ತಿರುವನಂತಪುರಂ: ಇಲ್ಲಿನ ಆರ್ ಪಿ ಸಮೂಹ ಸಂಸ್ಥೆಗಳ ಅಧ್ಯಕ್ಷ ಬಿ.ರವಿ ಪಿಳೈ ಅವರು 100 ಕೋಟಿ ರೂ. ಮೌಲ್ಯದ ಏರ್ ಬಸ್ಸ್ ಹೆಲಿಕಾಪ್ಟರ್ನ ಹೆಮ್ಮೆಯ ಮಾಲೀಕರಾಗಿದ್ದಾರೆ. ಈ ಮೂಲಕ ದೇಶದಲ್ಲೇ ಅತ್ಯಂತ ಐಷಾರಾಮಿ ಚಾಪರ್ ಅನ್ನು ಹೊಂದಿದ ಮೊದಲ ಭಾರತೀಯ ಎಂಬ ಹೆಗ್ಗಳಿಗೆ ಪಾತ್ರರಾಗಿದ್ದಾರೆ.
ಪ್ರಸ್ತುತ 1,500 ಎಚ್145 ಹೆಲಿಕಾಪ್ಟರ್ ಪ್ರಪಂಚದಾದ್ಯಂತ ಹಾರುತ್ತಿವೆ. ಇದೀಗ ಈ ಹೆಲಿಕಾಪ್ಟರ್ನ ಸೇರ್ಪಡೆಯು ಪ್ರವಾಸೋದ್ಯಮ ಚಟುವಟಿಕೆಗಳಿಗೆ ಉತ್ತೇಜನ ನೀಡಲಿದೆ ಎನ್ನಲಾಗಿದೆ. ಇದನ್ನೂ ಓದಿ: ಡಿಎಂಕೆ, ಕಾಂಗ್ರೆಸ್ ಸರ್ಕಾರದ ವಿರುದ್ಧ ತಮಿಳುನಾಡಿಗೆ ಪಾದಯತ್ರೆ ಯಾವಾಗ: ಡಿಕೆಶಿಗೆ ಬಿಜೆಪಿ ಪ್ರಶ್ನೆ
Advertisement
Advertisement
Advertisement
68 ವರ್ಷದ ಬಿಲಿಯನೇರ್ ಪ್ರಸ್ತುತ 2.5 ಶತಕೋಟಿ ಡಾಲರ್ (19,10,18,750.00 ರೂ.) ಮೌಲ್ಯದ ಆಸ್ತಿಯನ್ನು ಹೊಂದಿದ್ದಾರೆ. ಇವರ ವಿವಿಧ ಕಂಪನಿಗಳಲ್ಲಿ ಸುಮಾರು 70 ಸಾವಿರ ಉದ್ಯೋಗಿಗಳು ಕೆಲಸ ನಿರ್ವಹಿಸುತ್ತಿದ್ದಾರೆ. ಅಲ್ಲದೆ, ಅವರು ರಾಜ್ಯದಾದ್ಯಂತ ಐಷಾರಾಮಿ ಹೋಟೆಲ್ಗಳನ್ನು ಹೊಂದಿದ್ದು, ತಮ್ಮ ಅಥಿತಿಗಳನ್ನು ಕರೆದೊಯ್ಯಲು ಈ ಹೆಲಿಕಾಪ್ಟರ್ ಬಳಸುವುದರಿಂದ ಇದು ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಿದಂತಾಗುತ್ತದೆ ಎಂದು ಆರ್ ಪಿ ಗ್ರೂಪ್ನ ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Advertisement
ಏನಿದರ ವಿಶೇಷತೆ?
* ಎಲ್ಲ ರೀತಿಯ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿರುವ ಅತ್ಯಾಧುನಿಕ ಹೆಲಿಕಾಪ್ಟರ್ನಲ್ಲಿ ಒಬ್ಬ ಪೈಲಟ್ ಸೇರಿ 7 ಪ್ರಯಾಣಿಕರು ಪ್ರಯಾಣಿಸಬಹುದು.
* ಹೆಲಿಕಾಪ್ಟರ್ ಸಮುದ್ರ ಮಟ್ಟದಿಂದ 20,000 ಅಡಿ ಎತ್ತರದಿಂದ ಲ್ಯಾಂಡಿಂಗ್ ಮತ್ತು ಟೇಕ್ ಆಫ್ ಮಾಡುವ ಸಾಮಥ್ರ್ಯವನ್ನು ಹೊಂದಿದೆ.
* ಈ ಚಾಪರ್ ಅಪಘಾತ ಸಂದರ್ಭಗಳಲ್ಲಿ ಪ್ರಯಾಣಿಕರಿಗೆ ಅತ್ಯುನ್ನತ ಸುರಕ್ಷತೆಯನ್ನು ನೀಡುತ್ತದೆ.
* ಅಲ್ಲದೆ ಎಚ್145 ಸುಧಾರಿತ ವೈರ್ಲೆಸ್ ಸಂವಹನ ವ್ಯವಸ್ಥೆಯನ್ನೂ ಹೊಂದಿದೆ. ಇದನ್ನೂ ಓದಿ: ಚುನಾವಣೆವರಗೆ ಸುಮ್ಮನಿದ್ದು, ಪೆಟ್ರೋಲ್, ಡಿಸೇಲ್, ಗ್ಯಾಸ್ ಬೆಲೆ ಏರಿಕೆ ಮಾಡಿದ್ದಾರೆ: ಡಿಕೆಶಿ