ತಿರುವನಂತಪುರಂ: ಕೇರಳದ ಮಹಿಳಾ ಪೊಲೀಸ್ ಅಧಿಕಾರಿ ಸೌಮ್ಯಾ ಪುಷ್ಪಕರಣ್ ಅವರನ್ನು ಹತ್ಯೆ ಮಾಡಿದ್ದ ಆರೋಪಿಯೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.
ಅಜಾಝ್(34) ಮೃತ ಆರೋಪಿ. ಈತ ಪೊಲೀಸ್ ಪೇದೆಯಾಗಿದ್ದನು. ಜೂನ್ 15 ರಂದು ವಲ್ಲಿಕುನ್ನಂ ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಮಹಿಳಾ ಪೊಲೀಸ್ ಅಧಿಕಾರಿ ಸೌಮ್ಯ ಪುಷ್ಕರನ್ ಕೆಲಸ ಮುಗಿಸಿ ಮನೆಗೆ ಬರುವಾಗ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿದ್ದನು.
ಈ ಘಟನೆ ವೇಳೆ ಆರೋಪಿಗೂ ಬೆಂಕಿ ತಗುಲಿದ್ದು, ಶೇ.50 ರಷ್ಟು ಭಾಗ ಆತನ ದೇಹವೂ ಸುಟ್ಟುಹೋಗಿತ್ತು. ತಕ್ಷಣವೇ ಸ್ಥಳೀಯರು ಆತನನ್ನು ಅಲಪ್ಪುಳ ವೈದ್ಯಕೀಯ ಕಾಲೇಜಿಗೆ ದಾಖಲಿಸಿ, ಐಸಿಯುನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅಜಾಝ್ ಬುಧವಾರ ಸಂಜೆ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೊಲೆ:
ಸೌಮ್ಯಾ ಅವರು ಜೂನ್ 15 ಶನಿವಾರ ಕೆಲಸ ಮುಗಿಸಿ ಬೈಕ್‍ನಲ್ಲಿ ಮನೆಗೆ ಹೋಗುತ್ತಿದ್ದರು. ಈ ವೇಳೆ ಕಾರಿನಲ್ಲಿ ಬಂದ ಅಜಾಝ್ ಸೌಮ್ಯಾ ಬೈಕ್‍ಗೆ ಗುದ್ದಿ ಕೆಳಗೆ ಬೀಳಿಸಿದ್ದ. ಅಜಾಝ್ ತನ್ನನ್ನು ಕೊಲೆ ಮಾಡಲು ಬಂದಿದ್ದಾನೆ ಎಂದು ಅರಿತ ಸೌಮ್ಯಾ ಓಡಲು ಆರಂಭಿಸಿದ್ದರು. ತಕ್ಷಣವೇ ಹಿಂಬಾಲಿಸಿದ ಆರೋಪಿ, ಚಾಕುನಿಂದ ಇರಿದು, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದನು. ಗಂಭೀರವಾಗಿ ಗಾಯಗೊಂಡಿದ್ದ ಸೌಮ್ಯಾ ಸ್ಥಳದಲ್ಲಿಯೇ ಮೃತಪಟ್ಟಿದ್ದರು.
ಮೂರು ವರ್ಷದ ಸ್ನೇಹ:
ಸೌಮ್ಯಾ ಅಜಾಝ್‍ನನ್ನು ತಿಸ್ಸೂರ್ ಪೊಲೀಸ್ ಅಕಾಡೆಮಿಯಲ್ಲಿ ತರಬೇತಿಯ ಸಂದರ್ಭದಲ್ಲಿ ಭೇಟಿಯಾಗಿದ್ದರು. ನಂತರ ಫೇಸ್‍ಬುಕ್‍ನಲ್ಲಿ ಗೆಳೆತನವಾಗಿತ್ತು. ಈ ಮೂಲಕ ಇಬ್ಬರ ಮಧ್ಯೆ ಕಳೆದ ಮೂರು ವರ್ಷಗಳಿಂದ ಸ್ನೇಹವಿತ್ತು. ಅಜಾಝ್ ಸ್ನೇಹದ ಬಗ್ಗೆ ಸೌಮ್ಯಾರ ತಾಯಿ ಇಂದಿರಾಗೆ ಮಾತ್ರ ಗೊತ್ತಿತ್ತು. ಅಷ್ಟೇ ಅಲ್ಲದೆ ಅವರಿಬ್ಬರ ಮಧ್ಯೆ ಹಣಕಾಸಿನ ವ್ಯವಹಾರ ಕೂಡ ನಡೆದಿದ್ದವು ಎಂದು ಸಬ್ ಇನ್ಸ್‌ಪೆಕ್ಟರ್ ಮಾಹಿತಿ ನೀಡಿದ್ದರು.
