ಬೆಂಗಳೂರು: ಕರ್ನಾಟಕದಲ್ಲಿ (Karnataka) ಬುಲ್ಡೋಜರ್ (Bulldozer Raj) ಬಳಸಿ ಮುಸ್ಲಿಮರ ಮನೆಗಳನ್ನು ಧ್ವಂಸ ಮಾಡಲಾಗಿದೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್(Pinarayi Vijayan) ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಬೆಂಗಳೂರಿನ (Bengaluru) ಯಲಹಂಕ ಕೋಗಿಲು ಲೇಔಟ್ ಬಳಿ ಸರ್ಕಾರದ ಜಾಗದಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಮನೆಗಳನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ನೆಲಸ ಮಾಡಿದ್ದರು.
ಈ ವಿಚಾರದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡ ಪಿಣರಾಯಿ ವಿಜಯನ್, ಬೆಂಗಳೂರಿನ ಫಕೀರ್ ಕಾಲೋನಿ ಮತ್ತು ವಸೀಮ್ ಲೇಔಟ್‌ನಲ್ಲಿ ವರ್ಷಗಳಿಂದ ವಾಸಿಸುತ್ತಿದ್ದ ಮುಸ್ಲಿಂ ಕುಟುಂಬಗಳ ಮನೆಗಳನ್ನು ಧ್ವಂಸ ಮಾಡಿದ್ದು ಅತ್ಯಂತ ಆಘಾತಕಾರಿ ಮತ್ತು ನೋವಿನ ಸಂಗತಿ. ಉತ್ತರ ಭಾರತದಲ್ಲಿ ಸಂಘ ಪರಿವಾರ ಅನುಸರಿಸುತ್ತಿರುವ ಅಲ್ಪಸಂಖ್ಯಾತ ವಿರೋಧಿ ಆಕ್ರಮಣಕಾರಿ ರಾಜಕೀಯದ ಮತ್ತೊಂದು ಆವೃತ್ತಿಯನ್ನು ಕರ್ನಾಟಕದಲ್ಲಿಯೂ ಕಾಣಬಹುದು ಎಂದು ಸಿಟ್ಟು ಹೊರಹಾಕಿದ್ದಾರೆ. ಇದನ್ನೂ ಓದಿ: ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಜೆಸಿಬಿ ಘರ್ಜನೆ – 200 ಮನೆಗಳು ನೆಲಸಮ
The bulldozing of Faqir Colony and Waseem Layout in Bengaluru, uprooting Muslim families who have lived there for years, exposes the brutal normalisation of “bulldozer raj”. Sadly, the Sangh Parivar’s anti-minority politics is now being executed under a Congress Government in…
— Pinarayi Vijayan (@pinarayivijayan) December 26, 2025
ಕೊರೆಯುವ ಚಳಿ ಇರುವಾಗ ಇವರನ್ನು ಹೊರದಬ್ಬಲಾಗಿದೆ. ಉತ್ತರ ಭಾರತದಲ್ಲಿ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆಯುತ್ತಿದ್ದ ರಾಜಕೀಯ ದಾಳಿ ಈಗ ದಕ್ಷಿಣಕ್ಕೂ ಬಂದಿದೆ. ಈ ಕ್ರಮವನ್ನು ಕಾಂಗ್ರೆಸ್ ಸರ್ಕಾರ ಯಾವ ರೀತಿ ಸಮರ್ಥಿಸಿಕೊಳ್ಳುತ್ತದೆ ಎಂದು ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ಸಿನ ಈ ಕಪಟ ಪ್ರವೃತ್ತಿಯನ್ನು ವಿರೋಧಿಸಲು ಮತ್ತು ಸೋಲಿಸಲು ಎಲ್ಲಾ ಜಾತ್ಯತೀತ ಮತ್ತು ಪ್ರಜಾಪ್ರಭುತ್ವ ಶಕ್ತಿಗಳು ಒಟ್ಟಾಗಿ ಒಟ್ಟುಗೂಡಬೇಕು ಎಂದು ಕರೆ ನೀಡಿದ್ದಾರೆ.

