CinemaLatestMain PostNationalSouth cinema

ಲೈಂಗಿಕ ದೌರ್ಜನ್ಯ ಪ್ರಕರಣ – ಜಾಮೀನಿಗಾಗಿ ಹೈಕೋರ್ಟ್ ಮೊರೆ ಹೋದ ನಟ ವಿಜಯ್ ಬಾಬು

ತಿರುವನಂತಪುರ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಟ ಮತ್ತು ನಿರ್ಮಾಪಕ ವಿಜಯ್ ಬಾಬು ಅವರು ನಿರೀಕ್ಷಣಾ ಜಾಮೀನು ಕೋರಿ ಕೇರಳ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದಾರೆ.

ಇಂದು ಮಧ್ಯಾಹ್ನ ನ್ಯಾಯಾಲಯ ಜಾಮೀನು ಅರ್ಜಿಯನ್ನು ಪರಿಗಣಿಸುವ ಸಾಧ್ಯತೆ ಇದ್ದು, ನಿರೀಕ್ಷಣಾ ಜಾಮೀನು ಅರ್ಜಿಯಲ್ಲಿ ವಿಜಯ್ ಬಾಬು ಅವರು ತಮ್ಮ ವಿರುದ್ಧ ದೂರು ನೀಡಿರುವ ನಟಿ ಬ್ಲ್ಯಾಕ್ ಮೇಲ್ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಮಿಡ್‌ನೈಟ್‌ನಲ್ಲಿ ಸಮಂತಾಗೆ ಸರ್ಪ್ರೈಸ್ ನೀಡಿದ ವಿಜಯ್ ದೇವರಕೊಂಡ: ವಿಡಿಯೋ ವೈರಲ್

ಏಪ್ರಿಲ್ 22 ರಂದು ಯುವತಿ ನೀಡಿರುವ ದೂರಿನ ಮೇರೆಗೆ ಎರ್ನಾಕುಲಂ ಸೌತ್ ಪೊಲೀಸರು ವಿಜಯ್ ಬಾಬು ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಿನಿಮಾದಲ್ಲಿ ಅವಕಾಶ ಕೊಡಿಸುವುದಾಗಿ ಭರವಸೆ ನೀಡಿ ಕೊಚ್ಚಿಯ ಎರ್ನಾಕುಲಂ ಫ್ಲ್ಯಾಟ್‍ನಲ್ಲಿ ವಿಜಯ್ ಬಾಬು ಹಲವು ಬಾರಿ ಅತ್ಯಾಚಾರ ಎಸಗಿದ್ದಾರೆ ಎಂದು ಯುವತಿ ಆರೋಪಿಸಿದ್ದಾಳೆ.

ಸದ್ಯ ದುಬೈನಲ್ಲಿರುವ ವಿಜಯ್ ಬಾಬುಗೆ ತಾವಾಗಿಯೇ ಶರಣಾಗುವಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಅಲ್ಲದೇ ಪ್ರಕರಣಕ್ಕೆ ಕುರಿತಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ:  ಸಿನಿಮಾದಲ್ಲಿ ಅವಕಾಶ ಕೊಡಿಸೋ ನೆಪದಲ್ಲಿ ಲೈಂಗಿಕ ದೌರ್ಜನ್ಯ – ನಟ ವಿಜಯ್ ಬಾಬು ವಿರುದ್ಧ ಪ್ರಕರಣ ದಾಖಲು

Leave a Reply

Your email address will not be published.

Back to top button