ಬೆಂಗಳೂರು: ವಿಧಾನಸೌಧದ ಆವರಣದಲ್ಲಿಯೇ ಕೆಂಪೇಗೌಡ ಪ್ರತಿಮೆ ಸ್ಥಾಪನೆ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
Advertisement
Advertisement
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ನಾಡಪ್ರಭು ಕೆಂಪೇಗೌಡರ 513ನೇ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ಮುಂದಿನ ಕೆಂಪೇಗೌಡ ಜಯಂತಿಯ ಒಳಗಡೆ ಕೆಂಪೇಗೌಡ ಪ್ರತಿಮೆ ಸ್ಥಾಪನೆ ಆಗಲಿದೆ. ವಿಧಾನಸೌಧ ಬೆಂಗಳೂರಿನಲ್ಲೇ ಇರೋದ್ರಿಂದ ಕೆಂಪೇಗೌಡರ ಪ್ರತಿಮೆ ಈ ಮೊದಲೇ ಸ್ಥಾಪನೆ ಆಗಬೇಕಿತ್ತು. ಆ ತಪ್ಪುಗಳನ್ನು ಸರಿಪಡಿಸುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಉದ್ಧವ್ ಠಾಕ್ರೆ ಸರ್ಕಾರ ಬಹುತೇಕ ಪತನ – ಸುಪ್ರೀಂ ಕೋರ್ಟ್‍ನಲ್ಲಿ ಬಹುಮತ ಕಳೆದುಕೊಂಡಿದೆ ಎಂದ ಬಂಡಾಯ ಶಾಸಕರು
Advertisement
ಇದೇ ವೇಳೆ ಸಿಎಂ ಅವರು ಮಾಜಿ ಸಿಎಂ ಎಸ್‍ಎಂ ಕೃಷ್ಣ, ಇನ್ಫೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿ ಹಾಗೂ ಬ್ಯಾಂಡ್ಮಿಟನ್ ತಾರೆ ಪ್ರಕಾಶ್ ಪಡುಕೋಣೆ ಈ ಮೂವರಿಗೆ 5 ಲಕ್ಷ ನಗದು, ಪ್ರಶಸ್ತಿ ಫಲಕ ಒಳಗೊಂಡ ನಾಡಪ್ರಭು ಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದರು. ನಾರಾಯಣಮೂರ್ತಿ ಪರವಾಗಿ ಪತ್ನಿ ಸುಧಾಮೂರ್ತಿ ಪ್ರಶಸ್ತಿ ಸ್ವೀಕರಿಸಿದರು. ಇತ್ತ ಪ್ರಕಾಶ್ ಪಡುಕೋಣೆ ಪರವಾಗಿ ವಿಮಲ್ ಕುಮಾರ್ ಪ್ರಶಸ್ತಿ ಸ್ವೀಕರಿಸಿದರು.
Advertisement
ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ಸ್ವಾಮೀಜಿ, ಚಂದ್ರಶೇಖರ ಸ್ವಾಮೀಜಿ, ಒಕ್ಕಲಿಗ ಮಹಾಸಂಸ್ಥಾನ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿ, ನಂಜಾವಧೂತ ಸ್ವಾಮೀಜಿ, ಸಚಿವರಾದ ಅಶೋಕ್, ಅಶ್ವತ್ಥನಾರಾಯಣ್ ಸೇರಿದಂತೆ ಸಚಿವರು, ಶಾಸಕರು ಭಾಗಿಯಾಗಿದ್ದಾರೆ.