ತಿರುವನಂತಪುರಂ: 16 ವರ್ಷದ ಆಪ್ರಾಪ್ತನ ಮೇಲೆ 2 ವರ್ಷಗಳ ಕಾಲ 14 ಮಂದಿ ಲೈಂಗಿಕ ದೌರ್ಜನ್ಯ ಎಸಗಿರುವುದು ಕೇರಳದ (Kerala) ಕಾಸರಗೋಡು (Kasaragod) ಜಿಲ್ಲೆಯಲ್ಲಿ ನಡೆದಿದೆ. ಬಾಲಕನಿಗೆ 14 ಮಂದಿ LGBTQ ಮೊಬೈಲ್ ಆ್ಯಪ್‌ನಲ್ಲಿ ಪರಿಚಯವಾಗಿದ್ದರು ಎಂದು ತಿಳಿದುಬಂದಿದೆ.
ಇಲ್ಲಿಯವರೆಗೂ ದೌರ್ಜನ್ಯ ಎಸಗಿದ 9 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದರಲ್ಲಿ ಇಬ್ಬರು ಸರ್ಕಾರಿ ನೌಕರರು ಸೇರಿದ್ದಾರೆ. ಬಾಲಕನ ಮನೆಯಲ್ಲಿ, ಕಣ್ಣೂರು ಮತ್ತು ಕೋಝಿಕ್ಕೋಡ್ ಜಿಲ್ಲೆಗಳ ಇತರ ಸ್ಥಳಗಳಲ್ಲಿ 14 ಪುರುಷರು ಆತನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಅಪ್ರಾಪ್ತೆ ಮೇಲೆ 2 ವರ್ಷಗಳಿಂದ ಅತ್ಯಾಚಾರ ಎಸಗಿದ ಆರೋಪ – RCB ಸ್ಟಾರ್ ಯಶ್ ದಯಾಳ್ ವಿರುದ್ಧ ಪೋಕ್ಸೊ ಕೇಸ್
ಪ್ರಕರಣ ಬೆಳಕಿಗೆ ಬಂದಿದ್ದು ಹೇಗೆ?
ಬಾಲಕನ ತಾಯಿ ಅವರ ಮನೆಯಲ್ಲಿ ಒಬ್ಬ ವ್ಯಕ್ತಿಯನ್ನು ನೋಡಿದ್ದರು. ಅವರು ನೋಡುತ್ತಿದ್ದಂತೆ ಆತ ಅಲ್ಲಿಂದ ಓಡಿಹೋಗಿದ್ದ. ಈ ಬಗ್ಗೆ ಮಗನನ್ನು ಕೇಳಿದಾಗ ಆತ ವಿಚಾರವನ್ನು ಅಮ್ಮನ ಮುಂದೆ ಹೇಳಿಕೊಂಡಿದ್ದ. ಬಳಿಕ ಬಾಲಕನ ತಾಯಿ ಮಕ್ಕಳ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಿದ್ದರು. ಅಲ್ಲಿಂದ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದರು.
ತನಿಖೆಗೆ ಎಸ್‌ಐಟಿ ರಚನೆ
ಬಾಲಕ ನೀಡಿದ ಹೇಳಿಕೆಯ ಆಧಾರದ ಮೇಲೆ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (POCSO) ಕಾಯ್ದೆ ಅಡಿಯಲ್ಲಿ 14 ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗಿದೆ. ಈ ಸಂಬಂಧ ಡಿವೈಎಸ್ಪಿ ಮತ್ತು ನಾಲ್ವರು ಇನ್ಸ್‌ಪೆಕ್ಟರ್‌ಗಳನ್ನು ಒಳಗೊಂಡ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗಿದೆ.
ಆರು ಪ್ರಕರಣಗಳನ್ನು ಕೋಝಿಕ್ಕೋಡ್ ಮತ್ತು ಕಣ್ಣೂರು ಜಿಲ್ಲೆಗಳಿಗೆ ವರ್ಗಾಯಿಸಲಾಗಿದೆ. ಈ ಪ್ರಕರಣದಲ್ಲಿ 14 ಆರೋಪಿಗಳು 25 ರಿಂದ 51 ವರ್ಷ ವಯಸ್ಸಿನವರಾಗಿದ್ದು, ಅದರಲ್ಲಿ ಒಬ್ಬ ರೈಲ್ವೆ ಉದ್ಯೋಗಿ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: 7 ವರ್ಷದ ಬಾಲಕಿ ಮೇಲೆ ಅಪ್ರಾಪ್ತರಿಂದಲೇ ಅತ್ಯಾಚಾರ – ಇಬ್ಬರು ಬಾಲಕರು ಅರೆಸ್ಟ್