Connect with us

Latest

ತೆಲಂಗಾಣ ಎನ್‍ಕೌಂಟರ್: ಕೇಜ್ರಿವಾಲ್, ಶಶಿ ತರೂರ್, ಮನೇಕಾ ಗಾಂಧಿ ಅಪಸ್ವರ

Published

on

ನವದೆಹಲಿ: ಪಶುವೈದೈ ದಿಶಾ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಗಳನ್ನು ಎನ್‍ಕೌಂಟರ್ ಮಾಡಿರುವ ಪ್ರಕರಣ ಕುರಿತು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಹಾಗೂ ಬಿಜೆಪಿ ನಾಯಕಿ ಮನೇಕಾ ಗಾಂಧಿ ಅಪಸ್ವರ ವ್ಯಕ್ತಪಡಿಸಿದ್ದಾರೆ.

ಪ್ರಕರಣ ಕುರಿತು ಪ್ರತಿಕ್ರಿಯೆ ನೀಡಿರುವ ಸಿಎಂ ಅರವಿಂದ ಕೇಜ್ರಿವಾಲ್ ಅವರು, ಸಾಮಾನ್ಯವಾಗಿ ಅತ್ಯಾಚಾರ ಪ್ರಕರಣಗಳು ತಡವಾಗಿ ಬೆಳಕಿಗೆ ಬರುತ್ತವೆ. ಉನ್ನಾವೋ ಅಥವಾ ಹೈದರಾಬಾದ್ ಪ್ರಕರಣವಾದರೂ ಜನ ಸಾಮಾನ್ಯರು ಆರೋಪಿಗಳ ವಿರುದ್ಧ ಕೋಪವನ್ನು ಹೊಂದಿರುತ್ತಾರೆ. ಆದ್ದರಿಂದ ಎನ್‍ಕೌಂಟರ್ ಕುರಿತು ಅವರು ಸಂತಸ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಇದರ ಬಗ್ಗೆ ಗಂಭೀರವಾಗಿ ಚಿಂತಿಸಬೇಕಿದೆ ಎಂದಿದ್ದಾರೆ.

ಕ್ರಿಮಿನಲ್ ಪ್ರಕರಣಗಳಲ್ಲಿ ಜನರು ನ್ಯಾಯಾಂಗ ವ್ಯವಸ್ಥೆ ಮೇಲೆ ಇರುವ ನಂಬಿಕೆಯನ್ನು ಕಳೆದುಕೊಳ್ಳುತ್ತಿದ್ದು, ದೇಶದ ಎಲ್ಲಾ ಸರ್ಕಾರಗಳು ಕೂಡ ಈ ಬಗ್ಗೆ ಕ್ರಮಕೈಗೊಳ್ಳಬೇಕಿದೆ. ಆ ಮೂಲಕ ನ್ಯಾಯಾಂಗ ವ್ಯವಸ್ಥೆಯನ್ನು ಬಲಪಡಿಸುವ ಕಾರ್ಯವನ್ನು ಮಾಡಬೇಕಿದೆ ಎಂದರು.

ಇತ್ತ ಪ್ರಕರಣ ಕುರಿತು ಪ್ರತಿಕ್ರಿಯೆ ನೀಡಿರುವ ಮನೇಕಾ ಗಾಂಧಿ ಅವರು, ಪ್ರಕರಣ ದೇಶದ ಎದುರು ಭಯಾನಕ ಅಂಶವನ್ನು ಮುಂದಿಟ್ಟಿದೆ. ನೀವು ಬೇಕೆಂದ ಮಾತ್ರಕ್ಕೆ ಜನರನ್ನು ಕೊಲೆ ಮಾಡಲು ಆಗುವುದಿಲ್ಲ. ಕಾನೂನುನನ್ನು ಕೈಗೆ ತೆಗೆದುಕೊಳ್ಳಲು ಸಾಧ್ಯವಿಲ್ಲ, ಆರೋಪಿಗಳನ್ನು ನ್ಯಾಯಾಲಯ ಗಲ್ಲಿಗೇರಿಸಬೇಕಿತ್ತು ಎಂದಿದ್ದಾರೆ.

ಕಾಂಗ್ರೆಸ್ ನಾಯಕ ಶಶಿ ತರೂರ್ ಪ್ರತಿಕ್ರಿಯೆ ನೀಡಿ, ತೆಲಂಗಾಣ ಪೊಲೀಸರು ಆರೋಪಿಗಳು ತಪ್ಪಿಸಿಕೊಳ್ಳಲು ಯತ್ನಿಸಿದ ಸಂದರ್ಭದಲ್ಲಿ ಎನ್‍ಕೌಂಟರ್ ಮಾಡಿರುವುದಾಗಿ ಹೇಳಿದ್ದಾರೆ. ಘಟನೆ ಕುರಿತು ಸಂಪೂರ್ಣ ಮಾಹಿತಿ ಲಭ್ಯವಾರುವವರೆಗೂ ಯಾವುದೇ ಖಂಡನೆಯನ್ನು ಮಾಡುವುದು ಸರಿಯಲ್ಲ. ಆದರೆ ನ್ಯಾಯಾಲಯದಲ್ಲಿ ವಿಚಾರಣೆ ಪೂರ್ಣಗೊಳ್ಳುವ ಮುನ್ನವೇ ಪೊಲೀಸರು ಆರೋಪಿಗಳನ್ನು ಹತ್ಯೆ ಮಾಡುವುದು ಕಾನೂನಿನ ಸಮ್ಮತವಲ್ಲ ಎಂದಿದ್ದಾರೆ. ತೆಲಂಗಾಣ ಪೊಲೀಸರ ಕ್ರಮವನ್ನು ಪ್ರಶ್ನಿಸಿ ಪತ್ರಕರ್ತರೊಬ್ಬರು ಮಾಡಿರುವ ಟ್ವೀಟ್‍ಗೆ ಶಶಿ ತರೂರ್ ಪ್ರತಿಕ್ರಿಯೆ ನೀಡಿ ಟ್ವೀಟ್ ಮಾಡಿದ್ದಾರೆ.

Click to comment

Leave a Reply

Your email address will not be published. Required fields are marked *