ನವದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ತಿಹಾರ್ ಜೈಲಿನಲ್ಲಿ (Tihar Jail) ನಿಧಾನಗತಿಯಲ್ಲಿ ಸಾವಿನತ್ತ ತಳ್ಳಲಾಗುತ್ತಿದೆ ಎಂದು ಎಎಪಿ ನಾಯಕ ಸೌರಭ್ ಭಾರದ್ವಾಜ್ ಆರೋಪಿಸಿದ್ದಾರೆ. ಜೈಲಿನೊಳಗೆ ಇನ್ಸುಲಿನ್ ಮತ್ತು ಕೇಜ್ರಿವಾಲ್ ಅವರ ವೈದ್ಯರ ಸಮಾಲೋಚನೆಗೆ ಒತ್ತಾಯಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ನ್ಯಾಯಾಲಯವು ತನ್ನ ಆದೇಶವನ್ನು ಕಾಯ್ದಿರಿಸಿದ ಮರುದಿನವೇ ಈ ಆರೋಪ ಮಾಡಲಾಗಿದೆ.
#WATCH | Delhi: AAP leader & Delhi minister Saurabh Bharadwaj says, "Arvind Kejriwal has been suffering from diabetes for 20-22 years. He has been on insulin for 12 years. Once a patient goes on insulin, his sugar can be controlled only with insulin. In Delhi, every family has a… pic.twitter.com/llxnmGd9xr
— ANI (@ANI) April 20, 2024
Advertisement
ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾತನಾಡಿದ ಅವರು, ಟೈಪ್ -2 ಮಧುಮೇಹದಿಂದ ಬಳಲುತ್ತಿರುವ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರಿಗೆ ಜೈಲು ಆಡಳಿತವು ಇನ್ಸುಲಿನ್ ನೀಡಲು ನಿರಾಕರಿಸುತ್ತಿದೆ. ಈ ಮೂಲಕ ಕೇಜ್ರಿವಾಲ್ ಅವರ ನಿಧಾನಗತಿಯ ಸಾವಿಗೆ ಪಿತೂರಿ ನಡೆಯುತ್ತಿದೆ ಎಂದು ನಾನು ಸಂಪೂರ್ಣ ಜವಾಬ್ದಾರಿಯಿಂದ ಹೇಳಲು ಬಯಸುತ್ತೇನೆ ಎಂದರು.
Advertisement
Advertisement
ಈ ಮೊದಲು ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ವಾದ ಮಂಡಿಸಿದ್ದ ಇಡಿ (ED) ಪರ ವಕೀಲರು, ಜಾಮೀನು ಪಡೆಯುವ ಉದ್ದೇಶದಿಂದ ಕೇಜ್ರಿವಾಲ್ ಅವರು ಮಾವು, ಸಿಹಿ ತಿನಿಸು ಸೇವಿಸಿ ದೇಹದಲ್ಲಿ ಸಕ್ಕರೆ ಪ್ರಮಾಣ ಹೆಚ್ಚಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿತ್ತು. ಇದಕ್ಕೆ ಉತ್ತರಿಸಿದ ಕೇಜ್ರಿವಾಲ್ ಪರ ವಕೀಲರು, ಕ್ಷುಲ್ಲಕ ಆರೋಪ ಮಾಡಲಾಗುತ್ತಿದೆ. ಜಾಮೀನಿಗಾಗಿ ದೆಹಲಿ ಸಿಎಂ ಪಾರ್ಶ್ವವಾಯು ಅಪಾಯಕ್ಕೆ ಒಳಗಾಗಲು ಬಯಸುವುದಿಲ್ಲ ಎಂದು ಹೇಳಿದ್ದರು. ಇದನ್ನೂ ಓದಿ: ಮನೆಯಿಂದ ಕಳುಹಿಸಿದ 48 ಊಟಗಳಲ್ಲಿ ಕೇವಲ ಮೂರು ಬಾರಿ ಮಾತ್ರ ಮಾವಿನ ಹಣ್ಣಿತ್ತು – ಇಡಿ ಆರೋಪಕ್ಕೆ ಕೇಜ್ರಿವಾಲ್ ತಿರುಗೇಟು