆ: 8 ಮಂದಿ ಜೀವಾವಧಿ ಶಿಕ್ಷೆ
ಪಠ್ಯಕ್ರಮದ ವಿವರಗಳನ್ನು ಕೂಡ ನೀಡಲಾಗಿದೆ. ಒಮ್ಮೆ ನೋಡಿಕೊಂಡು ಅಧ್ಯಯನ ಆರಂಭಿಸಿ. ಪದವಿ ಮಟ್ಟದ ತಾಂತ್ರಿಕೇತರ ಹುದ್ದೆಗಳು 2,421 ಹಾಗೂ ಪಿಯುಸಿ ಮಟ್ಟದ ತಾಂತ್ರಿಕೇತರ ಹುದ್ದೆಗಳು 2,062 ಇವೆ. ತಾಂತ್ರಿಕ ಹುದ್ದೆಗಳು 261 ಇದ್ದು, ನಂತರದ ದಿನಗಳಲ್ಲಿ ಇನ್ನೂ ಹೊಸ ಇಲಾಖೆ ಮತ್ತು ಹುದ್ದೆಗಳು ಸೇರುವ ಸಾಧ್ಯತೆ ಇದೆ ಅಂತ ಮಾಹಿತಿ ನೀಡಿದ್ದಾರೆ.
