ನವದೆಹಲಿ: ಕಾವೇರಿ ಸೇರಿ 5 ನದಿಗಳ ಜೋಡಣೆಗೆ ಯೋಜನೆ ಮಾಡಲು ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ ಎಂದು ಕೇಂದ್ರ ಬಜೆಟ್‍ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ
ಕೃಷ್ಣ, ಗೋದಾವರಿ, ಕಾವೇರಿ, ಪೆನ್ನಾರ್, ನರ್ಮದಾ ಐದು ನದಿಗಳ ನದಿ ಜೋಡಣೆ ಯೋಜನೆಗಳಿಗೆ ಒತ್ತು ನೀಡಲಾಗುವುದು. ಕೆನ್ ಬೆಟ್ಟಾ ನದಿ ಜೋಡಣೆ ಯೋಜನೆಗೆ 44,000 ಕೋಟಿ ರೂಪಾಯಿ ನೀಡಲಾಗಿದೆ. ರಾಷ್ಟ್ರೀಯ ಯೋಜನೆಯಡಿ 5 ನದಿಗಳನ್ನು ಜೋಡಿಸುವ ಯೋಜನೆಗಳು ಮತ್ತು ಡಿಪಿಆರ್‌ಗಳನ್ನು ಮಾಡಲಾಗಿದೆ. ಗಂಗಾ ನದಿ ಕಾರಿಡಾರ್‌ನಲ್ಲಿ ನೈಸರ್ಗಿಕ ಕೃಷಿಗೆ ಉತ್ತೇಜನ ನೀಡಲಾಗುವುದು ಎಂದು ತಿಳಿಸಿದ್ದಾರೆ.
Advertisement
Implementation of Ken Betwa Linking project at est. cost of Rs. 44,605 Cr. will be taken up
This is aimed at providing Irrigation benefits to 9.0 lakh hectare farmland, drinking water to 62 lakh people, 103 MW hydropower, and 27 MW solar power generation
– FM @nsitharaman pic.twitter.com/mVFNUwQtps
— PIB India (@PIB_India) February 1, 2022
Advertisement
ಕೆನ್ -ಬೆಟ್ಟಾ ಲಿಂಕ್ ಯೋಜನೆ ದೇಶದಲ್ಲಿ ಕೈಗೊಂಡಿರುವ ನದಿಗಳ ಜೋಡಣೆಯ ಮೊದಲ ಯೋಜನೆಯಾಗಿದೆ. ಯಮುನಾದ 2 ಉಪನದಿಗಳಾದ ಬೆಟ್ಟಾ ನದಿಗೆ ಜೋಡೆಣೆ ಮಾಡಲಾಗುತ್ತದೆ. ಈ ಯೋಜನೆಯಿಂದ 9.0 ಲಕ್ಷ ಹೆಕ್ಟೇರ್ ಕೃಷಿ ಭೂಮಿಗೆ ನೀರಾವರಿ ಪ್ರಯೋಜನಗಳು, 62 ಲಕ್ಷ ಜನರಿಗೆ ಕುಡಿಯುವ ನೀರು, 103 ಮೆಗಾವ್ಯಾಟ್ ಜಲವಿದ್ಯುತ್, 27 MW ಸೌರ ವಿದ್ಯುತ್ ಉತ್ಪಾದನೆಯಾಗಲಿದೆ. ಇದನ್ನೂ ಓದಿ: Budget: 2022-23ರ ಹೊತ್ತಿಗೆ 5G ಮೊಬೈಲ್ ಸೇವೆ
Advertisement
Advertisement
ವಾಜಪೇಯಿ ಸರ್ಕಾರದಿಂದ ಸುಮಾರು 20 ವರ್ಷಗಳ ನಂತರ ಮೊದಲ ಕೆನ್ ಬೆಟ್ಟಾ ನದಿ ಜೋಡನೇ ಯೋಜನೆಗೆ ಹಂಚಿಕೆಯೊಂದಿಗೆ ಇದು ಅತ್ಯಂತ ಮಹತ್ವದ ಘೋಷಣೆಯಾಗಿದೆ. ಇದನ್ನೂ ಓದಿ: Budget 2022: ವರ್ಲ್ಡ್ ಕ್ಲಾಸ್ ಶಿಕ್ಷಣಕ್ಕೆ ಡಿಜಿಟಲ್ ವಿಶ್ವವಿದ್ಯಾಲಯ ಸ್ಥಾಪನೆ
ಏನಿದು ಯೋಜನೆ?: ಬಂಗಾಳಕೊಲ್ಲಿ ಸಮುದ್ರದ ಪಾಲಾಗುವ ಗೋದಾವರಿ ನದಿಯ ಹೆಚ್ಚುವರಿ ನೀರನ್ನು ಕೊಳವೆ ಮಾರ್ಗದ ಮೂಲಕ ಕಾವೇರಿ ನದಿಗೆ ಜೋಡಣೆ ಮಾಡುವ ಮಹತ್ವಾಕಾಂಕ್ಷೆಯ ಯೋಜನೆ ಇದಾಗಿದೆ. ಸುಮಾರು 60 ಸಾವಿರ ಕೋಟಿ ರೂ. ಮೊತ್ತದ ಪ್ರಾಜೆಕ್ಟ್ ಇದಾಗಿದ್ದು, ದಕ್ಷಿಣ ಭಾರತದ ರಾಜ್ಯಗಳಿಗೆ ಅನುಕೂಲವಾಗಲಿರುವ ಮಹತ್ವಾಕಾಂಕ್ಷೆಯ ನದಿ ಜೋಡಣೆ ಯೋಜನೆಗಳಿಗೆ ಈ ಬಾರಿಯ ಬಜೆಟ್‌ನಲ್ಲಿ ಸಮ್ಮತಿ ನೀಡಲಾಗಿದೆ.
