ಮುಂಬೈ: ಟೀಂ ಇಂಡಿಯಾ ಆಟಗಾರ ಕೇದಾರ್ ಜಾಧವ್ ಗಾಯದ ಸಮಸ್ಯೆಯಿಂದ ಹೊರ ಬಂದಿದ್ದು, ವಿಶ್ವಕಪ್ ಟೂರ್ನಿಗೆ ಫಿಟ್ ಆಗಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಈ ಕುರಿತು ಚೆನ್ನೈ ಸೂಪರ್ ಕಿಂಗ್ಸ್ ತಂಡ ತನ್ನ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದು, ಜಾಧವ್‍ಗೆ ಶುಭಕೋರಿದೆ.
ಚೆನ್ನೈ ತಂಡದ ಪರ ಐಪಿಎಲ್‍ನಲ್ಲಿ ಭಾಗವಹಿಸಿದ್ದ ಕೇದಾರ್ ಜಾಧವ್ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ವಿರುದ್ಧದ ಪಂದ್ಯದ ಫೀಲ್ಡಿಂಗ್ ವೇಳೆ ಗಾಯಗೊಂಡಿದ್ದರು. ಈ ಗಾಯದ ಸಮಸ್ಯೆಯಿಂದ ಅವರು ವಿಶ್ವಕಪ್ ಟೂರ್ನಿ ವೇಳೆಗೆ ಫಿಟ್ ಆಗುತ್ತರಾ ಎಂಬ ಅನುಮಾನ ಮೂಡಿತ್ತು. ಆದರೆ ಬಿಸಿಸಿಐ ಆಯ್ಕೆ ಸಮಿತಿ ಈ ಕುರಿತು ಖಚಿತ ಪಡಿಸಿ ಜಾಧವ್ ಮೇ 22 ರಂದು ಟೀಂ ಇಂಡಿಯಾದೊಂದಿಗೆ ಇಂಗ್ಲೆಂಡ್ ನತ್ತ ತೆರಳಲಿದ್ದಾರೆ ಎಂಬುದನ್ನು ಖಚಿತಪಡಿಸಿದೆ.
Advertisement
Advertisement
ಜಾಧವ್ ಗಾಯದ ಸಮಸ್ಯೆಯಿಂದ ಚೇತರಿಸಿಕೊಂಡಿರುದು ಟೀಂ ಇಂಡಿಯಾಗೆ ಮತ್ತಷ್ಟು ಬಲ ತುಂಬಲಿದೆ. ತಂಡದ ಮಧ್ಯಮ ಕ್ರಮಾಂಕದ ಬ್ಯಾಟಿಂಗ್‍ನಲ್ಲಿ ಜಾಧವ್ ಮುಖ್ಯ ಪಾತ್ರವಹಿಸಲಿದ್ದಾರೆ. ಅಲ್ಲದೇ ಬೌಲಿಂಗ್‍ನಲ್ಲೂ ಪ್ರಭಾವ ಬೀರಲಿದ್ದಾರೆ. ಮುಂಬೈನಲ್ಲಿ ನಡೆದ ಫಿಟ್ನೆಸ್ ಪರೀಕ್ಷೆಯಲ್ಲಿ ಜಾಧವ್ ಭಾಗವಹಿಸಿದ್ದರು. ಟೀಂ ಇಂಡಿಯಾ ತಂಡದ ಫಿಸಿಯೊ ಪ್ಯಾಟ್ರಿಕ್ ಫರ್ಹಾರ್ತ್, ಜಾಧವ್‍ರ ಫಿಟ್ನೆಸ್ ವರದಿಯನ್ನು ಬಿಸಿಸಿಐಗೆ ಸಲ್ಲಿಸಿತ್ತು.
Advertisement
Singham Kedar has been declared fit and will travel to England for the #CWC2019! After the dramatic shoulder injury sustained while fielding in the last league game of IPL, KJ has recovered just in time to join the #MenInBlue! To many many crucial runs and wickets! #WhistlePodu pic.twitter.com/r9guGEu6nx
— Chennai Super Kings (@ChennaiIPL) May 18, 2019
Advertisement
ವಿಶ್ವಕಪ್ ಟೂರ್ನಿಯ ಭಾಗವಾಗಿ ಮೇ 25 ನ್ಯೂಜಿಲೆಂಡ್ ವಿರುದ್ಧದ ನಡೆಯಲಿರುವ ಅಭ್ಯಾಸ ಪಂದ್ಯದಲ್ಲಿ ಟೀಂ ಇಂಡಿಯಾ ಆಡಲಿದ್ದು, ಈ ಹಿನ್ನೆಲೆಯಲ್ಲಿ ಮೇ 22 ರಂದೇ ತಂಡ ಇಂಗ್ಲೆಂಡ್‍ಗೆ ಪ್ರಯಾಣ ಬೆಳೆಸಲಿದೆ ಎಂಬ ಮಾಹಿತಿ ಇದೆ. ಮೇ 28 ರಂದು ಬಾಂಗ್ಲಾದೇಶದ ವಿರುದ್ಧ ಭಾರತ ಅಭ್ಯಾಸ ಪಂದ್ಯದಲ್ಲಿ ಭಾಗವಹಿಸಲಿದೆ.