ತಿರುವನಂತಪುರಂ: ಶ್ರೀಲಂಕಾದ ಸರಣಿ ಬಾಂಬ್ ಸ್ಫೋಟದ ನಂತರ ಲಕ್ಷದ್ವೀಪಕ್ಕೆ 15 ಐಸಿಸ್ ಉಗ್ರರು ಬರುತ್ತಿದ್ದಾರೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ಬೆನ್ನಲ್ಲೇ ಕೇರಳದ ಕರಾವಳಿ ಭಾಗದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
15 ಜನ ಇಸ್ಲಾಮಿಕ್ ಸ್ಟೇಟ್ ಉಗ್ರರು ಶ್ರೀಲಂಕಾದಿಂದ ಬಿಳಿ ಬಣ್ಣದ ದೋಣಿಯಲ್ಲಿ ಲಕ್ಷದ್ವೀಪದ ಕಡೆ ತೆರಳುತ್ತಿದ್ದಾರೆ. ಅವರು ಲಕ್ಷದ್ವೀಪದಲ್ಲಿ ಇದ್ದುಕೊಂಡು ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಬಹುದು ಎಂಬ ಭಾರತೀಯ ಗುಪ್ತಚರ ಇಲಾಖೆಯ ಮಾಹಿತಿ ಮೇರೆಗೆ ಕರಾವಳಿ ತೀರದಲ್ಲಿ ಹೈ ಅಲರ್ಟ್ ಘೋಷಣೆಯಾಗಿದೆ. ಮಾರ್ಚ್ 23 ರಂದು ಶ್ರೀಲಂಕಾ ಈ ಸೂಚನೆ ನೀಡಿದ ಬೆನ್ನಲ್ಲೇ ಕೇರಳದ ಕೋಸ್ಟಲ್ ಪೊಲೀಸ್ ಈ ಮಾಹಿತಿಯನ್ನು ಬಹಿರಂಗ ಪಡಿಸಿದೆ.
Advertisement
Advertisement
ಶ್ರೀಲಂಕಾದಲ್ಲಿ ಏಪ್ರಿಲ್ 21 ರಂದು ನಡೆದ ಸರಣಿ ಬಾಂಬ್ ಸ್ಫೋಟದ ನಂತರ ನಾವು ಕರಾವಳಿ ಪ್ರದೇಶದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಅನುಮಾನಾಸ್ಪದ ಚಟುವಟಿಕೆಗಳು ಕರಾವಳಿ ಪ್ರದೇಶದಲ್ಲಿ ಕಂಡು ಬಂದರೆ ತಕ್ಷಣ ಪೊಲೀಸರಿಗೆ ತಿಳಿಸುವಂತೆ ಮೀನುಗಾರರಿಗೆ ಸೂಚನೆ ನೀಡಲಾಗಿದೆ.
Advertisement
ಸಮುದ್ರದಲ್ಲಿ ಯಾವುದೇ ರೀತಿಯ ಅನುಮಾನಾಸ್ಪದ ಹಡಗುಗಳು ಕಂಡಬಂದರೆ ಆದರ ಬಗ್ಗೆ ಎಚ್ಚರಿಕೆ ವಹಿಸುವಂತೆ ಕರಾವಳಿ ಪೊಲೀಸ್ ಠಾಣೆಗೆ ಸೂಚನೆ ನೀಡಲಾಗಿದೆ.
Advertisement
Indian Coast Guard has deployed its ships and maritime surveillance aircraft around the Lakshadweep and Minicoy Islands territory and borders with Sri Lanka in an operation to thwart any attempt by the ISIS terrorists to enter Indian waters. pic.twitter.com/Pw74Xby3LB
— ANI (@ANI) May 26, 2019
ಶ್ರೀಲಂಕಾದಲ್ಲಿ ಚರ್ಚ್ ಮತ್ತು ಹೋಟೆಲ್‍ಗಳು ಸೇರಿ ಎಂಟು ಕಡೆಯಲ್ಲಿ ಸರಣಿ ಅತ್ಮಾಹುತಿ ಬಾಂಬ್ ಸ್ಫೋಟಿಸಲಾಗಿತ್ತು. ಈ ಬಾಂಬ್ ದಾಳಿಯಲ್ಲಿ ಕನ್ನಡಿಗರೂ ಸೇರಿ 250 ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದರು. ಈ ದಾಳಿಯ ಹೊಣೆಯನ್ನು ಇದೇ ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆ ಹೊತ್ತುಕೊಂಡಿತ್ತು.