ಡೆಹ್ರಾಡೂನ್: ಕೇದಾರನಾಥದ ಬಿಜೆಪಿ ಶಾಸಕಿ ಶೈಲಾ ರಾಣಿ ರಾವತ್ (68) (Shaila Rani Rawat) ಮಂಗಳವಾರ ತಡರಾತ್ರಿ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಡೆಹ್ರಾಡೂನ್‌ನ ಮ್ಯಾಕ್ಸ್ ಆಸ್ಪತ್ರೆಯಲ್ಲಿ (Dehradun Max Hospital) ಅವರು ನಿಧನರಾಗಿರುವುದಾಗಿ ಕುಟುಂಬದ ಮೂಲಗಳು ದೃಢಪಡಿಸಿವೆ. ಇದನ್ನೂ ಓದಿ: ಮತ್ತೆ ಮುನ್ನೆಲೆಗೆ ಶ್ರೀರಂಗಪಟ್ಟಣ ಜಾಮಿಯಾ ಮಸೀದಿ ವಿವಾದ – ನಾಳೆ ಹೈಕೋರ್ಟ್‌ನಲ್ಲಿ ವಿಚಾರಣೆ
ಬೆನ್ನುಮೂಳೆ ಗಾಯಕ್ಕೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದ ರಾವತ್ ಕಳೆದ ಕೆಲ ದಿನಗಳಿಂದ ಆಸ್ಪತ್ರೆಯಲ್ಲಿ ವೆಂಟಿಲೇಟರ್‌ನಲ್ಲಿದ್ದರು ಎಂದು ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ ಕೇಸ್; ಕಾಂಗ್ರೆಸ್ ಮಾಜಿ ಸಚಿವ ನಾಗೇಂದ್ರ ಇಡಿ ವಶಕ್ಕೆ!
2012ರಲ್ಲಿ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಪಡೆದಿದ್ದ ರಾವತ್ ಕೇದಾರನಾಥ ಕ್ಷೇತ್ರದಲ್ಲಿ ಮೊದಲಬಾರಿಗೆ ಗೆದ್ದು ವಿಧಾನಸಭೆ ಪ್ರವೇಶಿಸಿದ್ದರು. 2016ರಲ್ಲಿ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ವಿರುದ್ಧ ಬಂಡಾಯವೆದ್ದು ಬಿಜೆಪಿ ಸೇರಿದ್ದರು. ಇವರೊಂದಿಗೆ ಇನ್ನೂ ಅನೇಕ ಕಾಂಗ್ರೆಸ್ ಘಟಾನುಘಟಿ ನಾಯಕರು ಬಿಜೆಪಿ ಸೇರ್ಪಡೆಯಾಗಿದ್ದರು.
2017ರ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ ಸೋತಿದ್ದ ರಾವತ್, 2022ರಲ್ಲಿ ಮತ್ತೆ ಬಿಜೆಪಿಯಿಂದಲೇ ಕೇದಾರನಾಥದಲ್ಲಿ ಸ್ಪರ್ಧೆ ಮಾಡಿ ಗೆಲುವು ಸಾಧಿಸಿದ್ದರು. ಇದನ್ನೂ ಓದಿ: ನಟ ದರ್ಶನ್ ವಿಚಾರಣಾಧೀನ ಕೈದಿ ನಂಬರ್ ಹಾಕಿಕೊಂಡು ಆಟೋ ವ್ಹೀಲಿಂಗ್ ಮಾಡ್ತಿದ್ದ ಚಾಲಕ ಬಂಧನ