ಮಂಡ್ಯ: ಹನುಮ ಧ್ವಜವನ್ನು (Hanuman Dhwaja) ತೆರವುಗೊಳಿಸಿದ್ದನ್ನು ಖಂಡಿಸಿ ಹಿಂದೂ ಸಂಘಟನೆಗಳು (Hindu Organisation) ಕರೆ ನೀಡಿದ ಕೆರಗೋಡು ಬಂದ್‌ಗೆ (Keregodu Bandh) ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಬಂದ್‌ಗೆ ವರ್ತಕರು, ಹೊಟೇಲ್ ಮಾಲೀಕರು ಬೆಂಬಲ ವ್ಯಕ್ತಪಡಿಸಿದ ಪರಿಣಾಮ ಅಂಗಡಿ, ಹೋಟೆಲ್‌ಗಳು ಮುಚ್ಚಿವೆ. ಕೆರಗೋಡಿನಲ್ಲಿ ಬಿಗಿ ಪೊಲೀಸ್ (Police) ಬಂದೋಬಸ್ತ್ ಮಾಡಲಾಗಿದೆ. ಗ್ರಾಮಕ್ಕೆ ಎಎಸ್ಪಿ ತಿಮ್ಮಯ್ಯ ಭೇಟಿ ನೀಡಿ ಭದ್ರತೆ ಪರಿಶೀಲಿಸಿ ಸಿಬ್ಬಂದಿಗೆ ಕೆಲ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಉತ್ತರಾಖಂಡ ಅಕ್ರಮ ಮಸೀದಿ ತೆರವು ವೇಳೆ ಹಿಂಸಾಚಾರ – 4 ಸಾವು, 250 ಮಂದಿಗೆ ಗಾಯ
ಧ್ವಜಸ್ತಂಭದ ಬಳಿ ಪೊಲೀಸ್ ಭದ್ರತೆ ಹೆಚ್ಚಾಗಿದೆ. 9 ಗಂಟೆಗೆ ಕೆರಗೋಡಿನಿಂದ ಮಂಡ್ಯದ (Mandya) ಜಿಲ್ಲಾಧಿಕಾರಿ ಕಚೇರಿಯವರೆಗೆ ರ‍್ಯಾಲಿ ನಡೆಯಲಿದೆ. ಆಂಜನೇಯ ದೇಗುಲದಲ್ಲಿ ಪೂಜೆ ಸಲ್ಲಿಸಿದ ಬಳಿಕ ಪ್ರತಿಭಟನಾ ರ‍್ಯಾಲಿ ನಡೆಯಲಿದೆ. ಮಂಡ್ಯದಲ್ಲಿ ಬಂದ್ ಬಿಸಿ ತಟ್ಟಿಲ್ಲ. ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಕೆಲ ವರ್ತಕರು ಅಂಗಡಿ ತೆರೆದಿದ್ದರೆ ಕೆಲವರು ಮುಚ್ಚಿ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.
ಹನುಮಧ್ವಜ ತೆರವು ಮಾಡುವಲ್ಲಿ ಶಾಸಕರ ಪಾತ್ರ ಇದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮಂಡ್ಯ ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ (Ganiga Ravikumar) ಮನೆಗೆ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. ಇದನ್ನೂ ಓದಿ: ಯುಪಿಎ Vs ಎನ್‌ಡಿಎ – ಯಾರ ಅವಧಿಯಲ್ಲಿ ಎಷ್ಟು ಸಾಧನೆ? ಶ್ವೇತ ಪತ್ರದಲ್ಲಿ ಏನಿದೆ? ಇಲ್ಲಿದೆ ಸಂಖ್ಯಾ ಮಾಹಿತಿಗಳು
ಶಾಸಕ ರವಿಕುಮಾರ್ ಫ್ಲೆಕ್ಸ್ ಹರಿದು ಕೆರಗೋಡು ಗ್ರಾಮಸ್ಥರು ಕಿಡಿಕಾರಿದ್ದರು. ಹೀಗಾಗಿ ಮಂಡ್ಯದ ಬಂದೀಗೌಡ ಬಡಾವಣೆಯಲ್ಲಿರುವ ರವಿಕುಮಾರ್ ನಿವಾಸಕ್ಕೆ 10 ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.