ಉಡುಪಿ: ಕೇರಳ (Kerala) ಸಿಎಂ ವಿ.ಡಿ. ಸತೀಶನ್ (V. D. Satheesan) ಅವರು ಇಂದು (ಜು.11) ಮುಂಜಾನೆ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರಕ್ಕೆ (Kollur Sri Mookambika Devi Temple) ಭೇಟಿ ನೀಡಿ, ದೇವಿಯ ದರ್ಶನ ಪಡೆದರು.
Z-ಪ್ಲಸ್ ಭದ್ರತೆಯಲ್ಲಿ ಅವರು ದೇವಸ್ಥಾನಕ್ಕೆ ಆಗಮಿಸಿದ್ದರು. ಮುಂಜಾನೆಯೇ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು. ಬಳಿಕ ದೇವಾಲಯದ ಆಡಳಿತ ಮಂಡಳಿ ವತಿಯಿಂದ ಅವರಿಗೆ ಗೌರವ ಸಲ್ಲಿಸಲಾಯಿತು. ಇದನ್ನೂ ಓದಿ: ʻವಿಜಯʼದ ಪ್ರತೀಕವಾಗಿ ಕೊಲ್ಲೂರು ಮೂಕಾಂಬಿಕೆಗೆ 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ಸಿಎಂ

ಸತೀಶನ್ ಅವರು ಸಿಎಂ ಆದ ಬಳಿಕ ಮೊದಲ ಭೇಟಿ ಇದಾಗಿದೆ. ಅವರು ಕೊಲ್ಲೂರು ಮೂಕಾಂಬಿಕೆಯ ಅಪಾರ ಭಕ್ತರಾಗಿದ್ದಾರೆ.
ಪೂಜೆ ಬಳಿಕ ಮಂಗಳೂರು ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು. ಸತೀಶನ್ ಅವರು ಆಗಮಿಸಿದ್ದ ಹಿನ್ನೆಲೆ ಕ್ಷೇತ್ರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಇದನ್ನೂ ಓದಿ: ಮೂಕಾಂಬಿಕೆ ಸನ್ನಿಧಿಗೆ ಸಿಎಂ ವಿಜಯ್ : ಎಂಜಿಆರ್, ಜಯಲಲಿತಾ ಕೊಲ್ಲೂರಿಗೆ ನೀಡಿದ್ದೇನು?
