ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಧನ್ಯವಾದ ತಿಳಿಸಿದ್ದಾರೆ. ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಕೋಮು ಸೌಹಾರ್ದ ಸಮಾವೇಶಕ್ಕೆ ರಾಜ್ಯ ಸರ್ಕಾರ ಭದ್ರತೆ ಒದಗಿಸಿದ ಹಿನ್ನೆಲೆಯಲ್ಲಿ ಕೇರಳ ಸಿಎಂ ಪತ್ರದ ಮೂಲಕ ಧನ್ಯವಾದ ಅರ್ಪಿಸಿದ್ದಾರೆ.
ಕಾರ್ಯಕ್ರಮದಲ್ಲಿ ಹಾಜರಾಗುವುದಕ್ಕೆ ಆರ್‍ಎಸ್‍ಎಸ್ ವಿರೋಧ ವ್ಯಕ್ತಪಡಿಸಿದ ಕುರಿತು ಪಿಣರಾಯಿ ಬೇಸರ ವ್ಯಕ್ತಪಡಿಸಿದ್ದಾರೆ. ಮಾತ್ರವಲ್ಲದೇ ಆರ್‍ಎಸ್‍ಎಸ್‍ನ ಈ ನಡೆ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾದದ್ದು ಅಂತಾ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
Advertisement
Advertisement
ಏನಿದು ಘಟನೆ: ಫೆ.25ರಂದು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಬೃಹತ್ ಕೋಮುಸೌಹಾರ್ದ ಸಮಾವೇಶ ನಡೆದಿದ್ದು, ಈ ಕಾರ್ಯಕ್ರಮದಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆಗಮಿಸಿ ಭಾಷಣ ಮಾಡಿದ್ದರು. ಆದ್ರೆ ಇದಕ್ಕೂ ಮೊದಲು ಸಂಘಪರಿವಾರ ಪಿಣರಾಯಿ ಆಗಮನ ಜಿಲ್ಲೆಯಲ್ಲಿ ಸಂಘರ್ಷಕ್ಕೆ ಎಡೆಮಾಡಿಕೊಡುತ್ತದೆ. ಹೀಗಾಗಿ ಪಿಣರಾಯಿ ಮಂಗಳೂರಿಗೆ ಬರದಂತೆ ತಡೆಯಲು ಜಿಲ್ಲೆಯಾದ್ಯಂತ ಬಂದ್‍ಗೆ ಕರೆ ನೀಡಿದ್ದರು.
Advertisement
ಆದ್ರೆ ಕಾರ್ಯಕ್ರಮದಲ್ಲಿ ಯಾವುದೇ ಅಹಿತರ ಘಟನೆ ಸಂಭವಿಸಬಾರದೆಂದು ಸರ್ಕಾರ ಮಂಗಳೂ ಕಮಿಷನರ್ ವ್ಯಾಪ್ತಿಯಲ್ಲಿ 144ಸೆಕ್ಷನ್ ಜಾರಿ ಮಾಡಿತ್ತು. ಮಾತ್ರವಲ್ಲದೇ 3 ಸಾವಿರಕ್ಕಿಂತಲೂ ಅಧಿಕ ಕೆಎಸ್‍ಆರ್‍ಪಿ ತುಕಡಿಗಳನ್ನು ನಿಯೋಜಿಸಲಾಗಿತ್ತು. 600 ಸಿಸಿ ಕ್ಯಾಮೆರಾ ಹಾಗೂ 60 ಡ್ರೋನ್ ಕ್ಯಾಮೆರಾಗಳನ್ನು ಬಳಸಲಾಗಿದ್ದು, ಕಾರ್ಯಕ್ರಮ ಯಶಸ್ವಿಯಾಗಿ ನಡೆದಿತ್ತು.