ಬಾಯ್ ಫ್ರೆಂಡ್ ಬಗ್ಗೆ ಮೌನ ಮುರಿದ ಕೀರ್ತಿ ಸುರೇಶ್

Public TV
1 Min Read
keerthi suresh

ಕೆಲ ದಿನಗಳ ಹಿಂದೆಯಷ್ಟೇ ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ಕೀರ್ತಿ ಸುರೇಶ್ (Keerthi Suresh) ಅವರು ಯುವ ಉದ್ಯಮಿಯೊಬ್ಬರ ಜೊತೆಗಿನ ಫೋಟೋ ಹಂಚಿಕೊಂಡಿದ್ದರು. ಇಬ್ಬರೂ ಒಂದೇ ಕಲರ್ ಬಟ್ಟೆ ಹಾಕುವುದರ ಜೊತೆಗೆ ತುಂಬಾ ಆತ್ಮೀಯವಾಗಿ ಫೋಟೋಗೆ ಪೋಸ್ ನೀಡಿದ್ದರು. ಹಾಗಾಗಿ ಯುವ ಉದ್ಯಮಿಯನ್ನು ಕೀರ್ತಿ ಮದುವೆಯಾಗಲಿದ್ದಾರಾ ಎನ್ನುವ ಅನುಮಾನ ಮೂಡಿತ್ತು. ಹಲವು ಈ ರೀತಿಯ ಪ್ರಶ್ನೆಗಳನ್ನು ಅವರಿಗೆ ಕೇಳಿದ್ದರು. ಇದೀಗ ನಟಿ ಎಲ್ಲದಕ್ಕೂ ಉತ್ತರ ಕೊಟ್ಟಿದ್ದಾರೆ.

Keerthi Suresh

ಕೀರ್ತಿ ಸುರೇಶ್ (Keerthy Suresh) ಮಹಾನಟಿಯಾಗಿ ಸಕ್ಸಸ್ ಕಂಡಿರುವ ನಟಿ. ಸೌತ್ ಸಿನಿಮಾರಂಗದಲ್ಲಿ ಗಟ್ಟಿ ನಾಯಕಿಯಾಗಿ ನೆಲೆ ಗಿಟ್ಟಿಸಿಕೊಂಡಿದ್ದಾರೆ. ಹಾಗಾಗಿ ಅವರ ಮದುವೆ (Wedding) ವಿಷ್ಯವಾಗಿ ಆಗಾಗ್ಗೆ ಸುದ್ದಿಯಲ್ಲಿರುತ್ತಾರೆ. ಇದೀಗ ಮತ್ತೆ ಮದುವೆ ವಿಚಾರ ಚಾಲ್ತಿಯಲ್ಲಿತ್ತು. ಕಾರಣ ಯುವ ಉದ್ಯಮಿಯ ಜೊತೆಗಿನ ಫೋಟೋ ವೈರಲ್ ಆಗಿತ್ತು.

keerthi suresh 1 1

ದಳಪತಿ ವಿಜಯ್ (Thalapathy Vijay) ಜೊತೆ ಕೀರ್ತಿ ಸುರೇಶ್ ಮದುವೆ ಎಂದು ಹೇಳಲಾಗಿತ್ತು. ಈ ಎಲ್ಲಾ ಊಹಾಪೋಹಗಳಿಗೂ ಕೀರ್ತಿ ತಾಯಿ ಬ್ರೇಕ್ ಹಾಕಿದ್ದರು. ಇತ್ತೀಚೆಗಷ್ಟೇ ಉದ್ಯಮಿಯೊಬ್ಬರ ಜೊತೆ ಕೀರ್ತಿ ಸುರೇಶ್ ಇರುವ ಫೋಟೋ ಎಲ್ಲೆಡೆ ಸದ್ದು ಮಾಡಿತ್ತು. ಬಾಯ್‌ಫ್ರೆಂಡ್‌ನ ಪರಿಚಯಿಸಿದ್ರಾ? ಎಂಬ ಅನುಮಾನ ಅಭಿಮಾನಿಗಳಿಗೆ ಕಾಡಿತ್ತು. ಇದನ್ನೂ ಓದಿ:ಕನ್ನಡದ ‘ಅಮೃತವರ್ಷಿಣಿ’ ಖ್ಯಾತಿಯ ನಟ ಶರತ್ ಬಾಬು ನಿಧನ

keerthi suresh

ಕೀರ್ತಿ ಸುರೇಶ್ ಪ್ರೀತಿಲಿ ಬಿದ್ದಿದ್ದಾರೆ ಅನ್ನುವ ಸುದ್ದಿ ವೈರಲ್ ಆಗಿತ್ತು. ಆದರೆ, ಆತ ತನ್ನ ಸ್ನೇಹಿತನೆಂದು ಕೀರ್ತಿ ಹೇಳಿಕೊಂಡಿದ್ದಾರೆ. ಈ ವಿಚಾರದಲ್ಲಿ ಸ್ನೇಹಿತರನ್ನು (Friends) ಎಳೆತರಬೇಡಿ ಎಂದು ಮನವಿ ಮಾಡಿದ್ದಾರೆ.  ಸ್ನೇಹಿತನ ಬರ್ತ್‌ಡೇ ಪಾರ್ಟಿಯಲ್ಲಿ ಆತನೊಟ್ಟಿಗೆ ಇರುವ ಫೋಟೊಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾಗಿ ತಿಳಿಸಿದ್ದಾರೆ. ಅಂದಹಾಗೆ ಆತನ ಹೆಸರು ಫರ್ಹಾನ್ ಬಿನ್ ಲೈತ್ (Farhan Bin Laith). ರಿಯಲ್ ಎಸ್ಟೇಟ್ ಉದ್ಯಮಿ. ರೆಸ್ಟೋರೆಂಟ್ ಒಡೆಯ.

Share This Article