ಬೆಂಗಳೂರು: ಅಪ್ಪಾಜಿ ಅವರನ್ನು ವಿರೋಧಿಸುತ್ತಿದ್ದವರೇ ಈಗ ಅವರ ಕುಟುಂಬವನ್ನು ಕಡೆಗಣಿಸುವ ಕೆಲಸ ಮಾಡುತ್ತಿದ್ದಾರೆ ಎಂದು ವಿಷ್ಣುವರ್ಧನ್ ಪುತ್ರಿ ಕೀರ್ತಿ ಅನಿರುದ್ಧ್ ಗಂಭೀರವಾಗಿ ಆರೋಪಿಸಿದರು.
ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಅಪ್ಪನ ಬಗ್ಗೆ ಗೊತ್ತಿರುವವರು ನಮ್ಮ ಕುರಿತು ಹಗುರವಾಗಿ ಮಾತನಾಡುತ್ತಿರಲಿಲ್ಲ. ಕೆ.ಮಂಜು ಅವರು ಮಾಧ್ಯಮಗಳ ಮುಂದೆ ಮಾತ್ರ ಮಾತನಾಡುತ್ತಾರೆ. ನಮ್ಮ ಬಳಿಗೆ ಬಂದು ಯಾವತ್ತೂ ಚರ್ಚೆ ಮಾಡಿಲ್ಲ. ತಮಗೆ ಬಂದಂತೆ ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು.
Advertisement
ಅಪ್ಪ ಏನು ಅಂತಾ ನನಗೆ ಗೊತ್ತು. ಅವರ ಪ್ರತಿ ಅಭಿಮಾನಿಗಳ ಬಗ್ಗೆ ಮಾಹಿತಿಯಿದೆ. ನಮ್ಮನ್ನು ಯಾಕೆ ಇಷ್ಟು ದ್ವೇಷಿಸುತ್ತಿದ್ದಾರೆ, ಗುರಿ ಮಾಡುತ್ತಿದಾರೆ ಎನ್ನುವುದೇ ಅರ್ಥವಾಗುತ್ತಿಲ್ಲ ಎಂದ ಅವರು, ವೀರಕಪುತ್ರ ಶ್ರೀನಿವಾಸ್ ಅವರನ್ನು ನಾನು ನೇರವಾಗಿ ನೋಡಿಲ್ಲ. ಆದರೂ ಸ್ಮಾರಕ ವಿಚಾರದಲ್ಲಿ ಮಾಧ್ಯಮಗಳ ಮುಂದೆ ಮಾತನಾಡುತ್ತಿದ್ದಾರೆ ಎಂದು ದೂರಿದರು. ಇದನ್ನು ಓದಿ: ನಿಮಗೆ ಏನು ಅನ್ನಿಸುತ್ತೆ ಹಾಗೆಯೇ ಮಾಡಿ: ಭಾರತಿ ವಿಷ್ಣುವರ್ಧನ್
Advertisement
Advertisement
ಕಳೆದ 9 ವರ್ಷಗಳಿಂದ ಮುಖ್ಯಮಂತ್ರಿಗಳಿಗೆ ಮನವಿ ಪತ್ರಗಳನ್ನು ನೀಡುತ್ತಲೇ ಬಂದಿದ್ದೇವೆ. ಅಪ್ಪನ ಸ್ಮಾರಕದ ಯಾರೊಬ್ಬರೂ ಮಾತನಾಡಲಿಲ್ಲ. ಸಿಎಂ ಗಳು ಬದಲಾಗುತ್ತಾ ಬಂದರೇ ಹೊರತು, ಯಾರೊಬ್ಬರೂ ಸ್ಮಾರಕದ ಬಗ್ಗೆ ಯೋಚನೆ ಮಾಡಲಿಲ್ಲ. ಕುಮಾರಸ್ವಾಮಿ ಅವರು ಈಗ ನೀಡಿರುವ ಭರವಸೆಯನ್ನು ಈ ಹಿಂದೆಯೇ ನೀಡಬಹುದಿತ್ತು. ನಮ್ಮನ್ನು ಕಚೇರಿಯಿಂದ ಕಚೇರಿಗೆ ಅಲೆದಾಡಿಸಿದರು ಎಂದು ಕಿಡಿಕಾರಿದರು.
Advertisement
ಸ್ಮಾರಕ ನಿರ್ಮಾಣ ಮಾಡಿದರೆ ನಮಗೆ ಏನು ಸಿಗುತ್ತದೆ. ನಾವೇನು ಅಲ್ಲಿಯೇ ಇರುತ್ತೀವಾ? ಕೆಲವರು ಅಪ್ಪಾಜಿಯನ್ನು ಕಡೆಗಣಿಸುತ್ತಿದ್ದಾರೆ. ಮಾಧ್ಯಮಗಳ ಮುಂದೆ ಮಾತನಾಡುವವರು ನಮ್ಮ ಜೊತೆಗೆ ಕುಳಿತು ಚರ್ಚೆ ಮಾಡಲಿ. ಪರಿಸ್ಥಿತಿ ಏನು ಎನ್ನುವುದು ಅರ್ಥವಾಗುತ್ತದೆ ಎಂದು ತಿಳಿಸಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv