ತಿರುವನಂತಪುರಂ: ಇತ್ತೀಚೆಗೆ ತಲಸ್ಸೆಯಲ್ಲಿ ನಡೆದ ಬಿಜೆಪಿ ರ್‍ಯಾಲಿಯಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿದ್ದಕ್ಕೆ ನಾಲ್ವರು ಬಿಜೆಪಿ ನಾಯಕರನ್ನು ಬಂಧಿಸಲಾಗಿದೆ.
ಕೇರಳದ ತಲಸ್ಸೆಯಲ್ಲಿ ಯುವಮೋರ್ಚಾ ಮುಖಂಡ ಕೆಟಿ ಜಯಕೃಷ್ಣನ್ ಹತ್ಯೆಯ 22ನೇ ವಾರ್ಷಿಕೋತ್ಸವ ಅಂಗವಾಗಿ ಆಯೋಜಿಸಿದ್ದ ಮೆರವಣಿಗೆಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರಚೋದನಕಾರಿ ಘೋಷಣೆಗಳನ್ನು ಕೂಗಿದ್ದರು.
Advertisement
Advertisement
ಘಟನೆ ಕುರಿತು ಸಿಪಿಐ(ಎಂ) ಯುವ ಘಟಕ, ಡಿವೈಎಫ್‍ಐ ಸೇರಿದಂತೆ ವಿವಿಧ ಸಂಘಟನೆಗಳು ದೂರು ನೀಡಿದ್ದ ಹಿನ್ನೆಲೆಯಲ್ಲಿ 20 ಬಿಜೆಪಿ ಕಾರ್ಯಕರ್ತರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು. ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಬಿಜೆಪಿ ಕಾರ್ಯಕರ್ತರನ್ನು ತಲಶೈರಿಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
Advertisement
ಪಕ್ಷದ ಕಾರ್ಯಕರ್ತರು ರ್‍ಯಾಲಿಯಲ್ಲಿ ಪ್ರಚೋದನಕಾರಿ ಘೋಷಣೆಗಳನ್ನು ಕೂಗುತ್ತಿರುವ ಸುಳ್ಳು ವೀಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಲಾಗುತ್ತಿದೆ ಎಂದು ಬಿಜೆಪಿ ಜಿಲ್ಲಾ ಆಯೋಗವು ಆರೋಪಿಸಿದೆ. ಇದನ್ನೂ ಓದಿ: 3ನೇ ಅಲೆ ತೀವ್ರತೆ ಹೆಚ್ಚಾಗಬಹುದು – ಐಎಂಎ ವಾರ್ನಿಂಗ್
Advertisement
ಘಟನೆಯ ಕುರಿತು ಮತ್ತೊಂದು ಸಂಘಟನೆಯೂ 250 ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರ್‌ಎಸ್‌ಎಸ್ ಮತ್ತು ಬಿಜೆಪಿಯೂ ಅಲ್ಪಸಂಖ್ಯಾತ ಸಮೂದಾಯವನ್ನು ಗುರಿಯಾಗಿಸಿಕೊಂಡು ಇಂತಹ ಘೋಷಣೆಗಳನ್ನು ಕೂಗಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಟೀಕಿಸಿದ್ದಾರೆ.