ಸೌಮ್ಯಾ ಅವರ ಪತಿ ವಿದೇಶದಲ್ಲಿ ಕೆಲಸ ಮಾಡುತ್ತಿದ್ದರಿಂದ ತಾಯಿ ಹಾಗೂ ಮೂವರು ಮಕ್ಕಳ ಜೊತೆಗೆ ವಾಸಿಸುತ್ತಿದ್ದರು. ಹೀಗಾಗಿ ಸೌಮ್ಯಾ ತಾಯಿಯೊಂದಿಗೆ ತನ್ನ ಜೀವನದ ಎಲ್ಲಾ ವಿಚಾರಗಳನ್ನು ಹೇಳಿಕೊಳ್ಳುತ್ತಿದ್ದಳು. ಈ ಮಧ್ಯೆ ಅಜಾಝ್ ಸೌಮ್ಯಾರನ್ನು ವಿವಾಹವಾಗಬೇಕೆಂದು ಆಸೆಪಟ್ಟು, ಪತಿ ಮತ್ತು ಮಕ್ಕಳನ್ನು ಬಿಟ್ಟು ಬರುವಂತೆ ಪೀಡಿಸುತ್ತಿದ್ದ. ಈ ಸ್ನೇಹ ತನ್ನ ಜೀವನಕ್ಕೆ ಮುಳುವಾಗುತ್ತದೆ ಎಂದು ಅರಿತ ಸೌಮ್ಯಾ ಅವರು ಅಜಾಝ್‍ನಿಂದ ದೂರವಿರಲು ಯತ್ನಿಸಿದ್ದರು ಎಂದು ಸೈಜು ಇಬ್ರಾಹಿಂ ಹೇಳಿದ್ದರು.
ವಾಟ್ಸಪ್ ನಂಬರ್ ಬ್ಲಾಕ್:
ಅಜಾಝ್ ಮಾತ್ರ ಸೌಮ್ಯಾರನ್ನು ಮದುವೆಯಾಗಲೇಬೇಕು ಎಂದು ನಿರ್ಧರಿಸಿದ್ದ. ಈ ವಿಚಾರವಾಗಿ ಇಬ್ಬರ ಮಧ್ಯೆ ಮನಸ್ತಾಪ ಉಂಟಾಗಿ ಸೌಮ್ಯಾ ಅಜಾಝ್‍ನ ವಾಟ್ಸಪ್ ನಂಬರ್ ಅನ್ನು ಬ್ಲಾಕ್ ಮಾಡಿದ್ದರು. ಅಷ್ಟೇ ಅಲ್ಲದೆ ಆತನ ಮೊಬೈಲ್ ಕರೆಗಳನ್ನು ನಿರಾಕರಿಸಿದ್ದರು. ಇದರಿಂದ ಕೋಪಗೊಂಡ ಅಜಾಝ್ ಕೊಲೆ ಮಾಡಿ ಬೆಂಕಿ ಹಚ್ಚಿದ್ದನು. ಬಳಿಕ ಆತನು ಕೂಡ ಆತ್ಮಹತ್ಯೆಗೆ ಯತ್ನಿಸಿದ್ದ ಎಂದು ಸೈಜು ಇಬ್ರಾಹಿಂ ಹೇಳಿದ್ದಾರೆ.
[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]