– ದಿಲ್ಲಿ ಜನರ ಆರ್ಶೀವಾದ ಬಿಜೆಪಿಗೆ ಸಿಕ್ಕಿದೆ
– ರಾಹುಲ್ ಗಾಂಧಿ ಇರೋವರೆಗೂ ಕಾಂಗ್ರೆಸ್ ಉದ್ಧಾರ ಆಗಲ್ಲ
ಹುಬ್ಬಳ್ಳಿ: ದಿಲ್ಲಿ (Delhi) ಜನರ ಆರ್ಶೀವಾದ ಬಿಜೆಪಿಗೆ (BJP) ಸಿಕ್ಕಿದೆ. ಕೇಜ್ರಿವಾಲ್ (Arvind Kejriwal) ತಮ್ಮ ಕ್ರೇಜ್ ಕಳೆದುಕೊಂಡಿದ್ದಾರೆ ಎಂದು ಮಾಜಿ ಸಿಎಂ, ಸಂಸದ ಜಗದೀಶ್ ಶೆಟ್ಟರ್ (Jagadish Shettar) ಹೇಳಿದ್ದಾರೆ.
Advertisement
ದೆಹಲಿ ಚುನಾವಣಾ ಫಲಿತಾಂಶದ (Delhi Election Results) ಕುರಿತು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಣ್ಣಾ ಹಜಾರೆ ಹೋರಾಟವನ್ನು ಬಳಸಿಕೊಂಡು ಕೇಜ್ರಿವಾಲ್ ಅಧಿಕಾರದ ಗದ್ದುಗೆ ಏರಿದ್ದರು. ಅವರ ಆಡಳಿತದಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದೆ. ಜನರಿಗೆ ನಿರಾಸೆಯಾಗಿದೆ. ಹೀಗಾಗಿ ದಿಲ್ಲಿಯ ಜನ ಬಿಜೆಪಿ ಕೈ ಹಿಡಿದಿದ್ದಾರೆ ಎಂದರು. ಇದನ್ನೂ ಓದಿ: ಕೇಜ್ರಿವಾಲ್ ಯಮುನಾ ನದಿಗೆ ಕಳಂಕ ತಂದಿದ್ದೇ ಆಪ್ ಸೋಲಿಗೆ ಕಾರಣ: ಆರ್. ಅಶೋಕ್
Advertisement
Advertisement
ಕಾಂಗ್ರೆಸ್ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಇಡೀ ರಾಷ್ಟ್ರದಲ್ಲಿ ಕಾಂಗ್ರೆಸ್ ಕುಸಿಯುತ್ತಿದೆ. ತೆಲಂಗಾಣ, ಕರ್ನಾಟಕದಲ್ಲಿ ಮಾತ್ರ ಅಧಿಕಾರದಲ್ಲಿದೆ. ಅದು ನಮ್ಮ ತಪ್ಪಿನಿಂದ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದಿದೆ. ರಾಹುಲ್ ಗಾಂಧಿ ಇರೋವರೆಗೂ ಕಾಂಗ್ರೆಸ್ ಉದ್ಧಾರ ಆಗಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: 2020 ರಲ್ಲಿ 14-1, 2025 ರಲ್ಲಿ 4-11: ರಾಜಧಾನಿ ಹೋರಾಟದಲ್ಲಿ ಎಎಪಿಗೆ ದಕ್ಷಿಣ ದೆಹಲಿ ದೊಡ್ಡ ಹಿನ್ನಡೆ
Advertisement
ತೆಲಂಗಾಣ, ಕರ್ನಾಟಕ ಸರ್ಕಾರ ಯಾವಾಗ ಬೇಕಾದರೂ ಪತನ ಆಗಬಹುದು. ಈ ಚುನಾವಣೆಯಿಂದ ಕಾಂಗ್ರೆಸ್ ಬಣ್ಣ ಬಯಲಾಗಿದೆ. ಕಾಂಗ್ರೆಸ್ ಒಂದು ಕುಟುಂಬದ ಪಕ್ಷ. ಡಬಲ್ ಇಂಜಿನ್ ಸರ್ಕಾರ ಎಲ್ಲಿದೆ ಅಲ್ಲಿ ಮಾತ್ರ ಒಳ್ಳೆ ಕೆಲಸಗಳು ಆಗಿದೆ. ಹೀಗಾಗಿ ಡಬಲ್ ಇಂಜಿನ್ ಸರ್ಕಾರ ತಂದಿದ್ದಾರೆ. ದೆಹಲಿ ಜನ ಮೋದಿ ನಾಯಕತ್ವ ಒಪ್ಪಿದ್ದಾರೆ. ದೆಹಲಿಯನ್ನು ಅಭಿವೃದ್ಧಿ ಮಾಡೋದಾಗಿ ಮೋದಿ ಹೇಳಿದ್ದಾರೆ. ನಾವು ಸ್ಪಷ್ಟ ಬಹುಮತದಲ್ಲಿ ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಕೇಜ್ರಿವಾಲ್ ಮದ್ಯದ ಕಡೆ ಹೆಚ್ಚು ಗಮನ ಕೊಟ್ಟಿದ್ರು: ಅಣ್ಣ ಹಜಾರೆ
ಬಿಜೆಪಿಯಲ್ಲಿ ಎಲ್ಲವೂ ಸರಿ ಇಲ್ಲ. ಭಿನ್ನಮತಕ್ಕೆ ನಾಯಕರು ಇತಿಶ್ರೀ ಹಾಡುತ್ತಾರೆ. ಅಧ್ಯಕ್ಷರ ಚುನಾವಣೆ ಬಂದಿದೆ. ಸರ್ವಾನುಮತದಿಂದ ಅಧ್ಯಕ್ಷರ ಆಯ್ಕೆ ಆಗಬೇಕು. ಚುನಾವಣೆ ಅನ್ನೋದು ಒಂದು ಪ್ರೊಸೆಸ್ ಎಂದರು. ಇದನ್ನೂ ಓದಿ: Delhi Election Results | ಒಂದು ಕ್ಷೇತ್ರದಲ್ಲೂ ಖಾತೆ ತೆರೆಯದ ಕಾಂಗ್ರೆಸ್ – `ಕೈʼ ನಾಯಕರಿಗೆ ಮುಖಭಂಗ