ತಿರುವನಂತಪುರ: ಕಳೆದ ವರ್ಷ ಮಾರ್ಚ್ ತಿಂಗಳಲ್ಲಿ ಮಂಗಳೂರಿನ ಪ್ರಸಿದ್ಧ ಯಕ್ಷಗಾನ ಕಲಾವಿದರೊಬ್ಬರು ಪಾತ್ರ ನಿರ್ವಹಿಸುತ್ತಿದ್ದಾಗ ವೇದಿಕೆಯಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದು, ಇದೀಗ ಅಂತಹದ್ದೇ ಒಂದು ಘಟನೆ ಕೇರಳದಲ್ಲಿ ನಡೆದಿದೆ.
ಖ್ಯಾತ ಓಟ್ಟಮ್‍ತುಳ್ಳಲ್ ಕಲಾವಿದರಾದ ಕಲಾಮಂಡಲಂ ಗೀತಾನಾಥನ್(58) ಅವರು ಪ್ರದರ್ಶನ ನೀಡುತ್ತಿರುವಾಗಲೇ ಹೃದಾಯಘಾತವಾಗಿ ಕುಸಿದು ಬಿದ್ದು ರಂಗಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ.
ತ್ರಿಶೂರ್ ಜಿಲ್ಲೆಯ ಇರಿಂಙಲಕ್ಕುಡದಲ್ಲಿರುವ ಅವಿಟ್ಟತ್ತೂರ್ ದೇವಸ್ಥಾನದಲ್ಲಿ ವಾರ್ಷಿಕ ಉತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ವೇಳೆ ನೃತ್ಯ ಮಾಡುತ್ತಿರುವಾಗಲೇ ವೇದಿಕೆಯಲ್ಲಿಯೇ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಅದಾಗಲೇ ಅವರು ಮೃತ ಪಟ್ಟಿದ್ದಾರೆ ಅಂತ ವೈದ್ಯರು ತಿಳಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.
ಪ್ರೇಕ್ಷಕರು ಗೀತಾ ಅವರ ನೃತ್ಯ ನೋಡುತ್ತಿರುವಾಗಲೇ ವೇದಿಕೆಯಲ್ಲಿ ಕುಸಿದು ಬಿದ್ದ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇವರು ಕೇರಳದ ಅತ್ಯಂತ ಹಿರಿಯ ಕಲಾವಿದರಾಗಿದ್ದಾರೆ. ಗೀತಾನಂದಮ್ ಅವರಿಗೆ 2000ರಲ್ಲಿ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, 2010ರಲ್ಲಿ ಕಲಾಮಂದಲ್ ಅವಾರ್ಡ್ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಬಾಚಿಕೊಂಡಿದ್ದಾರೆ. ಅಲ್ಲದೇ ಸುಮಾರು 30ಕ್ಕೂ ಹೆಚ್ಚು ಮಲೆಯಾಲಂ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಇದೀಗ ಗೀತಾನಂದನ್ ಅವರ ಮರಣಕ್ಕೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸಂತಾಪ ಸೂಚಿಸಿದ್ದಾರೆ.
2017ರ ಮಾರ್ಚ್ ನಲ್ಲಿ ಕಟೀಲು ಮೇಳದ ಪ್ರಸಿದ್ಧ ಯಕ್ಷಗಾನ ಕಲಾವಿದ ಗೇರುಕಟ್ಟೆ ಗಂಗಯ್ಯ ಶೆಟ್ಟಿ (63) ಅವರು ಪಾತ್ರ ನಿರ್ವಹಿಸುತ್ತಿರುವಾಗ ವೇದಿಕೆಯಲ್ಲೇ ಕುಸಿದು ಮೃತಪಟ್ಟಿದ್ದರು.
https://www.youtube.com/watch?v=wO4QaCYdVyM
https://www.youtube.com/watch?v=CJyPZsfLWFY