– ಸಾವಿನ ಸಂಖ್ಯೆ 4ಕ್ಕೆ ಏರಿಕೆ
ತಿರುವನಂತಪುರಂ: ಅಕ್ಟೋಬರ್ 29ರಂದು ಕೇರಳದ (Kerala) ಕೊಚ್ಚಿಯಲ್ಲಿ (Kochi) ಕ್ರಿಶ್ಚಿಯನ್ ಧಾರ್ಮಿಕ ಸಭೆಯಲ್ಲಿ ನಡೆದ ಸರಣಿ ಬಾಂಬ್ ಸ್ಫೋಟದಲ್ಲಿ (Bomb Blast) ಮೃತಪಟ್ಟವರ ಸಂಖ್ಯೆ ಇಲ್ಲಿಯವರೆಗೆ 4ಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ 61 ವರ್ಷದ ಮಹಿಳೆ ಇಂದು (ಸೋಮವಾರ) ಸಾವನ್ನಪ್ಪಿದ್ದಾರೆ.
ಮೃತ ಮಹಿಳೆಯನ್ನು ಕಲಮಸ್ಸೆರಿಯ ಮೋಲಿ ಜಾಯ್ ಎಂದು ಗುರುತಿಸಲಾಗಿದೆ. ಸ್ಫೋಟ ಸಂಭವಿಸಿದ ವೇಳೆ ಮಹಿಳೆಗೆ 70% ರಷ್ಟು ಸುಟ್ಟ ಗಾಯಗಳಾಗಿತ್ತು. ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ವೆಂಟಿಲೇಟರ್‌ನ ಬೆಂಬಲದಲ್ಲಿದ್ದರು. ಸೋಮವಾರ ಮುಂಜಾನೆ ಅವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಮಹಿಳೆಗೆ ಆರಂಭದಲ್ಲಿ ಬೇರೊಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಬಳಿಕ ಎರ್ನಾಕುಲಂ ವೈದ್ಯಕೀಯ ಕೇಂದ್ರಕ್ಕೆ ಸ್ಥಳಾಂತರಿಸಲಾಯಿತು. ಎರ್ನಾಕುಲಂ ಜಿಲ್ಲೆಯ ಮಲಯತ್ತೂರ್‌ನ ಲಿಬಿನಾ ಎಂಬ 12 ವರ್ಷದ ಬಾಲಕಿ ಕೂಡ ಅಕ್ಟೋಬರ್ 30 ರಂದು ಕಲಮಸ್ಸೆರಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಳು. ಇದನ್ನೂ ಓದಿ: ಸತತ 4ನೇ ದಿನ ವಾಯುಗುಣಮಟ್ಟ ಕುಸಿತ – ದೆಹಲಿಯಲ್ಲಿ ಹೈವೋಲ್ಟೇಜ್ ಸಭೆ ಕರೆದ ಸಿಎಂ
ಸ್ಫೋಟ ನಡೆದ ದಿನ ಸ್ಥಳದಲ್ಲಿದ್ದ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದರು. ಘಟನೆಯಲ್ಲಿ 50 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಕೆಲವರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಸ್ಫೋಟ ಸಂಭವಿಸಿದ ಕೆಲ ಗಂಟೆಗಳ ನಂತರ ತ್ರಿಶ್ಶೂರ್ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ಪೊಲೀಸರಿಗೆ ಶರಣಾಗಿದ್ದಾನೆ. ಆತ ಈ ಸ್ಫೋಟಗಳನ್ನು ನಡೆಸಿರುವುದಾಗಿ ಹೇಳಿಕೊಂಡಿದ್ದು, ನಂತರ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಕೆಲಸದಿಂದ ತೆಗೆದು ಹಾಕಿದ್ದಕ್ಕೆ ಪ್ರತಿಮಾ ಕೊಲೆ- ತಪ್ಪೊಪ್ಪಿಕೊಂಡ ಕಿರಣ್