ಬಹುದಿನಗಳ ಬೇಡಿಕೆಯ ಯೋಜನೆಗಳಾದ ಕಾವೇರಿ- ಪೆನ್ನಾರ್ ಹಾಗೂ ಗೋದಾವರಿ- ಕೃಷ್ಣಾ ನದಿ ಜೋಡಣೆ ಯೋಜನೆಗಳನ್ನು ನಿರ್ಮಲಾ ಸೀತಾರಾಮನ್ 2022ರ ಬಜೆಟ್‌ನಲ್ಲಿ ಘೋಷಿಸಿದ್ದಾರೆ. ಮೊದಲು ಆಂಧ್ರದಲ್ಲಿ ಪೊಲಾವರಂ ಅಣೆಕಟ್ಟನ್ನು ನಿರ್ಮಾಣ ಮಾಡಲಾಗುತ್ತದೆ. ಅದರ ಹಿನ್ನೀರನ್ನು ಕೃಷ್ಣಾ ನದಿ, ಪೆನ್ನಾರ್ (ಪಿನಾಕಿನಿ) ನದಿಗಳ ಮೂಲಕ ಕಾವೇರಿಗೆ ಕೊಳವೆ ಮಾರ್ಗದಲ್ಲಿ ಹರಿಸಲಾಗುತ್ತದೆ. ನೀರು ಆವಿಯಾಗುವುದನ್ನು ತಡೆಗಟ್ಟುವ ಉದ್ದೇಶದಿಂದ ಇಲ್ಲಿ ಕಾಲುವೆಗಳ ಬದಲಿಗೆ ವಿಶೇಷ ತಂತ್ರಜ್ಞಾನದ ಸ್ಟೀಲ್ ಕೊಳವೆಗಳ ಮೂಲಕ ನೀರನ್ನು ಹರಿಸುವ ಉದ್ದೇಶ ಹೊಂದಲಾಗಿದೆ.
ಈ ನದಿ ಜೋಡಣೆಯಲ್ಲಿ ಎರಡು ಪ್ರಮುಖ ಯೋಜನೆಗಳಿವೆ. ಗೋದಾವರಿ ನದಿಯ ಹೆಚ್ಚುವರಿ ನೀರನ್ನು ಕೃಷ್ಣೆಗೆ ಹರಿಸಿ, ಅಲ್ಲಿಂದ ಮುಂದೆ ಪೆನ್ನಾರ್(ಉತ್ತರ ಪಿನಾಕಿನಿ) ನದಿಯಿಂದ ಕಾವೇರಿ ನದಿಗೆ ಹರಿಸುವ ಎರಡು ಯೋಜನೆಗಳು ನದಿ ಜೋಡಣೆಯ ಭಾಗವಾಗಿ ಈ ಯೋಜನೆ ಆಗಿದೆ.
ಪ್ರಾರಂಭಿಕ ಹಂತದಲ್ಲಿ 300 ಟಿಎಂಸಿ ಗೋದಾವರಿ ನದಿ ನೀರನ್ನು ಆಂಧ್ರ ಪ್ರದೇಶದ ನಾಗರ್ಜುನ ಸಾಗರ ಡ್ಯಾಮ್ ಮೂಲಕ ಪೋಲಾವರಂ ಯೋಜನೆಗೆ ಬೆಸೆದು ಬಳಿಕ ಕೃಷ್ಣಾ ನದಿಗೆ ತರುವುದು. ಅಲ್ಲಿಂದ ಮುಂದೆ ಪೆನ್ನಾರ್ ನದಿಗೆ ನಿರ್ಮಿಸಲಾಗಿರುವ ಸೋಮಸಿಲಾ ಅಣೆಕಟ್ಟೆಗೆ ತಂದು ಶೇಖರಿಸಿ ಅದನ್ನು ಮುಂದೆ ಗ್ರ್ಯಾಂಡ್ ಅಣೆಕಟ್ ಡ್ಯಾಮ್ ಮೂಲಕ ಕಾವೇರಿ ನದಿಗೆ ಸೇರಿಸುವುದು. ಇಲ್ಲಿ ಸ್ಟೀಲ್ ಕೊಳವೆ ಮಾರ್ಗದ ಮೂಲಕವೇ ನೀರು ಹರಿದುಬರಲಿದೆ. ಈ ಪ್ರಾಜೆಕ್ಟ್‌ನಿಂದ ಕಾವೇರಿ ನದಿಗೆ ಹೆಚ್ಚುವರಿಯಾಗಿ 100 ಟಿಎಂಸಿ ನೀರು ಸೇರಲಿದ್ದು ಕರ್ನಾಟಕ ಮತ್ತು ತಮಿಳುನಾಡಿಗೆ ಅನುಕೂಲವಾಗಲಿದೆ ಎನ್ನಲಾಗಿದೆ.